IPL 2024: ಚೊಚ್ಚಲ ಐಪಿಎಲ್ ಆಡಲಿರುವ ಈ ಐವರ ಮೇಲೆ ಕಣ್ಣಿಡಿ..!

First Published | Mar 11, 2024, 4:19 PM IST

ಬೆಂಗಳೂರು: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿರುವ ಈ ಆಟಗಾರರ ಮೇಲೆ ನೀವೊಂದು ಕಣ್ಣಿಡಿ.
 

ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ 17ನೇ ಆವೃತ್ತಿಗೆ ಕಾಲಿಟ್ಟಿದೆ. ಇದೇ ಮಾರ್ಚ್ 22ರಿಂದ 2024ರ ಐಪಿಎಲ್ ಟೂರ್ನಿ ಆರಂಭವಾಗಲಿದೆ.

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

Latest Videos


ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು, ಗುಜರಾತ್ ಟೈಟಾನ್ಸ್ ತಂಡವನ್ನು ರೋಚಕವಾಗಿ ಮಣಿಸಿ 5ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಇನ್ನು ಕಳೆದ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು ಸಾಕಷ್ಟು ಅಳೆದುತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಹಲವು ಕ್ರಿಕೆಟಿಗರು ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಯಾರವರು ನೋಡೋಣ ಬನ್ನಿ
 

1.  ಸಮೀರ್ ರಿಜ್ವಿ:

ಸ್ಪೋಟಕ ಬ್ಯಾಟರ್ ರಿಜ್ವಿಯನ್ನು 'ಬಲಗೈ ಸುರೇಶ್ ರೈನಾ' ಎಂದೂ ಕರೆಯಲಾಗುತ್ತೆ. ಕೇವಲ 20 ವರ್ಷದ ಸಮೀರ್ ರಿಜ್ವಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 8.40 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು.
 

2. ಶಾಯ್ ಹೋಪ್:

ವೆಸ್ಟ್ ಇಂಡೀಸ್ ತಂಡದ ಅನುಭವಿ ಬ್ಯಾಟರ್ ಶಾಯ್ ಹೋಪ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು 75 ಲಕ್ಷ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಹೋಪ್ ಮೇಲೆ ಕ್ಯಾಪಿಟಲ್ಸ್‌ಗೆ ಸಾಕಷ್ಟು ನಿರೀಕ್ಷೆಗಳಿವೆ.
 

3. ಶುಭಂ ದುಬೆ:

ವಿದರ್ಭ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಶುಭಂ ದುಬೆ ಅವರನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಬರೋಬ್ಬರಿ 5.80 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ದುಬೆ ಐಪಿಎಲ್‌ನಲ್ಲಿ ಮಿಂಚು ಹರಿಸಲು ಸಜ್ಜಾಗಿದ್ದಾರೆ.
 

4. ಅಝ್ಮತುಲ್ಲಾ ಓಮರ್‌ಝೈ

ಆಫ್ಘಾನಿಸ್ತಾನ ತಂಡದ ಸ್ಟಾರ್ ಆಲ್ರೌಂಡರ್ ಓಮರ್‌ಝೈ ಕಳೆದ ವರ್ಷ ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಇದೀಗ ಆಫ್ಘಾನ್ ಆಟಗಾರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಓಮರ್‌ಝೈ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
 

5. ರಚಿನ್ ರವೀಂದ್ರ:

ನ್ಯೂಜಿಲೆಂಡ್ ಆಲ್ರೌಂಡರ್ ರಚಿನ್ ರವೀಂದ್ರ, ಸದ್ಯ ಭರ್ಜರಿ ಲಯದಲ್ಲಿದ್ದು, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಚೊಚ್ಚಲ ಐಪಿಎಲ್ ಆಡಲು ಸಜ್ಜಾಗಿದ್ದಾರೆ. ರಚಿನ್ ರವೀಂದ್ರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
 

click me!