ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗುವುದರೊಂದಿಗೆ ಯಶಸ್ವಿಯಾಗಿ ಮುಕ್ತಾವಾಗಿದೆ. ಇದರ ಬೆನ್ನಲ್ಲೇ ಕ್ರಿಕೆಟ್ ವೆಬ್‌ಸೈಟ್ ESPNCricinfo ಈ ಸೀಸನ್ ಸರ್ವಶ್ರೇಷ್ಠ ತಂಡವನ್ನು ಪ್ರಕಟಿಸಿದೆ.
2026ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡವು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಇದೀಗ ESPNCricinfo ಈ ಸೀಸನ್‌ನ ಶ್ರೇಷ್ಠ ಆಟಗಾರನ್ನೊಳಗೊಂಡ ತಂಡ ಆಯ್ಕೆ ಮಾಡಿದ್ದು, ಗಿಲ್ ಹಾಗೂ ಸಾಯಿ ಸುದರ್ಶನ್ ಅವರನ್ನು ಕೈಬಿಟ್ಟಿದೆ. ESPNCricinfo ಆಯ್ಕೆ ಮಾಡಿದ ತಂಡದಲ್ಲಿ ಯಾರೆಲ್ಲ ಇದ್ದಾರೆ ನೋಡೋಣ ಬನ್ನಿ.
26
ಆರಂಭಿಕರಾಗಿ ವೈಭವ್ ಸೂರ್ಯವಂಶಿ-ವಿರಾಟ್ ಕೊಹ್ಲಿ:
19ನೇ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆದ್ದ 15 ವರ್ಷದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಹಾಗೂ ಆರ್‌ಸಿಬಿಯ ರನ್ ಮಷೀನ್ ವಿರಾಟ್ ಕೊಹ್ಲಿ ಆರಂಭಿಕರಾಗಿ ಸರ್ವಶ್ರೇಷ್ಠ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
36
ಬಲಿಷ್ಠವಾಗಿದೆ ಮಧ್ಯಮ ಕ್ರಮಾಂಕ:
ಇನ್ನು ಮಧ್ಯಮ ಕ್ರಮಾಂಕದಲ್ಲಿ ನಂ.3ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಆರ್‌ಸಿಬಿಗೆ ಸತತ ಎರಡನೇ ಕಪ್ ಗೆದ್ದು ಕೊಟ್ಟ ನಾಯಕ ರಜತ್ ಪಾಟೀದಾರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಹೆನ್ರಿಚ್ ಕ್ಲಾಸೆನ್ ಕ್ರಮವಾಗಿ ನಾಲ್ಕು ಹಾಗೂ ಐದನೇ ಕ್ರಮಾಂಕದಲ್ಲಿ ಸ್ಥಾನ ಪಡೆದಿದ್ದಾರೆ.
ಆಲ್ರೌಂಡರ್‌ಗಳ ವಿಚಾರಕ್ಕೆ ಬಂದರೆ ಆರನೇ ಕ್ರಮಾಂಕದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ನಿತೀಶ್ ಕುಮಾರ್ ರೆಡ್ಡಿ, ಏಳನೇ ಕ್ರಮಾಂಕದಲ್ಲಿ ಆರ್‌ಸಿಬಿಯ ಕೃನಾಲ್ ಪಾಂಡ್ಯ ಹಾಗೂ ಏಳನೇ ಕ್ರಮಾಂಕದಲ್ಲಿ ಸುನಿಲ್ ನರೈನ್ ಸ್ಥಾನ ಪಡೆದಿದ್ದಾರೆ. ಈ ಮೂವರು ಆಲ್ರೌಂಡರ್‌ಗಳು ಈ ಸೀಸನ್ ಐಪಿಎಲ್‌ನಲ್ಲಿ ತಮ್ಮ ತಂಡದ ಪರ ಗಮನಾರ್ಹ ಪ್ರದರ್ಶನ ತೋರಿದ್ದಾರೆ.
56
ಬೌಲಿಂಗ್ ವಿಭಾಗ ಹೇಗಿದೆ?
ಇನ್ನು ಬೌಲಿಂಗ್ ವಿಭಾಗದಲ್ಲಿ ಆರ್‌ಸಿಬಿಯ ವೇಗಿ ಭುವನೇಶ್ವರ್ ಕುಮಾರ್, ಪರ್ಪಲ್ ಕ್ಯಾಪ್ ವಿಜೇತ ಗುಜರಾತ್ ಟೈಟಾನ್ಸ್ ತಂಡದ ವೇಗಿ ಕಗಿಸೋ ರಬಾಡ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ವೇಗಿ ಜೋಫ್ರಾ ಆರ್ಚರ್ ಸ್ಥಾನ ಪಡೆದಿದ್ದಾರೆ. ಇನ್ನು ಇಂಪ್ಯಾಕ್ಟ್ ಬೌಲರ್ ರೂಪದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಯುವ ವೇಗಿ ಸಕೀಬ್ ಹೊಸೈನ್ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.