RCB ಏನನ್ನೂ ಗೆದ್ದಿಲ್ಲ ಆದ್ರೆ ಎಲ್ಲವನ್ನೂ ಗೆದ್ದಂತೆ ವರ್ತಿಸುತ್ತಾರೆ: ಗೌತಮ್ ಗಂಭೀರ್

First Published Mar 29, 2024, 6:07 PM IST

ಬೆಂಗಳೂರು: ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್, ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕುರಿತಾಗಿ ನೀಡಿದ್ದ ಹೇಳಿಕೆಯೊಂದು ಸಾಕಷ್ಟು ವೈರಲ್ ಆಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ.

ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಆರ್‌ಸಿಬಿ-ಕೆಕೆಆರ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ, ಈ ಹಿಂದೆ ಗೌತಮ್ ಗಂಭೀರ್, ಆರ್‌ಸಿಬಿ ತಂಡದ ಬಗ್ಗೆ ಮಾತನಾಡಿದ್ದ ಹಳೆಯ ವಿಡಿಯೋವೀಗ ಮತ್ತೆ ವೈರಲ್ ಆಗಲಾರಂಭಿಸಿದೆ.

ಬಹುಶಃ ಆರ್‌ಸಿಬಿ ಎರಡನೇ ಅತ್ಯಂತ ಹೈ ಪ್ರೊಫೈಲ್ ತಂಡವಾಗಿದೆ. ತಂಡದ ಮಾಲೀಕರು ಹಾಗೂ ತಂಡ ಕೂಡಾ ಹಾಗೆ ಇದೆ. ಕ್ರಿಸ್ ಗೇಲ್, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಅವರಂತಹ ಆಟಗಾರರು ಈ ತಂಡದಲ್ಲಿದ್ದಾರೆ.

ಸತ್ಯ ಹೇಳಬೇಕೆಂದರೆ ಈ ತಂಡ ಏನನ್ನೂ ಗೆದ್ದಿಲ್ಲ. ಆದರೆ ಅವರು ಎಲ್ಲವನ್ನು ಗೆದ್ದಂತೆ ವರ್ತಿಸುತ್ತಾರೆ. ಆ ರೀತಿಯ ಮನೋಭಾವ ಅವರಿಗಿದೆ. ಅದನ್ನು ನಾನು ಒಪ್ಪುವುದಿಲ್ಲ. ಬಹುಶಃ ಕೆಕೆಆರ್ ಜಯಿಸಿದ ಮೂರು ಅವಿಸ್ಮರಣೀಯ ಗೆಲುವುಗಳು ಆರ್‌ಸಿಬಿ ವಿರುದ್ದವೇ ಆಗಿದೆ ಎಂದು ಗಂಭೀರ್ ಹೇಳಿದ್ದಾರೆ.

ನನ್ನ ಕ್ರಿಕೆಟ್ ಬದುಕಿನಲ್ಲಿ ಯಾವಾಗಲು ಬಯಸುವುದೇನೆಂದರೆ, ಮೈದಾನಕ್ಕಿಳಿದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸುವುದೇ ಆಗಿರುತ್ತದೆ ಎಂದು ಗಂಭೀರ್ ಹೇಳಿದ್ದಾರೆ.

2015ರ ಬಳಿಕ ಚಿನ್ನಸ್ವಾಮಿಯಲ್ಲಿ ಕೆಕೆಆರ್‌ ವಿರುದ್ಧ ಗೆದ್ದಿಲ್ಲ ಆರ್‌ಸಿಬಿ!

ಆರ್‌ಸಿಬಿ ತಂಡ ಕೆಕೆಆರ್‌ ವಿರುದ್ಧ 2015ರ ನಂತರ ಒಂದೂ ಪಂದ್ಯದಲ್ಲಿ ಗೆದ್ದಿಲ್ಲ. 2015ರ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡ ಕೋಲ್ಕತಾವನ್ನು ಸೋಲಿಸಿತ್ತು. 
 

2015ರ ಬಳಿಕ 2016, 2017, 2018, 2019 ಹಾಗೂ 2023ರಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಕೆಕೆಆರ್‌ಗೆ ಆರ್‌ಸಿಬಿ ಶರಣಾಗಿದೆ. ಈ ಬಾರಿ ಸೋಲಿನ ಸರಪಳಿ ಕಳಚಳು ಕಾಯುತ್ತಿದೆ.
 

click me!