ಡೆಲ್ಲಿ ಹಾಗೂ ಕೆಕೆಆರ್ ನಡುವಿನ ಕೊನೆಯ ಲೀಗ್ ಪಂದ್ಯಕ್ಕೂ ಮೊದಲೇ ರಾಜಸ್ಥಾನ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿದೆ. ಇದೀಗ ಪ್ಲೇ ಆಫ್ ಹೋರಾಟದ ಸಂಪೂರ್ಣ ಚಿತ್ರಣ ಲಭ್ಯವಾಗಿದೆ. ನಾಲ್ಕು ತಂಡಗಳ ಮುಂದಿನ ಪಂದ್ಯದ ವೇಳಾಪಟ್ಟಿ ಇಲ್ಲಿದೆ.
ಐಪಿಎಲ್ 2026ರ ಟೂರ್ನಿಯಲ್ಲಿ ಪ್ಲೇ ಆಫ್ ಮೂರು ಸ್ಥಾನ ಖಚಿತಗೊಂಡ ಬಳಿಕ ನಾಲ್ಕನೇ ಸ್ಥಾನ ಯಾರಿಗೆ ಅನ್ನೋ ಕುತೂಹಲ ಮನೆ ಮಾಡಿತ್ತು. ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್, ಕೆಕೆಆರ್, ಡೆಲ್ಲಿ ತಂಡಗಳು ರೇಸ್‌ನಲ್ಲಿತ್ತು. ಇತ್ತ ಕೆಕೆಆರ್ ಹಾಗೂ ಡೆಲ್ಲಿ ನಡುವಿನ ಕೊನೆಯ ಲೀಗ್ ಪಂದ್ಯಕ್ಕೂ ಮೊದಲೇ ರಾಜಸ್ಥಾನ ರಾಯಲ್ಸ್ ಪ್ಲೇ ಆಫ್ ಸ್ಥಾನಕ್ಕೆ ಎಂಟ್ರಿಕೊಟ್ಟಿದೆ.
26
ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯ
ಆರ್‌ಸಿಬಿ, ಗುಜರಾತ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೂರು ಸ್ಥಾನ ಆಕ್ರಮಿಸಿತ್ತು. ಇಂದು ಮುಂಬೈ ವಿರುದ್ಧ 30 ರನ್ ಗೆಲುವು ದಾಖಲಿಸಿದ ರಾಜಸ್ಥಾನ ರಾಯಲ್ಸ್ ನಾಲ್ಕನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿತು. ಇತ್ತ ಕೆಕೆಆರ್ ಹಾಗೂ ಡಿಸಿ ಕೊನೆಯ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನುವಂತಾಗಿದೆ.
36
ಮೊದಲ ಕ್ವಾಲಿಫೈಯರ್
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಂಕಪಟ್ಟಿಯ ಮೊದಲೆರೆಡು ತಂಡ ಹೋರಾಡಲಿದೆ. ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಹೋರಾಟದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಮೇ.26ಕ್ಕೆ ಈ ಪಂದ್ಯ ನಡೆಯಲಿದೆ. ಧರ್ಮಶಾಲಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.
ಮೂರು ಹಾಗೂ 4ನೇ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ ರಾಯಲ್ಸ್ ಎಲಿಮಿನೇಟರ್ ಪಂದ್ಯ ಆಡಲಿದೆ. ಇಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ಗೆದ್ದ ತಂಡ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದ ಜೊತೆಗೆ ಎರಡನೇ ಕ್ವಾಲಿಫೈಯರ್ ಆಡಲಿದೆ. ಇಲ್ಲಿ ಗೆದ್ದ ತಂಡ ಫೈನಲ್ ಪ್ರವೇಶಿಸಲಿದೆ.
56
ಮೇ.31ಕ್ಕೆ ಫೈನಲ್ ಪಂದ್ಯ
ಈ ಬಾರಿಯ ಐಪಿಎಲ್ ಫೈನಲ್ ಪಂದ್ಯ ನಿಯಮದ ಪ್ರಕಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ವಿವಾದಗಳ ಗೂಡಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣ ಬದಲು ಬಿಸಿಸಿಐ ನರೇಂದ್ರ ಮೋದಿ ಕ್ರೀಡಾಂಗಣ ಅಹಮ್ಮದಾಬಾದ್‌ಗೆ ಸ್ಥಳಾಂತರಿಸಿದೆ. ಮೇ.31ರಂದು ಫೈನಲ್ ಪಂದ್ಯ ನಡೆಯಲಿದೆ.
66
ಟ್ರೋಫಿ ಗೆಲ್ಲುವ ತಂಡ ಯಾವುದು
ಈ ಬಾರಿ ಟ್ರೋಫಿ ಗೆಲ್ಲುವ ತಂಡ ಯಾವುದು ಅನ್ನೋ ಚರ್ಚೆ, ಭವಿಷ್ಯಗಳು ಶುರುವಾಗಿದೆ. ಹಾಲಿ ಚಾಂಪಿಯನ್ ಆರ್‌ಸಿಬಿಗೆ ಸತತ 2ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶವಿದೆ. ಆದರೆ ಪ್ಲೇ ಆಫ್ ಹೋರಾಟದಲ್ಲಿ ಅಚ್ಚರಿ ನಡೆದರೂ ಆಶ್ಚರ್ಯವಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.