IPL ಟ್ರೋಫಿ ಗೆಲ್ಲಲು ಸನ್‌ರೈಸರ್ಸ್‌ ಮಾಸ್ಟರ್ ಪ್ಲಾನ್; ಚಾಂಪಿಯನ್ ನಾಯಕನಿಗೆ ಪಟ್ಟ ಕಟ್ಟಿದ ಆರೆಂಜ್ ಆರ್ಮಿ..!

First Published Mar 4, 2024, 12:57 PM IST

ಹೈದರಾಬಾದ್: ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದೀಗ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಮುಂಬರುವ ಐಪಿಎಲ್ ಟೂರ್ನಿಗೆ ಹೊಸ ನಾಯಕನನ್ನು ಘೋಷಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋ

ಭಾರತದ ಚುಟುಕು ಕ್ರಿಕೆಟ್ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೇ ಮಾರ್ಚ್ 22ರಂದು ಆರಂಭವಾಗಲಿದ್ದು, ಚೆನ್ನೈನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಇನ್ನು 2016ರ ಬಳಿಕ ಮತ್ತೊಮ್ಮೆ ಕಪ್‌ ಗೆಲ್ಲಲು ಸಾಕಷ್ಟು ಕಸರತ್ತು ನಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡವು ಇದೀಗ ಸಾಕಷ್ಟು ಅಳೆದು ತೂಗಿ ಮುಂಬರುವ ಐಪಿಎಲ್ ಟೂರ್ನಿಗೆ ತನ್ನ ತಂಡದ ನಾಯಕನನ್ನಾಗಿ ಪ್ಯಾಟ್ ಕಮಿನ್ಸ್‌ ಅವರನ್ನು ನೇಮಕ ಮಾಡಿದೆ.

ಹೌದು, 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ನಾಯಕ ಪ್ಯಾಟ್ ಕಮಿನ್ಸ್, ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ಇದೀಗ ಅಧಿಕೃತವಾಗಿ ಘೋಷಿಸಿದೆ.

ಕಳೆದ ವರ್ಷ ಐಸಿಸಿ ಟೆಸ್ಟ್ ವಿಶ್ವಚಾಂಪಿಯನ್‌ಶಿಪ್ ಹಾಗೂ ಐಸಿಸ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಪ್ಯಾಟ್ ಕಮಿನ್ಸ್‌, ಇದೀಗ ಆರೆಂಜ್‌ ಆರ್ಮಿಯನ್ನು ಐಪಿಎಲ್ ಚಾಂಪಿಯನ್ ಮಾಡುವ ಗುರಿ ಹೊತ್ತಿದ್ದಾರೆ.

ಕಳೆದ ಡಿಸೆಂಬರ್ 19ರಂದು ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಫ್ರಾಂಚೈಸಿಯು ಬರೋಬ್ಬರಿ 20.50 ಕೋಟಿ ರುಪಾಯಿ ನೀಡಿ ಪ್ಯಾಟ್ ಕಮಿನ್ಸ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು.

ಈ ಮೂಲಕ ಐಪಿಎಲ್ ಹರಾಜಿನ ಇತಿಹಾಸದಲ್ಲೇ ಪ್ಯಾಟ್ ಕಮಿನ್ಸ್‌ ಎರಡನೇ ಅತಿ ದುಬಾರಿ ಐಪಿಎಲ್ ಆಟಗಾರ ಎನಿಸಿಕೊಂಡಿದ್ದರು. ಇನ್ನು ಆಸೀಸ್ ಸಹ ಆಟಗಾರ ಮಿಚೆಲ್ ಸ್ಟಾರ್ಕ್(24.75) ಐಪಿಎಲ್‌ನ ದುಬಾರಿ ಆಟಗಾರ ಎನಿಸಿಕೊಂಡಿದ್ದು, ಕೆಕೆಆರ್ ತಂಡದ ಪಾಲಾಗಿದ್ದಾರೆ.

ಇದೀಗ ಏಯ್ಡನ್ ಮಾರ್ಕ್‌ರಮ್ ಅವರ ಬದಲು ಕಮಿನ್ಸ್ ಆರೆಂಜ್ ಆರ್ಮಿಯನ್ನು ಮುನ್ನಡೆಸಲಿದ್ದಾರೆ. ಮಾರ್ಚ್‌ 23ರಂದು ಸನ್‌ರೈಸರ್ಸ್ ಹೈದರಾಬಾದ್ ತಂಡವು ಐತಿಹಾಸಿಕ ಈಡನ್‌ ಗಾರ್ಡನ್ಸ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ತಂಡವು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. 

ಇದೀಗ ಸಾಕಷ್ಟು ಯುವ ಹಾಗೂ ಅನುಭವಿ ಆಟಗಾರರನ್ನು ಒಳಗೊಂಡಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡವು ಈ ಬಾರಿ ಭರ್ಜರಿ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.

click me!