ಅತಿಹೆಚ್ಚು ಐಪಿಎಲ್ ಪ್ಲೇ ಆಫ್‌ ಪ್ರವೇಶಿಸಿದ ತಂಡಗಳಿವು..! ಆರ್‌ಸಿಬಿಗೆ ಎಷ್ಟನೇ ಸ್ಥಾನ?

First Published Mar 15, 2024, 4:16 PM IST

ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗ ಯಾವೆಲ್ಲಾ ತಂಡಗಳು ಅತಿಹೆಚ್ಚು ಬಾರಿ ಐಪಿಎಲ್ ಪ್ಲೇ ಆಫ್ ಪ್ರವೇಶಿಸಿವೆ ಎನ್ನುವುದನ್ನು ನೋಡೋಣ ಬನ್ನಿ.
 

1. ಚೆನ್ನೈ ಸೂಪರ್ ಕಿಂಗ್ಸ್:

ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಐಪಿಎಲ್ ಪ್ಲೇ ಆಫ್ ಪ್ರವೇಶಿಸಿದ ತಂಡ ಎನ್ನುವ ಹೆಗ್ಗಳಿಕೆ ಎಂ ಎಸ್ ಧೋನಿ ನೇತೃತ್ವದ ಸಿಎಸ್‌ಕೆಗಿದೆ. 5 ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಸಿಎಸ್‌ಕೆ ತಂಡವು 12 ಬಾರಿ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಿದೆ.
 

2. ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್ ತಂಡವು ಚೆನ್ನೈ ಜತೆಗೆ ಅತಿಹೆಚ್ಚು ಐಪಿಎಲ್ ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಕಾಯ್ದುಕೊಂಡಿದೆ. 16 ಸೀಸನ್‌ಗಳ ಪೈಕಿ ಮುಂಬೈ ಇಂಡಿಯನ್ಸ್ ತಂಡವು 10 ಬಾರಿ ಪ್ಲೇ ಆಫ್ ಪ್ರವೇಶಿಸಿದೆ.
 

3. ರಾಯಲ್ ಚಾಲೆಂಜರ್ಸ್ ಬೆಂಗಳೂರು:

ಆರ್‌ಸಿಬಿ ತಂಡವು ಇದುವರೆಗೂ ಐಪಿಎಲ್ ಟ್ರೋಫಿ ಗೆದ್ದಿಲ್ಲವಾದರೂ, ಟೂರ್ನಿಯಲ್ಲಿ ಬಹುತೇಕ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು 8 ಬಾರಿ ಪ್ಲೇ ಆಫ್ ಪ್ರವೇಶಿಸಿದೆ.
 

4. ಸನ್‌ರೈಸರ್ಸ್‌ ಹೈದರಾಬಾದ್:

ಸನ್‌ರೈಸರ್ಸ್ ಹೈದರಾಬಾದ್ ತಂಡವು 2016ರಲ್ಲಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆರೆಂಜ್ ಆರ್ಮಿ ಕೂಡಾ 8 ಬಾರಿ ಪ್ಲೇ ಆಫ್ ಪ್ರವೇಶಿಸಿದೆ. ಇನ್ನು ಕಳೆದ ಆವೃತ್ತಿಯಲ್ಲಿ ಸನ್‌ರೈಸರ್ಸ್‌ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು.
 

5. ಕೋಲ್ಕತಾ ನೈಟ್ ರೈಡರ್ಸ್:

ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಎರಡು ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೆಕೆಆರ್‌ ತಂಡವು 7 ಬಾರಿ ಪ್ಲೇ ಆಫ್ ಪ್ರವೇಶಿಸಿದೆ.
 

6. ಡೆಲ್ಲಿ ಕ್ಯಾಪಿಟಲ್ಸ್

ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು 6 ಬಾರಿ ಪ್ಲೇ ಆಫ್ ಪ್ರವೇಶಿಸಿದೆ. ಆದರೆ ಕಪ್ ಗೆಲ್ಲಲು ಇದುವರೆಗೂ ಸಾಧ್ಯವಾಗಿಲ್ಲ.
 

7. ರಾಜಸ್ಥಾನ ರಾಯಲ್ಸ್:

ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವು ಕೇವಲ ಮೂರು ಬಾರಿ ಪ್ಲೇ ಆಫ್ ಪ್ರವೇಶಿಸಿದೆ. ಕಳೆದ ಬಾರಿ ರಾಜಸ್ಥಾನ ರಾಯಲ್ಸ್ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
 

8. ಗುಜರಾತ್ ಟೈಟಾನ್ಸ್:

2022ರ ಐಪಿಎಲ್ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಆಡಿದ ಎರಡು ಆವೃತ್ತಿಗಳಲ್ಲೂ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಿದೆ. ಗುಜರಾತ್ ಟೈಟಾನ್ಸ್ ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.
 

9. ಲಖನೌ ಸೂಪರ್ ಜೈಂಟ್ಸ್:

ಕೆ ಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಎರಡು ಸೀಸನ್‌ನಲ್ಲೂ ಪ್ಲೇ ಆಫ್ ಪ್ರವೇಶಿಸುವ ಮೂಲಕ 100% ಸಾಧನೆ ಮಾಡಿದೆ. ಆದರೆ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. 
 

10. ಪಂಜಾಬ್ ಕಿಂಗ್ಸ್‌

ಚೊಚ್ಚಲ ಆವೃತ್ತಿಯಿಂದಲೂ ಐಪಿಎಲ್‌ನಲ್ಲಿ ಪಾಲ್ಗೊಳ್ಳುತ್ತಾ ಬಂದಿರುವ ಪಂಜಾಬ್ ಕಿಂಗ್ಸ್ ತಂಡವು ಕೇವಲ ಎರಡು ಬಾರಿ ಮಾತ್ರ ಪ್ಲೇ ಆಫ್ ಪ್ರವೇಶಿಸುವ ಮೂಲಕ ನಿರಾಸೆ ಅನುಭವಿಸಿದೆ.

click me!