IPL 2024: CSK ಪರ ಧೋನಿಯ ಸಾರ್ವಕಾಲಿಕ ದಾಖಲೆ ಸರಿಗಟ್ಟಿದ ಜಡ್ಡು..!

First Published | Apr 9, 2024, 1:45 PM IST

ಚೆನ್ನೈ: ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಲ್ರೌಂಡರ್ ರವೀಂದ್ರ ಜಡೇಜಾ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿದ್ದ ದಾಖಲೆ ಸರಿಗಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸೋಮವಾರ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ದಾಖಲೆ ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್‌ ತಂಡವು 7 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

Tap to resize

ಇದೀಗ ರವೀಂದ್ರ ಜಡೇಜಾ ಹಾಗೂ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ 15 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸಿದ ಸಾಧನೆ ಮಾಡಿದ್ದಾರೆ.

ಇನ್ನುಳಿದಂತೆ ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ(12),ಋತುರಾಜ್ ಗಾಯಕ್ವಾಡ್(10), ಮೈಕೆಲ್ ಹಸ್ಸಿ ಚೆನ್ನೈ ಸೂಪರ್ ಕಿಂಗ್ಸ್ ಪರ 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

ಬಲಿಷ್ಠ ಬ್ಯಾಟರ್‌ಗಳನ್ನೊಳಗೊಂಡ ಕೋಲ್ಕತಾ ನೈಟ್ ರೈಡರ್ಸ್ ಎದುರು ಜಡೇಜಾ ಶಿಸ್ತುಬದ್ದ ದಾಳಿ ನಡೆಸಿ ಸಿಎಸ್‌ಕೆ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಜಡ್ಡು 4 ಓವರ್ ಬೌಲಿಂಗ್ ಮಾಡಿ ಕೇವಲ 18 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.

ಕೋಲ್ಕತಾ ನೈಟ್ ರೈಡರ್ಸ್‌ನ ಸ್ಪೋಟಕ ಬ್ಯಾಟರ್‌ಗಳಾದ ಸುನಿಲ್ ನರೈನ್, ಅಂಗ್‌ಕ್ರಿಷ್ ರಘುವಂಶಿ ಹಾಗೂ ವೆಂಕಟೇಶ್ ಅಯ್ಯರ್ ಅವರನ್ನು ಸ್ಪಿನ್ನರ್ ಜಡೇಜಾ ಪೆವಿಲಿಯನ್ನಿಗಟ್ಟಿದರು. 

ಜಡೇಜಾ ಪ್ರಮುಖ ವಿಕೆಟ್ ಕಬಳಿಸಿದ್ದರಿಂದ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಗಳಿಸಲಷ್ಟೇ ಶಕ್ತವಾಗಿತು. ಈ ಗುರಿ ಬೆನ್ನತ್ತಿದ ಸಿಎಸ್‌ಕೆ ಋತುರಾಜ್ ಗಾಯಕ್ವಾಡ್ ಭರ್ಜರಿ ಅರ್ಧಶತಕದ ನೆರವಿನಿಂದ ಇನ್ನೂ 14 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.

Latest Videos

click me!