ಬೆಂಗಳೂರಿನಿಂದ ಆರ್‌ಸಿಬಿ ಮ್ಯಾಚ್ ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಮಹಾರಾಷ್ಟ್ರ ಒತ್ತಡ!

Published : Jan 07, 2026, 12:18 PM IST

ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಯೋಜನೆಗೆ ಭರದ ಸಿದ್ದತೆಗಳು ಶುರುವಾಗಿವೆ. ಹೀಗಿರುವಾಗಲೇ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳನ್ನು ಪುಣೆಗೆ ಶಿಫ್ಟ್ ಮಾಡಲು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಬಿಸಿಸಿಐ ಮೇಲೆ ಒತ್ತಡ ಹೇರುತ್ತಿದೆ. 

PREV
17
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ

ಕಳೆದ ವರ್ಷದ ಆರ್‌ಸಿಬಿ ಚಾಂಪಿಯನ್ಸ್‌ ಸಂಭ್ರಮಾಚರಣೆ ವೇಳೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದಾದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಸ್ಪರ್ಧಾತ್ಮಕ ಪಂದ್ಯಗಳು ನಡೆದಿಲ್ಲ.

27
ಬೆಂಗಳೂರಲ್ಲಿ ಐಪಿಎಲ್ ಆಯೋಜಿಸಲು ಕೆಎಸ್‌ಸಿಎ ಹರಸಾಹಸ

ಇನ್ನು ಹೊಸದಾಗಿ ಆಯ್ಕೆಯಾಗಿರುವ ವೆಂಕಟೇಶ್ ಪ್ರಸಾದ್ ನೇತೃತ್ವದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಶತಾಯಗತಾಯ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ಹರಸಾಹಸ ಮಾಡುತ್ತಿದೆ.

37
ಬಿಸಿಸಿಐ ಮೇಲೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಒತ್ತಡ

ಹೀಗಿರುವಾಗಲೇ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ನಡೆಯಬೇಕಿರುವ ಐಪಿಎಲ್ ಪಂದ್ಯಗಳನ್ನು ಪುಣೆಗೆ ಶಿಫ್ಟ್‌ ಮಾಡಲು ಬಿಸಿಸಿಐ ಮೇಲೆ ಒತ್ತಡ ಹೇರಿದೆ.

47
ಚಿನ್ನಸ್ವಾಮಿಯಿಂದ ಪುಣೆಗೆ ಮ್ಯಾಚ್ ಶಿಫ್ಟ್ ಮಾಡಲು ಒತ್ತಡ

ಈ ಕುರಿತಂತೆ ತಮ್ಮ ಅಧಿಕೃತ 'ಎಕ್ಸ್ ಖಾತೆ'ಯಲ್ಲಿ ಪೋಸ್ಟ್ ಮಾಡಿದ್ದು, ಈಗಾಗಲೇ ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಈಗಾಗಲೇ ಪುಣೆ ಕ್ರಿಕೆಟ್ ಸ್ಟೇಡಿಯಂಗೆ ಭೇಟಿ ನೀಡಿದ್ದು, ಈ ಎರಡು ತಂಡಗಳ ಪೈಕಿ ಒಂದು ತಂಡಕ್ಕೆ ಆತಿಥ್ಯ ವಹಿಸಲು ಪುಣೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದೆ.

57
ಬಿಸಿಸಿಐ ಗುಣಗಾನ ಮಾಡಿರುವ ಎಂಸಿಎ

ಈಗಾಗಲೇ ಬಿಸಿಸಿಐ, ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಗೆ ಮೊದಲಿನಿಂದಲೂ ಸಪೋರ್ಟ್ ಮಾಡುತ್ತಲೇ ಬಂದಿದ್ದು, ಐಪಿಎಲ್ ಆಯೋಜನೆಗೂ ಬಿಸಿಸಿಐ ಅನುಮತಿ ನೀಡುವ ವಿಶ್ವಾಸವಿದೆ. ಸ್ಟಾರ್ ಪ್ಲೇಯರ್‌ಗಳ ಆತಿಥ್ಯಕ್ಕೆ ಪುಣೆ ಸಜ್ಜಾಗಿದೆ ಎಂದು ಬರೆದುಕೊಂಡಿದೆ.

67
ಬೆಂಗಳೂರಿನಲ್ಲಿ ಐಪಿಎಲ್ ಸಾಧ್ಯವಾಗದಿದ್ರೆ ಪುಣೆಗೆ ಶಿಫ್ಟ್?

ಒಂದು ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯದ ಆಯೋಜನೆ ಸಾಧ್ಯವಾಗದಿದ್ರೆ, ಪುಣೆಯನ್ನು ಆರ್‌ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

77
ಮತ್ತೊಂದು ಟ್ರೋಫಿ ಮೇಲೆ ಆರ್‌ಸಿಬಿ ಕಣ್ಣು

2026ನೇ ಸಾಲಿನ ಐಪಿಎಲ್ ಟೂರ್ನಿಗೆ ಮಾರ್ಚ್ 26ರಂದು ಚಾಲನೆ ಸಿಗಲಿದ್ದು, ಫೈನಲ್ ಪಂದ್ಯ ಮೇ 31ಕ್ಕೆ ನಿಗದಿಯಾಗಿದೆ. ಆರ್‌ಸಿಬಿ ತಂಡವು ಮತ್ತೊಮ್ಮೆ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories