IPL 2026 ಟ್ರೋಫಿ ಗೆದ್ದರೂ ಆರ್‌ಸಿಬಿ ಈ ಮೂವರಿಗೆ ಗೇಟ್‌ಪಾಸ್ ಫಿಕ್ಸ್! ಕಠಿಣ ನಿರ್ಧಾರಕ್ಕೆ ರೆಡಿಯಾದ ಆರ್‌ಸಿಬಿ ಫ್ರಾಂಚೈಸಿ

Published : Jun 01, 2026, 03:07 PM IST

ಬೆಂಗಳೂರು: 2026ರ ಐಪಿಎಲ್ ಟೂರ್ನಿಯಲ್ಲಿ ಮತ್ತೊಮ್ಮೆ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಇದರ ಹೊರತಾಗಿಯೂ ಆರ್‌ಸಿಬಿ ಫ್ರಾಂಚೈಸಿಯು ಮುಂಬರುವ ಐಪಿಎಲ್ ಹರಾಜಿಗೂ ಮುನ್ನ 3 ಆಟಗಾರರಿಗೆ ಗೇಟ್‌ಪಾಸ್ ನೀಡಲು ಚಿಂತನೆ ನಡೆಸಿದೆ.

PREV
16
ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2026ರ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಅವರದ್ದೇ ಮೈದಾನದಲ್ಲಿ ಐದು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಅಜೇಯ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ, ತಂಡವನ್ನು ಅನಾಯಾಸವಾಗಿ ಗೆಲುವಿನ ದಡ ಸೇರಿಸಿದರು.

26
ತಮ್ಮಲ್ಲೇ ಐಪಿಎಲ್ ಟ್ರೋಫಿ ಉಳಿಸಿಕೊಂಡ ಆರ್‌ಸಿಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ತೋರುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಪ್ಲೇ ಆಫ್‌ ಪ್ರವೇಶಿಸಿತ್ತು. ಇದಾದ ಬಳಿಕ ಕ್ವಾಲಿಫೈಯರ್-1 ಹಾಗೂ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎರಡೆರಡು ಬಾರಿ ಬಗ್ಗುಬಡಿದು, ಐಪಿಎಲ್ ಟ್ರೋಫಿಯನ್ನು ಮತ್ತೊಮ್ಮೆ ತಮ್ಮಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

36
ಮೂವರಿಗೆ ಆರ್‌ಸಿಬಿ ಗೇಟ್‌ಪಾಸ್?

ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟೀದಾರ್, ದೇವದತ್ ಪಡಿಕ್ಕಲ್ ಬ್ಯಾಟಿಂಗ್‌ನಲ್ಲಿ ಮಿಂಚಿದರೆ, ಬೌಲಿಂಗ್‌ನಲ್ಲಿ ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ರಸಿಕ್ ಸಲಂ ಧರ್ ಹಾಗೂ ಜೇಕಬ್ ಡಫಿ ಮಾರಕ ದಾಳಿ ನಡೆಸಿದರು. ಇನ್ನು ಕೃನಾಲ್ ಪಾಂಡ್ಯ ತಾವೊಬ್ಬ ವರ್ಲ್ಡ್‌ ಕ್ಲಾಸ್ ಆಲ್ರೌಂಡರ್ ಎನ್ನುವುದನ್ನು ಸಾಬೀತು ಮಾಡಿದರು. ಇದೆಲ್ಲದರ ಹೊರತಾಗಿಯೂ ಆರ್‌ಸಿಬಿ ಫ್ರಾಂಚೈಸಿ ಪ್ರಮುಖ 3 ಸ್ಟಾರ್ ಆಟಗಾರರನ್ನು ತಂಡದಿಂದ ಕೈಬಿಡುವ ಚಿಂತನೆಯಲ್ಲಿದೆ ಎಂದು ವರದಿಯಾಗಿದೆ.

46
1. ರೊಮ್ಯಾರಿಯೋ ಶೆಫರ್ಡ್:

ವೆಸ್ಟ್ ಇಂಡೀಸ್ ಸ್ಟಾರ್ ಆಲ್ರೌಂಡರ್ ರೊಮ್ಯಾರಿಯೋ ಶೆಫರ್ಡ್‌ ಅವರನ್ನು 2025ರ ಐಪಿಎಲ್ ಟೂರ್ನಿಗೂ ಮುನ್ನ ನಡೆದ ಹರಾಜಿನಲ್ಲಿ ಆರ್‌ಸಿಬಿ ಫ್ರಾಂಚೈಸಿ 1.5 ಕೋಟಿ ನೀಡಿ ಖರೀದಿಸಿತ್ತು. ಇನ್ನು 2026ರ ಐಪಿಎಲ್‌ಗೂ ಶೆಫರ್ಡ್ ಅವರನ್ನು ರೀಟೈನ್ ಮಾಡಿಕೊಂಡಿತ್ತು. ಈ ಸೀಸನ್‌ನಲ್ಲಿ ಶೆಫರ್ಡ್ 13 ಇನ್ನಿಂಗ್ಸ್‌ಗಳನ್ನಾಡಿ 7 ವಿಕೆಟ್ ಹಾಗೂ ಬ್ಯಾಟಿಂಗ್‌ನಲ್ಲಿ 83 ರನ್ ಗಳಿಸಿ ನಿರಾಸೆ ಮೂಡಿಸಿದ್ದಾರೆ. ಹೀಗಾಗಿ ಶೆಫರ್ಡ್‌ಗೆ ಆರ್‌ಸಿಬಿ ಗೇಟ್‌ಪಾಸ್ ನೀಡಲು ಚಿಂತನೆ ನಡೆಸುತ್ತಿದೆ.

56
2. ಸುಯಾಶ್ ಶರ್ಮಾ:

ಆರ್‌ಸಿಬಿ ತಂಡದ ತಜ್ಞ ಸ್ಪಿನ್ನರ್ ಆಗಿ ಗುರುತಿಸಿಕೊಂಡಿದ್ದ ಸುಯಾಶ್ ಶರ್ಮಾ ಈ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಫ್ರಾಂಚೈಸಿ ಇಟ್ಟಿದ್ದ ನಿರೀಕ್ಷೆಯನ್ನು ಹುಸಿ ಮಾಡಿದರು. 2025ರ ಐಪಿಎಲ್ ಟೂರ್ನಿಗೂ ಮುನ್ನ ನಡೆದ ಹರಾಜಿನಲ್ಲಿ ಸುಯಾಶ್ ಶರ್ಮಾ ಅವರನ್ನು ಆರ್‌ಸಿಬಿ ಫ್ರಾಂಚೈಸಿ 2.60 ಕೋಟಿ ನೀಡಿ ಖರೀದಿಸಿತ್ತು. ಕಳೆದ ಸೀಸನ್‌ನಲ್ಲಿ ಮಿಂಚಿದ್ದ ಸುಯಾಶ್, ಈ ಸೀಸನ್‌ನಲ್ಲಿ 12 ಪಂದ್ಯಗಳನ್ನಾಡಿ ಕೇವಲ 9 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ಆರ್‌ಸಿಬಿ ಫ್ರಾಂಚೈಸಿಯು ಸುಯಾಶ್ ಅವರನ್ನು ಕೈಬಿಡುವ ಸಾಧ್ಯತೆಯಿದೆ.

66
3. ಜೇಕಬ್ ಬೆಥೆಲ್

ಇಂಗ್ಲೆಂಡ್‌ನ ಭವಿಷ್ಯದ ಸೂಪರ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ಜೇಕಬ್ ಬೆಥೆಲ್, ಈ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಸಿಕ್ಕ ಅವಕಾಶ ಬಳಸಿಕೊಳ್ಳಲು ವಿಫಲರಾದರು. ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಆರಂಭಿಕರಾಗಿ ಏಳು ಪಂದ್ಯಗಳನ್ನಾಡಿದ ಬೆಥೆಲ್ ಕೇವಲ 96 ರನ್ ಗಳಿಸಲಷ್ಟೇ ಶಕ್ತರಾದರು. ಹೀಗಾಗಿ 2.60 ಕೋಟಿ ಮೌಲ್ಯದ ಬೆಥೆಲ್ ಅವರಿಗೆ ಆರ್‌ಸಿಬಿಯಿಂದ ಗೇಟ್‌ಪಾಸ್ ಸಿಕ್ಕರೂ ಅಚ್ಚರಿಯೇನಿಲ್ಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories