ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!

Published : Dec 15, 2025, 05:32 PM IST

ಬೆಂಗಳೂರು: 2026ರ ಐಪಿಎಲ್ ಮಿನಿ ಹರಾಜು ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಹೀಗಿರುವಾಗಲೇ 19ನೇ ಆವೃತ್ತಿಯ ಐಪಿಎಲ್ ಹರಾಜಿಗೂ ಮುನ್ನ ಟಾಪ್ 06 ದುಬಾರಿ ಆಟಗಾರರು ಯಾರು ಎನ್ನುವುದನ್ನು ನೋಡೋಣ ಬನ್ನಿ. 

PREV
16
1. ರಿಷಭ್ ಪಂತ್:

ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರನೆಂದರೆ ಅದು ರಿಷಭ್ ಪಂತ್. ಕಳೆದ ಐಪಿಎಲ್ ಮೆಗಾ ಹರಾಜಿನಲ್ಲಿ ಲಖನೌ ಸೂಪರ್ ಜೈಂಟ್ಸ್‌ ಫ್ರಾಂಚೈಸಿಯು 27 ಕೋಟಿ ರುಪಾಯಿ ನೀಡಿ ಪಂತ್ ಅವರನ್ನು ಖರೀದಿಸಿತ್ತು. ಐಪಿಎಲ್‌ ಇತಿಹಾಸದಲ್ಲಿ ಪಂತ್ ಈ ವರೆಗಿನ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ.

26
2. ಶ್ರೇಯಸ್ ಅಯ್ಯರ್

ಇನ್ನು 2025ರ ಐಪಿಎಲ್ ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಎರಡನೇ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗಿದ್ದರು. ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಶ್ರೇಯಸ್ ಅಯ್ಯರ್ ಅವರನ್ನು 26.75 ಕೋಟಿ ರುಪಾಯಿ ನೀಡಿ ಖರೀದಿಸಿತ್ತು.

36
3. ಮಿಚೆಲ್ ಸ್ಟಾರ್ಕ್‌:

ಆಸ್ಟ್ರೇಲಿಯಾದ ಮಾರಕ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು 2024ರ ಐಪಿಎಲ್ ಮಿನಿ ಹರಾಜಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು 24.75 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಈ ಮೂಲಕ ದುಬಾರಿ ಆಟಗಾರರ ಪಟ್ಟಿಯಲ್ಲಿ ಸ್ಟಾರ್ಕ್ ಮೂರನೇ ಸ್ಥಾನದಲ್ಲಿದ್ದಾರೆ.

46
4. ವೆಂಕಟೇಶ್ ಅಯ್ಯರ್:

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು ಕೆಕೆಆರ್ ಫ್ರಾಂಚೈಸಿಯು ಕಳೆದ ಆವೃತ್ತಿಯ ಐಪಿಎಲ್ ಮೆಗಾ ಹರಾಜಿನಲ್ಲಿ 23.75 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಆದರೆ ವೆಂಕಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು.

56
5. ಹೆನ್ರಿಚ್ ಕ್ಲಾಸೆನ್:

ದಕ್ಷಿಣ ಆಫ್ರಿಕಾ ಮೂಲದ ಸ್ಪೋಟಕ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಬರೋಬ್ಬರಿ 23 ಕೋಟಿ ರುಪಾಯಿಗೆ ಖರೀದಿಸಿತ್ತು. ಈ ಮೂಲಕ ಕ್ಲಾಸೆನ್ ದುಬಾರಿ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

66
6. ವಿರಾಟ್ ಕೊಹ್ಲಿ:

2024ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು 21 ಕೋಟಿ ರುಪಾಯಿಗೆ ರೀಟೈನ್ ಮಾಡಿಕೊಂಡಿತ್ತು. ಈ ಮೂಲಕ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ.

Read more Photos on
click me!

Recommended Stories