ಕ್ರೈಸ್ಟ್ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಭಾರತಕ್ಕೆ ದೊಡ್ಡ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ಮೂರನೇ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಈ ಕುರಿತಾದ ಅಪ್ಟೇಡ್ಸ್ ಇಲ್ಲಿದೆ ನೋಡಿ.
ನ್ಯೂಜಿಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲೆರಡು ಪಂದ್ಯಗಳು ಮುಕ್ತಾಯವಾಗಿದ್ದು, ಶ್ರೇಯಸ್ ಅಯ್ಯರ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ. ಇದೀಗ ಮೂರನೇ ಟಿ20 ಪಂದ್ಯವು ಅಕ್ಟೋಬರ್ 27ರಂದು ವೆಲ್ಲಿಂಗ್ಟನ್ನಲ್ಲಿ ನಡೆಯಲಿದೆ.
26
3ನೇ ಟಿ20 ಪಂದ್ಯದಿಂದ ಇಶಾನ್ ಕಿಶನ್ ಔಟ್
ಮೂರನೇ ಟಿ20 ಪಂದ್ಯಕ್ಕೂ ಮುನ್ನ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಇದೀಗ ಮೂರನೇ ಟಿ20 ಪಂದ್ಯದಿಂದಲೂ ಹೊರಬಿದ್ದಿದ್ದಾರೆ. ತೊಡೆಸಂದು ನೋವಿನಿಂದ ಬಳಲುತ್ತಿರುವ ಇಶಾನ್ ಕಿಶನ್ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಮೂರನೇ ಟಿ20 ಪಂದ್ಯಕ್ಕೆ ಇಶಾನ್ ಕಿಶನ್ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
36
ಮೊದಲ ಟಿ20 ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಮೈದಾನಕ್ಕಿಳಿದಿದ್ದ ಕಿಶನ್
ಮೊದಲ ಟಿ20 ಪಂದ್ಯದಲ್ಲಿ ಕ್ಷೇತ್ರರಕ್ಷಣೆ ಮಾಡುವ ವೇಳೆಯಲ್ಲಿ ಇಶಾನ್ ಕಿಶನ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದೇ ಕಾರಣಕ್ಕೆ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಮೂರನೇ ಕ್ರಮಾಂಕದ ಬದಲು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿಳಿದಿದ್ದರು. ಇನ್ನು ಇದೇ ಕಾರಣಕ್ಕೆ ಎರಡನೇ ಟಿ20 ಪಂದ್ಯದಿಂದಲೂ ಹೊರಬಿದ್ದಿದ್ದರು.
ಇಶಾನ್ ಕಿಶನ್ ಅನುಪಸ್ಥಿತಿಯಲ್ಲಿ ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದರು. ಆದರೆ 15 ವರ್ಷದ ಆಟಗಾರ ಎರಡನೇ ಟಿ20 ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದರು. ಇದೀಗ ಮೂರನೇ ಟಿ20 ಪಂದ್ಯಕ್ಕೂ ಇಶಾನ್ ಕಿಶನ್ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ವೈಭವ್ ಸೂರ್ಯವಂಶಿಗೆ ಮತ್ತೊಂದು ಚಾನ್ಸ್ ಸಿಗುವ ನಿರೀಕ್ಷೆಯಿದೆ.
56
ಬ್ಯಾಕ್ಅಪ್ ವಿಕೆಟ್ ಕೀಪರ್ ಆಗಿ ಕುಮಾರ್ ಕುಶಾಗ್ರ
ಇಶಾನ್ ಕಿಶನ್ ಅಲಭ್ಯರಾದ ಬೆನ್ನಲ್ಲೇ ಬ್ಯಾಕ್ಅಪ್ ವಿಕೆಟ್ ಕೀಪರ್ ಆಗಿ ಕುಮಾರ್ ಕುಶಾಗ್ರ ಅವರನ್ನು ಭಾರತ ಸೀನಿಯರ್ಸ್ ತಂಡಕ್ಕೆ ಕೊನೆಯ ಕ್ಷಣದಲ್ಲಿ ಸೇರಿಸಿಕೊಳ್ಳಲಾಗಿತ್ತು. ಆದರೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದೀಗ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ತಂಡದಲ್ಲಿರುವುದರಿಂದ ಕುಮಾರ್ ಕುಶಾಗ್ರ ಅವರಿಗೆ ತಂಡದೊಳಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ.
66
ಸರಣಿ ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಹಾಲಿ ಚಾಂಪಿಯನ್ ಭಾರತ ತಂಡವು ಮೊದಲೆರಡು ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದು, ಮೂರನೇ ಪಂದ್ಯವನ್ನೂ ಜಯಿಸುವ ಮೂಲಕ ಇನ್ನೆರಡು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇನ್ನೊಂದೆಡೆ ನ್ಯೂಜಿಲೆಂಡ್ ತಂಡವು ಮೂರನೇ ಪಂದ್ಯದಲ್ಲಿ ಭಾರತಕ್ಕೆ ತಿರುಗೇಟು ನೀಡಲು ರೆಡಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.