ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡ ಆಯ್ಕೆ ಮಾಡಿದ ಜಿತೇಶ್ ಶರ್ಮಾ! ಕೊಹ್ಲಿ-ಗೇಲ್‌-ರೈನಾಗಿಲ್ಲ ಸ್ಥಾನ

Published : Jan 12, 2026, 10:39 PM IST

ಬೆಂಗಳೂರು: ಟೀಂ ಇಂಡಿಯಾ ವಿಕೆಟ್‌ ಕೀಪರ್ ಹಾಗೂ ಆರ್‌ಸಿಬಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿರುವ ಜಿತೇಶ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಆದರೆ ಐಪಿಎಲ್‌ ದಿಗ್ಗಜರಾದ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಹಾಗೂ ಸುರೇಶ್ ರೈನಾ ಅವರನ್ನು ಕೈಬಿಟ್ಟಿದ್ದಾರೆ. 

PREV
19
ಜಿತೇಶ್ ಶರ್ಮಾ ಆಯ್ಕೆ ಮಾಡಿದ ಸಾರ್ವಕಾಲಿಕ ಶ್ರೇಷ್ಠ ತಂಡ

ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ, ಇದೀಗ ಐಪಿಎಲ್‌ನ ಸಾರ್ವಕಾಲಿಕ ಶ್ರೇಷ್ಠ ತಂಡವನ್ನು ಆಯ್ಕೆ ಮಾಡಿದ್ದಾರೆ.

29
ವಿರಾಟ್ ಕೊಹ್ಲಿ ಕೈಬಿಟ್ಟ ಜಿತೇಶ್ ಶರ್ಮಾ

ಆದರೆ ಐಪಿಎಲ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್ ಆಗಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ಜಿತೇಶ್ ಶರ್ಮಾ ಸಾರ್ವಕಾಲಿಕ ಐಪಿಎಲ್ ತಂಡದಿಂದ ಕೈಬಿಟ್ಟಿದ್ದಾರೆ. ಕೊಹ್ಲಿ ಕಳೆದ 18 ವರ್ಷಗಳಿಂದ ಆರ್‌ಸಿಬಿ ತಂಡದ ಪರ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ.

39
ಕ್ರಿಸ್‌ ಗೇಲ್‌ಗಿಲ್ಲ ಸ್ಥಾನ

ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಕೂಡಾ, ಜಿತೇಶ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಐಪಿಎಲ್‌ನಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್ ಬಾರಿಸಿದ ದಾಖಲೆ ಗೇಲ್ ಹೆಸರಿನಲ್ಲಿ ಅಚ್ಚಳಿಯದೇ ಉಳಿದಿದೆ.

49
ಸುರೇಶ್ ರೈನಾಗಿಲ್ಲ ಸ್ಥಾನ

ಇನ್ನು ಮಿಸ್ಟರ್ ಐಪಿಎಲ್ ಎಂದೇ ಕರೆಸಿಕೊಳ್ಳುವ ಸುರೇಶ್ ರೈನಾ ಅವರನ್ನು, ಜಿತೇಶ್ ಶರ್ಮಾ ಕೈಬಿಟ್ಟಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಕ್ರಿಕ್‌ಟ್ರ್ಯಾಕರ್ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಜಿತೇಶ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್‌ ತಂಡವನ್ನು ಆಯ್ಕೆ ಮಾಡಿದ್ದಾರೆ.

59
ಆರಂಭಿಕ ಬ್ಯಾಟರ್ಸ್

ಜಿತೇಶ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡದಲ್ಲಿ ಆರಂಭಿಕರಾಗಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹಾಗೂ ಆಸೀಸ್ ದಿಗ್ಗಜ ವಿಕೆಟ್ ಕೀಪರ್ ಆಡಂ ಗಿಲ್‌ಕ್ರಿಸ್ಟ್‌ ಅವರನ್ನು ಆಯ್ಕೆ ಮಾಡಿದ್ದಾರೆ.

69
ಮಧ್ಯಮ ಕ್ರಮಾಂಕ

ಇನ್ನು ಮೂರನೇ ಕ್ರಮಾಂಕದಲ್ಲಿ ಭಾರತದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್, ದಕ್ಷಿಣ ಆಫ್ರಿಕಾ ಮೂಲದ ಆಲ್ರೌಂಡರ್ ಜ್ಯಾಕ್ ಕಾಲಿಸ್, ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಸ್ಥಾನ ನೀಡಿದ್ದಾರೆ.

79
ಮ್ಯಾಚ್ ಫಿನಿಶರ್ಸ್‌

ಇನ್ನು ಮ್ಯಾಚ್ ಫಿನಿಶರ್ ರೂಪದಲ್ಲಿ ಆರನೇ ಕ್ರಮಾಂಕದಲ್ಲಿ ಎಂ ಎಸ್ ಧೋನಿ ಹಾಗೂ ಏಳನೇ ಕ್ರಮಾಂಕದಲ್ಲಿ ಎಬಿ ಡಿವಿಲಿಯರ್ಸ್‌ಗೆ ಸ್ಥಾನ ನೀಡಿದ್ದಾರೆ. ಈ ಇಬ್ಬರು ಬ್ಯಾಟರ್‌ಗಳು ಎಷ್ಟು ಅಪಾಯಕಾರಿ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

89
ಸ್ಪಿನ್ ಬೌಲರ್‌ಗಳು

ಇನ್ನುಳಿದಂತೆ ಇಬ್ಬರು ಸ್ಪಿನ್ನರ್‌ಗಳ ರೂಪದಲ್ಲಿ ವರುಣ್ ಚಕ್ರವರ್ತಿ ಹಾಗೂ ಅಕ್ಷರ್ ಪಟೇಲ್‌ಗೆ ಸ್ಥಾನ ನೀಡಿದ್ದಾರೆ. ಅಕ್ಷರ್ ಪಟೇಲ್‌ ಸ್ಪಿನ್ ಬೌಲಿಂಗ್ ಆಲ್ರೌಂಡರ್‌ ಆಗಿ ಸ್ಥಾನ ಪಡೆದರೆ, ವರುಣ್ ಚಕ್ರವರ್ತಿ ತಜ್ಞ ಸ್ಪಿನ್ನರ್ ಆಗಿ ಸ್ಥಾನ ಪಡೆದಿದ್ದಾರೆ.

99
ವೇಗದ ಬೌಲರ್‌ಗಳು

ಇನ್ನು ವೇಗದ ಬೌಲರ್‌ಗಳ ರೂಪದಲ್ಲಿ ಭಾರತ ಮೂಲದ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಆಸ್ಟ್ರೇಲಿಯಾ ಮೂಲದ ಆರ್‌ಸಿಬಿ ವೇಗಿ ಜೋಶ್ ಹೇಜಲ್‌ವುಡ್ ಜಿತೇಶ್ ಶರ್ಮಾ ಆಯ್ಕೆ ಮಾಡಿದ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories