ಅಹಮದಾಬಾದ್: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್‌ನಲ್ಲಿಂದು ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಹೀಗಿರುವಾಗಲೇ ಟಿಮ್ ಡೇವಿಡ್ ಅವರ ಕುರಿತಂತೆ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.
ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.
28
ರಜತ್ ಪಾಟೀದಾರ್ ನಾಯಕತ್ವದಲ್ಲಿ ಆರ್‌ಸಿಬಿ ತಂಡವು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ತೋರಿ ಫೈನಲ್ ಪ್ರವೇಶಿಸಿದೆ. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಪ್ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
38
ಹಾಗಂತ ಈ ಸಲದ ಐಪಿಎಲ್ ಟ್ರೋಫಿ ಗೆಲ್ಲುವುದು ಅಷ್ಟು ಸುಲಭದ ಮಾತಲ್ಲ. ಯಾಕೆಂದರೆ ಆರ್‌ಸಿಬಿ ಎದುರಿಸುತ್ತಿರುವುದು ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವನ್ನು. ಕಳೆದ ವರ್ಷ ಶ್ರೇಯಸ್ ಅಯ್ಯರ್ ದಶಕದ ಬಳಿಕ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದು ಯಾರು ಮರೆತಿಲ್ಲ.
48
ಶ್ರೇಯಸ್ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ಹೀಗೆ ಐಪಿಎಲ್‌ನಲ್ಲಿ ಮೂರು ತಂಡಗಳನ್ನು ಫೈನಲ್‌ಗೇರಿಸಿದ ಏಕೈಕ ನಾಯಕ ಎನ್ನುವ ಹಿರಿಮೆ ಹೊಂದಿದ್ದಾರೆ.
58
ಹೀಗಾಗಿ ಆರ್‌ಸಿಬಿ ತಂಡವು ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಎದುರು ನೋಡುತ್ತಿದೆ. ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ಮಾಧ್ಯಮದವರು ಟಿಮ್ ಡೇವಿಡ್ ಫೈನಲ್ ಮ್ಯಾಚ್ ಆಡ್ತಾರಾ ಎಂದು ಪಾಟೀದಾರ್ ಅವರನ್ನು ಪ್ರಶ್ನಿಸಿದ್ದಾರೆ.
68
ಸ್ನಾಯುಸೆಳೆತಕ್ಕೆ ಒಳಗಾಗಿರುವ ಟಿಮ್ ಡೇವಿಡ್ ಕಳೆದೆರಡು ಐಪಿಎಲ್ ಪಂದ್ಯಗಳನ್ನಾಡಿಲ್ಲ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಜತ್ ಪಾಟೀದಾರ್, ಇಲ್ಲಿಯವರೆಗೆ ಟಿಮ್ ಡೇವಿಡ್ ಬಗ್ಗೆ ನನಗ್ಯಾವ ಐಡಿಯಾವೂ ಇಲ್ಲ. ಡಾಕ್ಟರ್ ಈ ಬಗ್ಗೆ ನಿಗಾಯಿಟ್ಟಿದ್ದು, ಸದ್ಯದಲ್ಲೇ ಮಾಹಿತಿ ಸಿಗಲಿದೆ ಎಂದು ಹೇಳಿದ್ದಾರೆ.
78
ಟಿಮ್ ಡೇವಿಡ್ ಆರ್‌ಸಿಬಿ ತಂಡದ ಪರ ಸ್ಪೋಟಕ ಇನ್ನಿಂಗ್ಸ್ ಆಡುವ ಮೂಲಕ ಆಸರೆಯಾಗಿದ್ದಾರೆ. ಮ್ಯಾಚ್ ಫಿನಿಶಿಂಗ್ ಪಾತ್ರವನ್ನು ಟಿಮ್ ಡೇವಿಡ್ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.
88
ಟಿಮ್ ಡೇವಿಡ್ ಅನುಪಸ್ಥಿತಿಯಲ್ಲಿ ಲಿಯಾಮ್ ಲಿವಿಂಗ್‌ಸ್ಟನ್, ಲಖನೌ ಎದುರಿನ ಪಂದ್ಯಕ್ಕೆ ಕಣಕ್ಕಿಳಿದಿದ್ದರು. ಆದರೆ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದರು. ಹೀಗಾಗಿ ಪಂಜಾಬ್ ಎದುರಿನ ಫೈನಲ್‌ನಲ್ಲಿ ಟಿಮ್ ಡೇವಿಡ್ ಫೈನಲ್‌ಗೆ ತಂಡ ಕೂಡಿಕೊಂಡರೇ ಮತ್ತಷ್ಟು ಬಲ ಬರಲಿದೆ