#IPLFlashback ಪ್ರತಿ ಆವೃತ್ತಿಯ ಅತೀ ದುಬಾರಿ ಆಟಗಾರರಿವರು..!
First Published | Nov 27, 2019, 5:56 PM ISTಭಾರತದ ಚುಟುಕು ಕ್ರಿಕೆಟ್ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಗೆ ಭರದಿಂದ ಸಿದ್ದತೆ ಆರಂಭವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಉಳಿಸಿಕೊಂಡು, ಬೇಡವಾದ ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.
ಇನ್ನು ಡಿಸೆಂಬರ್ 19ರಂದು ಕೋಲ್ಕತಾದಲ್ಲಿ ನಡೆಯಲಿರುವ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಯಾರು, ಎಷ್ಟು ಮೊತ್ತಕ್ಕೆ ಹರಾಜಾಗಬಹುದು ಎನ್ನುವ ಕುತೂಹಲ ಜೋರಾಗಿದೆ. ಈ ಸಂದರ್ಭದಲ್ಲಿ ಕಳೆದ 12 ಐಪಿಎಲ್ ಆವೃತ್ತಿಗಳಲ್ಲಿ ಅತಿಹೆಚ್ಚು ಮೊತ್ತಕ್ಕೆ ಸೇಲ್ ಆದ ಆಟಗಾರರ ನೆನಪನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.