ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಆಯ್ಕೆ ಮಾಡಿದ ಇರ್ಫಾನ್ ಪಠಾಣ್..! ಯಾರಿಗೆಲ್ಲಾ ಸಿಕ್ಕಿದೆ ಸ್ಥಾನ?

First Published Apr 24, 2024, 1:04 PM IST

ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿಯುತ್ತಿದ್ದಂತೆಯೇ ಜೂನ್ 02ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆರಂಭವಾಗಲಿದೆ. ಈ ಟೂರ್ನಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ತಮ್ಮ ನೆಚ್ಚಿನ 15 ಆಟಗಾರರ ತಂಡವನ್ನು ಪ್ರಕಟಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

1. ರೋಹಿತ್ ಶರ್ಮಾ:

ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಐಪಿಎಲ್‌ನಲ್ಲೂ ರೋಹಿತ್ ಶರ್ಮಾ ಒಳ್ಳೆಯ ಲಯದಲ್ಲಿದ್ದು, ಅದೇ ಪ್ರದರ್ಶನ ಮುಂದುವರೆಸಿಕೊಂಡು ಹೋಗುವ ವಿಶ್ವಾಸದಲ್ಲಿದ್ದಾರೆ.

2. ಯಶಸ್ವಿ ಜೈಸ್ವಾಲ್:

ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್, ಮುಂಬೈ ಇಂಡಿಯನ್ಸ್ ಎದುರು ಸ್ಪೋಟಕ ಶತಕ ಸಿಡಿಸುವ ಮೂಲಕ ಭರ್ಜರಿ ಲಯಕ್ಕೆ ಮರಳಿದ್ದು, ಹಿಟ್‌ಮ್ಯಾನ್ ಜತೆ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿ ಎಂದು ಪಠಾಣ್ ಸ್ಥಾನ ನೀಡಿದ್ದಾರೆ.
 

3. ಶುಭ್‌ಮನ್ ಗಿಲ್‌:

ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್ ಕೂಡಾ ಆರಂಭಿಕನ್ನಾಗಿ ಸಾಕಷ್ಟು ಅನುಭವ ಹೊಂದಿದ್ದು, ಗಿಲ್ ಅವರನ್ನು ಬ್ಯಾಕ್‌ಅಪ್ ಓಪನ್ನರ್ ಆಗಿ ಸ್ಥಾನ ನೀಡಿದ್ದಾರೆ.

4. ವಿರಾಟ್ ಕೊಹ್ಲಿ:

ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಐಪಿಎಲ್‌ನಲ್ಲಿ ಸದ್ಯ ಆರೆಂಜ್ ಕ್ಯಾಪ್ ಪಡೆದುಕೊಂಡು ಮುನ್ನುಗ್ಗುತ್ತಿದ್ದಾರೆ. ಕೊಹ್ಲಿ ಆರಂಭಿನಾಗಿ ಇಲ್ಲವೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

5. ಸೂರ್ಯಕುಮಾರ್ ಯಾದವ್:

ಭಾರತದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್, ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದು ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗಿದ್ದಾರೆ. ಸೂರ್ಯ ಸಿಡಿದರೆ ಎದುರಾಳಿ ಪಡೆ ತಬ್ಬಿಬ್ಬಾಗೋದಂತೂ ಗ್ಯಾರಂಟಿ.

6. ರಿಂಕು ಸಿಂಗ್:

ಕೋಲ್ಕತಾ ನೈಟ್ ರೈಡರ್ಸ್ ಪರ ಮ್ಯಾಚ್ ಫಿನಿಶರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವ ರಿಂಕು ಸಿಂಗ್, ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿದೆ.

7. ಶಿವಂ ದುಬೆ:

ಚೆನ್ನೈ ಸೂಪರ್ ಕಿಂಗ್ಸ್ ಪರ ಶಿವಂ ದುಬೆ ಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚುತ್ತಿದ್ದಾರೆ. ಆಲ್ರೌಂಡರ್ ಆಗಿದ್ದರೂ ದುಬೆ, ಸಿಎಸ್‌ಕೆ ಪರ ಕೇವಲ ಬ್ಯಾಟಿಂಗ್ ಮಾತ್ರ ಮಾಡುತ್ತಿದ್ದು, ಪಠಾಣ್ ದುಬೆಗೂ ಸ್ಥಾನ ನೀಡಿದ್ದಾರೆ.

8. ಹಾರ್ದಿಕ್ ಪಾಂಡ್ಯ:

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಈ ಬಾರಿಯ ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಹೀಗಿದ್ದೂ ಬ್ಯಾಟಿಂಗ್ ಜತೆಗೆ ವೇಗದ ಬೌಲಿಂಗ್ ಕೂಡಾ ಮಾಡಬಲ್ಲ ಪಾಂಡ್ಯಗೆ ಪಠಾಣ್ ಮಣೆ ಹಾಕಿದ್ದಾರೆ.

9. ರಿಷಭ್ ಪಂತ್:

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್, ವಿಕೆಟ್ ಕೀಪಿಂಗ್ ಜತೆಗೆ ಬ್ಯಾಟಿಂಗ್‌ನಲ್ಲೂ ಮಿಂಚುತ್ತಿದ್ದು, ಪಠಾಣ್ ತಮ್ಮ ಕನಸಿನ ತಂಡದಲ್ಲಿ ಸ್ಥಾನ ನೀಡಿದ್ದಾರೆ. ಆದರೆ ಅಚ್ಚರಿಯೆನ್ನುವಂತೆ ಇನ್‌ಫಾರ್ಮ್ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ ಹಾಗೂ ಸಂಜು ಸ್ಯಾಮ್ಸನ್‌ಗೆ ಸ್ಥಾನ ನೀಡಿಲ್ಲ.

10. ರವೀಂದ್ರ ಜಡೇಜಾ:

ಟೀಂ ಇಂಡಿಯಾದ ಮತ್ತೋರ್ವ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ, ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತಂಡದ ಆಸ್ತಿ ಎನಿಸಿದ್ದಾರೆ. ಜಡ್ಡು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯೋದು ಗ್ಯಾರಂಟಿ.

11. ಯುಜುವೇಂದ್ರ ಚಹಲ್:

ಟೀಂ ಇಂಡಿಯಾ ಅನುಭವಿ ಲೆಗ್‌ ಸ್ಪಿನ್ನರ್ ಯುಜುವೇಂದ್ರ ಚಹಲ್, ಐಪಿಎಲ್‌ನಲ್ಲೂ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ. ಐಪಿಎಲ್‌ನಲ್ಲಿ 200 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿರುವ ಚಹಲ್‌ಗೆ ಪಠಾಣ್ ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಿದ್ದಾರೆ.

12. ಕುಲ್ದೀಪ್ ಯಾದವ್:

ಟೀಂ ಇಂಡಿಯಾ ಮತ್ತೋರ್ವ ಲೆಗ್‌ಸ್ಪಿನ್ನರ್ ಕುಲ್ದೀಪ್ ಯಾದವ್, ಅದ್ಬುತ ಲಯದಲ್ಲಿದ್ದು ಎರಡನೇ ಸ್ಪಿನ್ನರ್ ಆಗಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಪಠಾಣ್ ಸ್ಥಾನ ನೀಡಿದ್ದಾರೆ.

13. ಜಸ್ಪ್ರೀತ್ ಬುಮ್ರಾ:

ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಸದ್ಯ ಪರ್ಪಲ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದು, ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವೇಗದ ದಾಳಿಯನ್ನು ಮುನ್ನಡೆಸಲು ಎದುರು ನೋಡುತ್ತಿದ್ದಾರೆ.

14. ಮೊಹಮ್ಮದ್ ಸಿರಾಜ್:

ಟೀಂ ಇಂಡಿಯಾದ ಮತ್ತೋರ್ವ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್, ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಮೊನಚು ಕಳೆದುಕೊಂಡಿದ್ದಾರೆ. ಸಿರಾಜ್ ಭಾರತ ತಂಡದ ಪರ ಈಗಾಗಲೇ ಮಾರಕ ದಾಳಿ ನಡೆಸಿ ಮಿಂಚಿದ್ದಾರೆ.

15. ಆರ್ಶದೀಪ್ ಸಿಂಗ್:

ಎಡಗೈ ವೇಗಿ ಆರ್ಶದೀಪ್ ಸಿಂಗ್ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗಮನ ಸೆಳೆದಿದ್ದು, ಮತ್ತೊಮ್ಮೆ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

click me!