ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಪುನರಾರಂಭಕ್ಕೆ ಇದೀಗ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಆರ್‌ಸಿಬಿ ತಂಡದ ಕುರಿತಂತೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
ಭಾರತ ಹಾಗೂ ಪಾಕಿಸ್ತಾನ ನಡುವಿನ ಯುದ್ದ ಭೀತಿ ಹಿನ್ನೆಲೆಯಲ್ಲಿ ಒಂದು ವಾರದ ಮಟ್ಟಿಗೆ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮೇ 17ರಿಂದ ಆರಂಭವಾಗಲಿದೆ.
29
ಮೇ 17ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.
39
ಇನ್ನು ಗಾಯದ ಸಮಸ್ಯೆಯಿಂದಾಗಿ ಈ ಹಿಂದಿನ ಪಂದ್ಯದಿಂದ ಹೊರಗುಳಿದಿದ್ದ ಆಸೀಸ್ ನೀಳಕಾಯದ ವೇಗಿ ಜೋಶ್ ಹೇಜಲ್‌ವುಡ್, ಐಪಿಎಲ್ ಟೂರ್ನಿ ಸ್ಥಗಿತದ ಬೆನ್ನಲ್ಲೇ ತವರಿಗೆ ವಾಪಾಸ್ಸಾಗಿದ್ದರು.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿರುವ ಜೋಶ್ ಹೇಜಲ್‌ವುಡ್ ಮತ್ತೆ ಐಪಿಎಲ್ ಆಡಲು ಈ ಬಾರಿ ಭಾರತಕ್ಕೆ ಬರುವುದಿಲ್ಲ ಎಂದು ವರದಿಯಾಗಿತ್ತು. ಇದು ಆರ್‌ಸಿಬಿ ಅಭಿಮಾನಿಗಳ ಆತಂಕ ಹೆಚ್ಚುವಂತೆ ಮಾಡಿತ್ತು.
59
ಯಾಕೆಂದರೆ ಆರ್‌ಸಿಬಿ ಪರ ಇದುವರೆಗೂ ಮಾರಕ ದಾಳಿ ನಡೆಸಿರುವ ಜೋಶ್ ಹೇಜಲ್‌ವುಡ್, 10 ಪಂದ್ಯಗಳನ್ನಾಡಿ 18 ವಿಕೆಟ್ ಕಬಳಿಸುವ ಮೂಲಕ ಆರ್‌ಸಿಬಿ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು.
69
ಇದೀಗ ಹೇಜಲ್‌ವುಡ್ ಕುರಿತಂತೆ ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಆಸೀಸ್ ವೇಗಿ ಹೇಜಲ್‌ವುಡ್ ಶೀಘ್ರದಲ್ಲಿಯೇ ಆರ್‌ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದು, ಇನ್ನುಳಿದ ಐಪಿಎಲ್ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
79
ಹೌದು, ಜೋಶ್ ಭಾರತಕ್ಕೆ ಪ್ರವಾಸ ಮಾಡಲಿದ್ದಾರೆ. ಸರಿಯಾಗಿ ಯಾವಾಗ ಭಾರತಕ್ಕೆ ಹೇಜಲ್‌ವುಡ್ ಪ್ರವಾಸ ಮಾಡಲಿದ್ದಾರೆ ಎನ್ನುವುದರ ಬಗ್ಗೆ ಅಥಾರಿಟಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಹೇಜಲ್‌ವುಡ್ ಆತ್ಮೀಯರೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
89
ಜೋಶ್ ಹೇಜಲ್‌ವುಡ್ ತಂಡ ಕೂಡಿಕೊಂಡರೇ ಆರ್‌ಸಿಬಿಗೆ ಮತ್ತಷ್ಟು ಬಲ ಬಂದಂತೆ ಆಗಲಿದೆ. ಆರ್‌ಸಿಬಿ ಲೀಗ್ ಹಂತದಲ್ಲಿ ಇನ್ನೂ ಮೂರು ಪಂದ್ಯಗಳನ್ನಾಡುವುದು ಬಾಕಿಯಿದೆ. ಫೈನಲ್ ಪಂದ್ಯ ಜೂನ್ 3ರಂದು ನಡೆಯಲಿದೆ.
99
ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ಆರ್‌ಸಿಬಿ ತಂಡವು ಸದ್ಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ನೀಡುತ್ತಾ ಬಂದಿರುವ ಆರ್‌ಸಿಬಿ ಈ ಸಲ ಐಪಿಎಲ್ ಟ್ರೋಫಿ ಜಯಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.