IPL 2021 ಗರಿಷ್ಠ ಮೊತ್ತಕ್ಕೆ ಹರಾಜಾದ ಟಾಪ್ 5 ಕ್ರಿಕೆಟಿಗರಿವರು..!
First Published | Feb 18, 2021, 10:03 PM ISTಬೆಂಗಳೂರು: ಚೆನ್ನೈನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜು ಮುಕ್ತಾಯವಾಗಿದ್ದು, ಎಲ್ಲಾ 8 ಫ್ರಾಂಚೈಸಿಗಳು ಸಾಕಷ್ಟು ಅಳೆದು-ತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿವೆ. ಒಟ್ಟು 291 ಆಟಗಾರರ ಪೈಕಿ 8 ಫ್ರಾಂಚೈಸಿಗಳು 22 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 57 ಆಟಗಾರರನ್ನು ಖರೀದಿಸಿವೆ.
ಇನ್ನು ಐಪಿಎಲ್ ಆಟಗಾರರ ಹರಾಜಿನ ಇತಿಹಾಸದಲ್ಲೇ ಈ ಬಾರಿ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಕ್ರಿಸ್ ಮೋರಿಸ್ 16.25 ಕೋಟಿ ರುಪಾಯಿಗೆ ಹರಾಜಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಸಂದರ್ಭದಲ್ಲಿ 14ನೇ ಆವೃತ್ತಿಯ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಹರಾಜಾದ ಟಾಪ್ 5 ಆಟಗಾರರ ವಿವರ ಇಲ್ಲಿದೆ ನೋಡಿ.