ಐಪಿಎಲ್ 19ನೇ ಸೀಸನ್‌ಗೂ ಮುನ್ನ ನಡೆದ ಆರ್‌ಸಿಬಿ ಆಂತರಿಕ ಅಭ್ಯಾಸ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಕೇವಲ 19 ಎಸೆತಗಳಲ್ಲಿ 45 ರನ್ ಗಳಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಅವರು ತಮ್ಮ ಭರ್ಜರಿ ಫಾರ್ಮ್ ಪ್ರದರ್ಶಿಸಿ, ಮುಂಬರುವ ಟೂರ್ನಿಯಲ್ಲಿ ಎದುರಾಳಿ ತಂಡಗಳಿಗೆ ಕಠಿಣ ಸವಾಲು ನೀಡುವ ಮುನ್ಸೂಚನೆ ನೀಡಿದ್ದಾರೆ.
ಐಪಿಎಲ್‌ನ 19ನೇ ಸೀಸನ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಭೀಕರ ಫಾರ್ಮ್ ಪ್ರದರ್ಶಿಸುವ ಮೂಲಕ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ.
28
ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಫೈರ್
ಐಪಿಎಲ್ 19ನೇ ಸೀಸನ್ ಆರಂಭಕ್ಕೂ ಮುನ್ನ ನಡೆದ ಆರ್‌ಸಿಬಿ ತಂಡದ ಆಂತರಿಕ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಕ್ಷರಶಃ ಅಬ್ಬರಿಸಿದ್ದಾರೆ. ತಮ್ಮದೇ ತಂಡದ ಬೌಲರ್‌ಗಳನ್ನು ಮನಬಂದಂತೆ ದಂಡಿಸುವ ಮೂಲಕ ಮುಂಬರುವ ಸರಣಿಯ 'ಟ್ರೈಲರ್' ತೋರಿಸಿದ್ದಾರೆ.
38
ಬಿರುಗಾಳಿಯ ವೇಗದ ಬ್ಯಾಟಿಂಗ್
ಈ ಪಂದ್ಯದಲ್ಲಿ ಕೊಹ್ಲಿ ಕೇವಲ 19 ಎಸೆತಗಳಲ್ಲಿ 45 ರನ್ ಚಚ್ಚಿದ್ದಾರೆ. ಈ ವೇಳೆ ಅವರ ಸ್ಟ್ರೈಕ್ ರೇಟ್ 200ಕ್ಕಿಂತ ಹೆಚ್ಚಿತ್ತು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮೂಲಕ ತಾವು ಪೂರ್ಣ ಸಜ್ಜಾಗಿರುವುದನ್ನು ಸಾಬೀತುಪಡಿಸಿದ್ದಾರೆ.
ಆರ್‌ಸಿಬಿ ತಂಡ ಈ ಬಾರಿ ಡಿಫೆಂಡಿಂಗ್ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿದೆ. ಹೀಗಾಗಿ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳುವ ದೊಡ್ಡ ಜವಾಬ್ದಾರಿ ತಂಡದ ಮೇಲಿದೆ. ಈ ಬಾರಿ ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸುತ್ತಿರುವುದು ವಿಶೇಷ.
58
ಕೊಹ್ಲಿ-ಫಿಲಿಪ್ ಸಾಲ್ಟ್ ಓಪನಿಂಗ್
ಈ ಬಾರಿಯೂ ವಿರಾಟ್ ಕೊಹ್ಲಿ ಅವರು ಫಿಲಿಪ್ ಸಾಲ್ಟ್ ಜೊತೆಗೂಡಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕಳೆದ ಮೂರು ಸೀಸನ್‌ಗಳಿಂದ ಕೊಹ್ಲಿ ಆರ್‌ಸಿಬಿ ಪರ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಪ್ರತಿ ಬಾರಿಯೂ 600ಕ್ಕಿಂತ ಹೆಚ್ಚು ರನ್ ಗಳಿಸುತ್ತಾ ಬಂದಿದ್ದಾರೆ.
68
ದಾಖಲೆಗಳ ಸರದಾರ
ಕಳೆದ 18ನೇ ಸೀಸನ್‌ನಲ್ಲಿ ಕೊಹ್ಲಿ ಬರೊಬ್ಬರಿ 8 ಅರ್ಧಶತಕಗಳನ್ನು ಸಿಡಿಸಿದ್ದರು. ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 268 ಪಂದ್ಯಗಳನ್ನಾಡಿರುವ ಅವರು 39.54ರ ಸರಾಸರಿಯಲ್ಲಿ ಒಟ್ಟು 8,661 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ.
78
ನಾಯಕರ ಫೋಟೋಶೂಟ್
ಮಾರ್ಚ್ 28ರಿಂದ ಟೂರ್ನಿ ಆರಂಭವಾಗಲಿದ್ದು, ಮಾರ್ಚ್ 25ರಂದು ಎಲ್ಲಾ 10 ತಂಡಗಳ ನಾಯಕರು ಒಟ್ಟುಗೂಡಿ ಅಧಿಕೃತ ಫೋಟೋಶೂಟ್‌ನಲ್ಲಿ ಭಾಗವಹಿಸಿದ್ದಾರೆ. ಐಪಿಎಲ್ ಜ್ವರ ಈಗ ದೇಶಾದ್ಯಂತ ಮನೆಮಾಡಿದೆ.
88
ಮೊದಲ ಪಂದ್ಯದ ವಿವರ
ಆರ್‌ಸಿಬಿ ತನ್ನ ಮೊದಲ ಪಂದ್ಯವನ್ನು ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ರಾತ್ರಿ 7 ಗಂಟೆಗೆ ಟಾಸ್ ನಡೆಯಲಿದ್ದು, 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.