IPL Auction 2021: ಸ್ಪಿನ್ ಅಸ್ತ್ರ ರಶೀದ್ ಖಾನ್ ಖರೀದಿಸಲು RCB ಸೇರಿ 3 ತಂಡಗಳ ನಡುವೆ ಪೈಪೋಟಿ..?

Suvarna News   | Asianet News
Published : Dec 13, 2021, 02:56 PM IST

ಬೆಂಗಳೂರು: 15ನೇ ಆವೃತ್ತಿಯ ಐಪಿಎಲ್ (IPL 2022) ಟೂರ್ನಿಗೆ ಭರದಿಂದ ಸಿದ್ದತೆಗಳು ಆರಂಭವಾಗಿವೆ. ಇದೆಲ್ಲದರ ನಡುವೆ ಆಫ್ಘಾನಿಸ್ತಾನ ಮೂಲದ ರಶೀದ್ ಖಾನ್‌ (Rashid Khan) ಅವರನ್ನು ಸನ್‌ರೈಸರ್ಸ್ ಹೈದರಾಬಾದ್ (SunRisers Hyderabad) ಫ್ರಾಂಚೈಸಿ ತಮ್ಮ ತಂಡದಿಂದ ಕೈಬಿಟ್ಟಿದೆ. ಹೀಗಾಗಿ ರಶೀದ್ ಖಾನ್ ಹರಾಜಿನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಮೂರು ಫ್ರಾಂಚೈಸಿಗಳು ಐಪಿಎಲ್ ಮೆಗಾ ಹರಾಜಿನಲ್ಲಿ (IPL Mega Auction) ರಶೀದ್ ಖಾನ್ ಮೇಲೆ ಕಣ್ಣಿಟ್ಟಿವೆ. 

PREV
16
IPL Auction 2021: ಸ್ಪಿನ್ ಅಸ್ತ್ರ ರಶೀದ್ ಖಾನ್ ಖರೀದಿಸಲು RCB ಸೇರಿ 3 ತಂಡಗಳ ನಡುವೆ ಪೈಪೋಟಿ..?
1. ಪಂಜಾಬ್ ಕಿಂಗ್ಸ್‌:

ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಪಂಜಾಬ್‌ ಕಿಂಗ್ಸ್‌ ತಂಡವು ಮೆಗಾ ಹರಾಜಿಗೂ ಮುನ್ನ ಮಯಾಂಕ್ ಅಗರ್‌ವಾಲ್ ಹಾಗೂ ಆರ್ಶದೀಪ್ ಸಿಂಗ್ ಅವರನ್ನು ರೀಟೈನ್ ಮಾಡಿಕೊಂಡಿದೆ. ಹೀಗಾಗಿ ಮುಂಬರುವ ಆವೃತ್ತಿಗೆ ಪಂಜಾಬ್ ತಜ್ಞ ಸ್ಪಿನ್ನರ್ ಹುಡುಕಾಟದಲ್ಲಿದೆ.
(File photo)

26

ಕೇವಲ ಇಬ್ಬರು ಆಟಗಾರರನ್ನು ಉಳಿಸಿಕೊಂಡು ಪರ್ಸ್‌ನಲ್ಲಿ ಸಾಕಷ್ಟು ಮೊತ್ತವನ್ನು ಹೊಂದಿರುವ ಪಂಜಾಬ್ ಫ್ರಾಂಚೈಸಿ, ರಶೀದ್ ಖಾನ್ ಮೇಲೆ ಕಣ್ಣಿಟ್ಟಿದೆ. ಇದರ ಜತೆ ಸ್ಪಿನ್ ದಿಗ್ಗಜ ಅನಿಲ್‌ ಕುಂಬ್ಳೆ ಪಂಜಾಬ್ ಮ್ಯಾನೇಜ್‌ಮೆಂಟ್‌ನಲ್ಲಿರುವುದರಿಂದ ಲೆಗ್ ಸ್ಪಿನ್ನರ್‌ ರಶೀದ್ ಖಾನ್‌ಗೆ ಗಾಳ ಹಾಕುವ ಸಾಧ್ಯತೆ ದಟ್ಟವಾಗಿದೆ.

36
2. ರಾಜಸ್ಥಾನ ರಾಯಲ್ಸ್‌

ಚೊಚ್ಚಲ ಆವೃತ್ತಿಯ ಐಪಿಎಲ್ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಮೆಗಾ ಹರಾಜಿಗೂ ಮುನ್ನ ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಅವರನ್ನು ರೀಟೈನ್‌ ಮಾಡಿದೆ. ಆದರೆ ರಾಯಲ್ಸ್‌ ಫ್ರಾಂಚೈಸಿ ಯಾವೊಬ್ಬ ಬೌಲರ್‌ನನ್ನೂ ಸಹಾ ರೀಟೈನ್ ಮಾಡಿಲ್ಲ.

46

ಶೇನ್‌ ವಾರ್ನ್‌ ಬಳಿಕ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಅಂತ್ಯತ ಪರಿಣಾಮಕಾರಿ ಸ್ಪಿನ್ನರ್ ತಂಡಕ್ಕೆ ಸಿಕ್ಕಿಲ್ಲ. ಕಳೆದ ಕೆಲವು ವರ್ಷಗಳಿಂದ ಪ್ಲೇ ಆಫ್‌ಗೇರಲು ಎಡವುತ್ತಿರುವ ರಾಯಲ್ಸ್‌ ಫ್ರಾಂಚೈಸಿ ರಶೀದ್ ಖಾನ್ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ರಣತಂತ್ರ ಹೆಣೆಯುತ್ತಿದೆ.

56
3. ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕೈಬಿಟ್ಟು, ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದರು. ಕಳೆದ ಕೆಲವು ವರ್ಷಗಳಿಂದ ಆರ್‌ಸಿಬಿ ತಂಡದ ಅವಿಭಾಜ್ಯ ಅಂಗವಾಗಿದ್ದ ಚಹಲ್‌ ಅನುಪಸ್ಥಿತಿ ಬೆಂಗಳೂರು ತಂಡವನ್ನು ಕಾಡುವ ಸಾಧ್ಯತೆಯಿದೆ.

66

ಬೆಂಗಳೂರು ತಂಡವು ಈಗಾಗಲೇ ಕೊಹ್ಲಿ, ಮ್ಯಾಕ್ಸ್‌ವೆಲ್ ಹಾಗೂ ಸಿರಾಜ್ ಅವರನ್ನು ರೀಟೈನ್‌ ಮಾಡಿಕೊಂಡಿದ್ದು, ಚಹಲ್ ಸ್ಥಾನ ತುಂಬಬಲ್ಲ ರಶೀದ್ ಖಾನ್ ಅವರನ್ನು ಸೆಳೆದುಕೊಂಡು ತಂಡವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುವ ಲೆಕ್ಕಾಚಾರ ಹಾಕಿಕೊಂಡಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories