ಇಂಗ್ಲೆಂಡ್‌ನಲ್ಲಿ ಐಪಿಎಲ್ 2025: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ 18ನೇ ಆವೃತ್ತಿಯ ಐಪಿಎಲ್ ಪಂದ್ಯಗಳು ಸ್ಥಗಿತಗೊಂಡಿವೆ. ಉಳಿದ ಪಂದ್ಯಗಳನ್ನು ಒಂದು ವಾರದವರೆಗೆ ಸ್ಥಗಿತಗೊಳಿಸಲಾಗಿದೆ. ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅರ್ಧಕ್ಕೆ ಸ್ಥಗಿತಗೊಂಡಿದೆ. ಇಸಿಬಿ ಉಳಿದ ಪಂದ್ಯಗಳನ್ನು ಆಯೋಜಿಸಲು ಮುಂದಾಗಿದೆ.
26
ಐಪಿಎಲ್ 2025ರ ಉಳಿದ ಪಂದ್ಯಗಳು ಇಂಗ್ಲೆಂಡ್/ವೇಲ್ಸ್‌ನಲ್ಲಿ?
ಇಸಿಬಿ, ಐಪಿಎಲ್ 2025ರ ಉಳಿದ ಪಂದ್ಯಗಳನ್ನು ಇಂಗ್ಲೆಂಡ್/ವೇಲ್ಸ್‌ನಲ್ಲಿ ಆಯೋಜಿಸಲು ಮುಂದಾಗಿದೆ. ಇದಕ್ಕಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್, ಬಿಸಿಸಿಐಗೆ ಮುಕ್ತ ಆಫರ್ ನೀಡಿದೆ ಎಂದು ವರದಿಯಾಗಿದೆ.
36
ಬಿಸಿಸಿಐ ಮತ್ತು ಇಸಿಬಿ ನಡುವೆ ಮಾತುಕತೆ?
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದ ಐಪಿಎಲ್ ಸ್ಥಗಿತ. ಬಿಸಿಸಿಐ-ಇಸಿಬಿ ಪಂದ್ಯಾವಳಿ ಆಯೋಜನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ಐಪಿಎಲ್ ಮುಗಿಯುತ್ತಿದ್ದಂತೆಯೇ ಟೀಂ ಇಂಡಿಯಾ, 5 ಪಂದ್ಯಗಳ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಪ್ರವಾಸ ಮಾಡಲಿದೆ. ಹೀಗಾಗಿ ಅಲ್ಲೇ ಭಾರತೀಯ ಆಟಗಾರರು ಉಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ಇಸಿಬಿ ಆಫರ್ ನೀಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಐಪಿಎಲ್ 2025ರ ಅಂತಿಮ ಹಂತಕ್ಕೆ ಲೀಗ್ ಹಂತದಲ್ಲಿ 12 ಪಂದ್ಯಗಳು ಬಾಕಿ ಉಳಿದಿವೆ. ಇನ್ನು ಮೂರು ಪ್ಲೇ ಆಫ್ ಪಂದ್ಯಗಳು ಹಾಗೂ ಒಂದು ಫೈನಲ್ ಸೇರಿ ಒಟ್ಟು 16 ಪಂದ್ಯಗಳು ನಡೆಯಬೇಕಿದೆ.
56
ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್
58 ಲೀಗ್ ಪಂದ್ಯಗಳ ಮುಕ್ತಾಯದ ನಂತರ, ಗುಜರಾತ್ ಟೈಟಾನ್ಸ್, ಆರ್‌ಸಿಬಿ, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮುಂಚೂಣಿಯಲ್ಲಿವೆ.
66
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್
ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಉಳಿದ 3 ಪಂದ್ಯಗಳನ್ನು ಗೆದ್ದರೆ ಪ್ಲೇ ಆಫ್‌ಗೆ ಅರ್ಹತೆ ಪಡೆಯಬಹುದು. ಆರ್‌ಸಿಬಿ, ಗುಜರಾತ್ ಹಾಗೂ ಮುಂಬೈ ಬಹುತೇಕ ಪ್ಲೇ ಹೊಸ್ತಿಲಲ್ಲಿವೆ.