ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಆಂಡರ್‌ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ರನ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.
ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ ಇದೀಗ 157 ಟೆಸ್ಟ್ ಪಂದ್ಯಗಳನ್ನಾಡಿದ್ದು, 13,409 ರನ್ ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.
56
1. ಸಚಿನ್ ತೆಂಡುಲ್ಕರ್: 15921 ರನ್
ಕ್ರಿಕೆಟ್ ದಂತಕಥೆ ಎಂದೇ ಕರೆಸಿಕೊಳ್ಳುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ 200 ಟೆಸ್ಟ್ ಪಂದ್ಯಗಳನ್ನಾಡಿ 15,921 ರನ್ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಭದ್ರವಾಗಿದ್ದಾರೆ.
66
ಸಚಿನ್ ದಾಖಲೆ ಮುರಿತಾರಾ ರೂಟ್?
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರನ್ನು ಹಿಂದಿಕ್ಕಲು ಜೋ ರೂಟ್‌ಗೆ ಇನ್ನೂ 2512 ರನ್‌ಗಳ ಅಗತ್ಯವಿದೆ.