ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 18ನೇ ಆವೃತ್ತಿ ಮುಗಿಸಿ, 19ನೇ ಸೀಸನ್ ಆಯೋಜನೆಗೆ ಸಜ್ಜಾಗುತ್ತಿದೆ. ಹೀಗಿರುವಾಗಲೇ ಐಪಿಎಲ್ ಖ್ಯಾತಿ ಮಸುಕಾಗುತ್ತಿದೆಯೇ ಎನ್ನುವ ಅನುಮಾನ ಕಾಡಲಾರಂಭಿಸಿದೆ. ಯಾಕೆ ಹೀಗೆ? ಏನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಆರ್‌ಸಿಬಿ ಮೌಲ್ಯ ಕಳೆದ ಬಾರಿಗಿಂದ ಶೇ.10ರಷ್ಟು ಕುಸಿತ ಕಂಡಿದೆ. ಗರಿಷ್ಠ ಪ್ರಮಾಣದಲ್ಲಿ ಮೌಲ್ಯ ಕುಸಿತ ಕಂಡ ತಂಡ ರಾಜಸ್ಥಾನ ರಾಯಲ್ಸ್. ತಂಡದ ಮೌಲ್ಯ ಶೇ.35ರಷ್ಟು ಕುಸಿದಿದೆ.
57
ಆರೆಂಜ್ ಆರ್ಮಿ 34% ಕುಸಿತ
ಉಳಿದಂತೆ ಸನ್‌ರೈಸರ್ಸ್ ಹೈದರಾಬಾದ್‌ನ ಮೌಲ್ಯ ಶೇ.34, ಕೆಕೆಆರ್ ಮೌಲ್ಯ ಶೇ.33, ಡೆಲ್ಲಿ ಮೌಲ್ಯ ಶೇ.26, ಚೆನ್ನೈ ಶೇ.24, ಮುಂಬೈ ಶೇ.9, ಪಂಜಾಬ್ ಶೇ.3, ಲಖನೌ ಮೌಲ್ಯ ಶೇ.2ರಷ್ಟು ಕುಸಿತ ಕಂಡಿದೆ.
67
ಗುಜರಾತ್ ಟೈಟಾನ್ಸ್ ತಂಡದ ಬ್ರ್ಯಾಂಡ್ ವ್ಯಾಲ್ಯೂ ಏರಿಕೆ
10 ತಂಡಗಳ ಪೈಕಿ ಗುಜರಾತ್ ಟೈಟಾನ್ಸ್ ಮೌಲ್ಯ ಮಾತ್ರ ಏರಿಕೆ ಕಂಡಿದ್ದು, ಶೇ.2ರಷ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.
77
ಬ್ರ್ಯಾಂಡ್ ವ್ಯಾಲ್ಯೂ ಶೇ.20ರಷ್ಟು ಕುಸಿತ!
ಒಟ್ಟಾರೆ ಐಪಿಎಲ್‌ನ ಬ್ರಾಂಡ್ ಮೌಲ್ಯವೂ ಕುಸಿದಿದ್ದು, 2024ಕ್ಕೆ ಹೋಲಿಸಿದರೆ ಶೇ.20ರಷ್ಟು ಕುಸಿತವಾಗಿದೆ ಎಂದು ಬ್ರಾಂಡ್ ಫೈನಾನ್ಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಅಜಿಮೊನ್ ಫ್ರಾನ್ಸಿಸ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.