Published : May 25, 2025, 09:06 AM ISTUpdated : May 25, 2025, 09:10 AM IST
ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದೆ. ಇದೀಗ ಪ್ಲೇ ಆಫ್ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಗುಡ್ ನ್ಯೂಸ್ ಸಿಕ್ಕಿದೆ. ಏನದು ಎನ್ನುವುದನ್ನು ನೋಡೋಣ ಬನ್ನಿ.
ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದ್ದು, ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿದೆ.
27
ಆದರೆ ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ಎದುರು ಆಘಾತಕಾರಿ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.ಇದರ ಜತೆಗೆ ಕ್ವಾಲಿಫೈಯರ್-1 ಆಡುವ ಹಾದಿಯನ್ನು ಮತ್ತಷ್ಟು ದುರ್ಗಮ ಮಾಡಿಕೊಂಡಿದೆ.
37
ಹೌದು, ಜೋಶ್ ಹೇಜಲ್‌ವುಡ್, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಪ್ರಮುಖ ವೇಗದ ಬೌಲಿಂಗ್ ಅಸ್ತ್ರವಾಗಿ ಗುರುತಿಸಿಕೊಂಡಿದ್ದು, ಮೇ 27ರಂದು ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಜೋಶ್ ಹೇಜಲ್‌ವುಡ್ ಭಾರತಕ್ಕೆ ಬಂದಿಳಿದಿರುವ ವಿಡಿಯೋವನ್ನು ಆರ್‌ಸಿಬಿ ಫ್ರಾಂಚೈಸಿ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಹೇಜಲ್‌ವುಡ್, ಹಾಯ್ ಆರ್‌ಸಿಬಿ ಫ್ಯಾನ್ಸ್, ನಾನು ಬಂದಿದ್ದೇನೆ ಎಂದು ಸಿಹಿಸುದ್ದಿ ನೀಡಿರುವ ವಿಡಿಯೋ ಫ್ಯಾನ್ಸ್ ಸಂಭ್ರಮದ ಅಲೆಯಲ್ಲಿ ಮುಳುಗುವಂತೆ ಮಾಡಿದೆ.
57
ಇದೀಗ ಜೋಶ್ ಹೇಜಲ್‌ವುಡ್ ಅವರ ಆಗಮನದ ಸುದ್ದಿಯನ್ನು ಆರ್‌ಸಿಬಿ ಫ್ರಾಂಚೈಸಿ ಖುಷಿಯಿಂದ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಬಂದ್ಬಿಟ್ಟ ಎಂದು ಕನ್ನಡದಲ್ಲಿಯೇ ಪೋಸ್ಟ್ ಮಾಡಿದೆ.
67
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಸೀಸ್ ಮೂಲದ ನೀಳಕಾಯದ ವೇಗಿ ಜೋಶ್ ಹೇಜಲ್‌ವುಡ್ ಆರ್‌ಸಿಬಿ ಪರ 10 ಪಂದ್ಯಗಳನ್ನಾಡಿ 18 ವಿಕೆಟ್ ಕಬಳಿಸುವ ಮೂಲಕ ಆರ್‌ಸಿಬಿ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
77
ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿರುವ ಜೋಶ್ ಹೇಜಲ್‌ವುಡ್, ಐಪಿಎಲ್ ಪ್ಲೇ ಆಫ್‌ನ ಎಲ್ಲಾ ಪಂದ್ಯಗಳನ್ನು ಆಡುತ್ತಾರೆಯೇ ಅಥವಾ ಮಧ್ಯದಲ್ಲಿಯೇ ಆರ್‌ಸಿಬಿ ತಂಡವನ್ನು ತೊರೆಯಲಿದ್ದಾರೆಯೇ ಎನ್ನುವುದನ್ನು ಕಾದು ನೋಡಬೇಕಿದೆ.