ಬೆಂಗಳೂರು: ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ದ ಆತಂಕ ಏರ್ಪಟ್ಟ ಬೆನ್ನಲ್ಲೇ ಇದೀಗ, 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ತಕ್ಷಣಕ್ಕೆ ಜಾರಿಗೆ ಬರುವಂತೆ ಶುಕ್ರವಾರವೇ ಸ್ಥಗಿತಗೊಳಿಸಲಾಗಿದೆ. ಹೀಗಿರುವಾಗಲೇ ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್, ಟೂರ್ನಿ ಆಯೋಜನೆ ಕುರಿತಂತೆ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಬಿಗಡಾಯಿಸಿದ್ದು, ಈಗಾಗಲೇ ಇಂಡೋ-ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇದರ ಶಾಕ್ ಇದೀಗ ಜಗತ್ತಿನ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಐಪಿಎಲ್‌ಗೂ ತಟ್ಟಿದೆ.
27
ಯುದ್ದಾತಂಕದ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ಆಯೋಜನೆಗೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇನ್ನು ಆರ್‌ಸಿಬಿ-ಲಖನೌ ನಡುವಿನ ಪಂದ್ಯಕ್ಕೂ ಮುನ್ನ ಮುನ್ನೆಚ್ಚರಿಕಾ ಕ್ರಮವಾಗಿ ಬಿಸಿಸಿಐ, 18ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಸ್ಥಗಿತ ಮಾಡಿದೆ.
37
ಭಾರತ-ಪಾಕಿಸ್ತಾನ ಯುದ್ಧ ಪರಿಸ್ಥಿತಿ ನಡುವೆ ಐಪಿಎಲ್ ಮುಂದುವರಿಸುವ ಬಗ್ಗೆ ಟೂರ್ನಿಯ ಮುಖ್ಯಸ್ಥ ಅರುಣ್ ಧುಮಾಲ್ ಪ್ರತಿಕ್ರಿಯೆ ನೀಡಿದ್ದು, ‘ಪರಿಸ್ಥಿತಿ ಅವಲೋಕಿಸಿ ಟೂರ್ನಿ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಕೇಂದ್ರ ಸರ್ಕಾರದಿಂದ ಈವರೆಗೂ ಯಾವುದೇ ನಿರ್ದೇಶನ ಬಂದಿಲ್ಲ. ಸದ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದಿದ್ದಾರೆ.
57
ಸಂಬಂಧಿತ ಅಧಿಕಾರಿಗಳು ಮತ್ತು ಪಾಲುದಾರರೊಂದಿಗೆ ಚರ್ಚಿಸಿ , ಮುಂದಿನ ಪರಿಸ್ಥಿತಿ ಹೇಗಿರಲಿದೆ ಎಂದು ಅವಲೋಕಿಸಿದ ನಂತರ ಹೊಸ ವೇಳಾಪಟ್ಟಿ ಮತ್ತು ಸ್ಥಳಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಪ್ರಕಟಿಸುತ್ತೇವೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅಧಿಕೃತ ಹೇಳಿಕೆ ನೀಡಿದ್ದಾರೆ.
67
Team Royal Challengers Bengaluru (Photo: IPL)
ಮಾರ್ಚ್ 22ರಿಂದ ಆರಂಭಗೊಂಡ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ-ಪಂಜಾಬ್ ಪಂದ್ಯವು ಸೇರಿದಂತೆ 58 ಪಂದ್ಯಗಳು ನಡೆದಿವೆ. ಲೀಗ್ ಹಂತದಲ್ಲಿ ಇನ್ನು 12 ಪಂದ್ಯಗಳು, ಪ್ಲೇ ಆಫ್ ಮೂರು ಹಾಗೂ ಫೈನಲ್ ಸೇರಿದಂತೆ ಇನ್ನು 16 ಪಂದ್ಯಗಳು ನಡೆಯುವುದು ಬಾಕಿ ಉಳಿದಿವೆ.
77
ಮೇ 25ಕ್ಕೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಫೈನಲ್ ಪಂದ್ಯವು ನಡೆಯಬೇಕಿತ್ತು. ಆದರೆ ಟೂರ್ನಿಯು ಒಂದು ವಾರಕ್ಕೆ ಸ್ಥಗಿತಗೊಂಡಿದ್ದರು, ಪುನರಾರಂಭವಾಗುವುದು ಮತ್ತಷ್ಟು ತಡವಾಗಬಹುದು ಎಂದು ವಿಶ್ಲೇಷಿಸಲಾಗಿದೆ.