19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಸನ್‌ರೈಸರ್ಸ್ ಹೈದರಾಬಾದ್ ಅಭಿಯಾನ ಎಲಿಮಿನೇಟರ್ ಪಂದ್ಯದಲ್ಲಿಯೇ ಕೊನೆಯಾಗಿದೆ. ಎಲಿಮಿನೇಟರ್ ಪಂದ್ಯದಲ್ಲೇ ಹೊರಬಿದ್ದ ಆರೆಂಜ್ ಆರ್ಮಿಗೆ ಬಿಸಿಸಿಐನಿಂದ ಸಿಗುವ ನಗದು ಬಹುಮಾನ ಎಷ್ಟು ಎಂದು ತಿಳಿಯೋಣ.
2026ರ ಐಪಿಎಲ್ ಟೂರ್ನಿಯ ಲೀಗ್ ಹಂತದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಪ್ಲೇ ಆಫ್‌ಗೆ ಎಂಟ್ರಿಕೊಟ್ಟಿದ್ದ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು, ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು 47 ರನ್‌ಗಳ ಸೋಲು ಅನುಭವಿಸುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ.
26
ಬೃಹತ್ ಮೊತ್ತ ಕಲೆಹಾಕಿದ ರಾಜಸ್ಥಾನ ರಾಯಲ್ಸ್
ಉಭಯ ತಂಡಗಳ ಪಾಲಿಗೆ ಈ ಎಲಿಮಿನೇಟರ್ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿತ್ತು. ಟಾಸ್ ಗೆದ್ದರೂ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಪ್ಯಾಟ್ ಕಮಿನ್ಸ್ ಪಡೆಗೆ ನುಂಗಲಾರದ ತುತ್ತಾಗಿ ಪರಿಣಮಿಸಿತು. ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 97 ರನ್ ಚಚ್ಚಿದರೆ, ಧ್ರುವ್ ಜುರೆಲ್ 21 ಎಸೆತಗಳಲ್ಲಿ 50 ರನ್ ಸಿಡಿಸಿದರು. ಅಂತಿಮವಾಗಿ ರಾಜಸ್ಥಾನ ರಾಯಲ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿತು.
36
ಆರ್ಚರ್ ದಾಳಿಗೆ ಸನ್‌ರೈಸರ್ಸ್ ಹೈದರಾಬಾದ್ ತಬ್ಬಿಬ್ಬು
ಇನ್ನು ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಜೋಫ್ರಾ ಆರ್ಚರ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಸನ್‌ರೈಸರ್ಸ್‌ನ ಯಾವೊಬ್ಬ ಬ್ಯಾಟರ್ 40+ ಬಾರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿತು.
6.5 ಕೋಟಿ ರುಪಾಯಿ ಬಹುಮಾನ ಗೆದ್ದ ಸನ್‌ರೈಸರ್ಸ್ ಹೈದರಾಬಾದ್
ಇನ್ನು ಎಲಿಮಿನೇಟರ್ ಪಂದ್ಯದಲ್ಲೇ ತನ್ನ ಅಭಿಯಾನ ಮುಗಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಸುಮಾರು 6.5 ಕೋಟಿ ರುಪಾಯಿ ನಗದು ಬಹುಮಾನ ಸಿಗಲಿದೆ ಎಂದು ವರದಿಯಾಗಿದೆ. ಕಳೆದ ಬಾರಿ ಕೂಡಾ ನಾಲ್ಕನೇ ಸ್ಥಾನ ಪಡೆದ ತಂಡವು ಆರೂವರೆ ಕೋಟಿ ರುಪಾಯಿ ನಗದು ಬಹುಮಾನ ಜೇಬಿಗಿಳಿಸಿಕೊಂಡಿತ್ತು.
56
ಕಳೆದ ಬಾರಿ 20 ಕೋಟಿ ಬಹುಮಾನ ಗೆದ್ದಿದ್ದ ಹಾಲಿ ಚಾಂಪಿಯನ್ ಆರ್‌ಸಿಬಿ
2025ರಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆದ ತಂಡಕ್ಕೆ 20 ಕೋಟಿ ರುಪಾಯಿ ನಗದು ಬಹುಮಾನ ಸಿಕ್ಕಿತ್ತು. ಈ ಬಾರಿ ಕೂಡಾ ಚಾಂಪಿಯನ್ ಆಗುವ ತಂಡಕ್ಕೆ 20 ಕೋಟಿ ರುಪಾಯಿ ನಗದು ಬಹುಮಾನ ಸಿಗಲಿದೆ. ಇನ್ನು ರನ್ನರ್-ಅಪ್ ತಂಡಕ್ಕೆ 12.5 ಕೋಟಿ ರುಪಾಯಿ ನಗದು ಬಹುಮಾನ ಸಿಗಲಿದೆ.
66
ಕಳೆದ ಬಾರಿ 47 ಕೋಟಿ ರುಪಾಯಿ ಬಹುಮಾನ ಪಡೆದುಕೊಂಡಿದ್ದ 4 ತಂಡಗಳು
ಕಳೆದ ಬಾರಿ ಪ್ಲೇ ಆಫ್ ಪ್ರವೇಶಿಸಿದ ನಾಲ್ಕು ತಂಡಗಳು ಸುಮಾರು 47 ಕೋಟಿ ರುಪಾಯಿ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದವು. ಈ ಬಾರಿ ಕೂಡಾ ಬಹುತೇಕ ಇಷ್ಟೇ ಹಣವನ್ನು ಆರ್‌ಸಿಬಿ, ಗುಜರಾತ್, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಪಡೆದುಕೊಳ್ಳಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.