ಭಾರತ ಕ್ರಿಕೆಟ್ ತಂಡವು ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದ್ದು, 5 ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಹೀಗಿರುವಾಗಲೇ ಕನ್ನಡಿಗ ಕರುಣ್ ನಾಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅವರ ಕುರಿತಂತೆ ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ದೇಶಿ ಕ್ರಿಕೆಟ್‌ನಲ್ಲಿ ಅತ್ಯದ್ಭುತ ಪ್ರದರ್ಶನ ತೋರುವ ಮೂಲಕ ಎಂಟು ವರ್ಷಗಳ ಬಳಿಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವಲ್ಲಿ ಕರುಣ್ ನಾಯರ್ ಯಶಸ್ವಿಯಾಗಿದ್ದಾರೆ. ಇದೀಗ ಕರುಣ್ ನಾಯರ್, ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
27
ಹೀಗಿರುವಾಗಲೇ ಕರುಣ್ ನಾಯರ್ ಕುರಿತಂತೆ ಮಹತ್ವದ ಸುದ್ದಿಯೊಂದು ವೈರಲ್ ಆಗುತ್ತಿದೆ. ಇದೀಗ ಕರುಣ್ ನಾಯರ್ ದೇಶಿ ಕ್ರಿಕೆಟ್‌ನಲ್ಲಿ ತಾವು ಕಳೆದೆರಡು ವರ್ಷಗಳಿಂದ ಪ್ರತಿನಿಧಿಸುತ್ತಿದ್ದ ವಿದರ್ಭ ತಂಡವನ್ನು ತೊರೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
37
ಕರ್ನಾಟಕ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ ಕರುಣ್ ನಾಯರ್, 2023ರಲ್ಲಿ ರಾಜ್ಯ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು. ಹೀಗಾಗಿ 2023-24 ಮತ್ತು 2024-25ರಲ್ಲಿ ವಿದರ್ಭ ತಂಡವನ್ನು ದೇಶಿ ಕ್ರಿಕೆಟ್‌ನಲ್ಲಿ ಪ್ರತಿನಿಧಿಸಿದ್ದರು.
ಕಳೆದ ವರ್ಷ ರಣಜಿಯಲ್ಲಿ ಕರುಣ್ ನಾಯರ್ 863 ರನ್ ಹಾಗೂ ವಿಜಯ್ ಹಜಾರೆ ಏಕದಿನ ಟೂರ್ನಿಯಲ್ಲಿ 779 ರನ್ ಸಿಡಿಸುವ ಮೂಲಕ ಬಿಸಿಸಿಐ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.
57
ಇದೀಗ ಕರುಣ್ ನಾಯರ್, ವಿದರ್ಭ ತಂಡವನ್ನು ತೊರೆದು ಮತ್ತೆ ಕರ್ನಾಟಕ ಕ್ರಿಕೆಟ್ ತಂಡಕ್ಕೆ ಮರಳುವ ಸಾಧ್ಯತೆ ಹೆಚ್ಚಿದೆ ಎಂದು ಕೆಎಸ್‌ಸಿಎ ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
67
ಇನ್ನು ವಿದರ್ಭ ತಂಡದ ಮತ್ತೋರ್ವ ಕ್ರಿಕೆಟಿಗ, ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕೂಡಾ ಮುಂಬರುವ ದೇಶಿ ಕ್ರಿಕೆಟ್‌ನಲ್ಲಿ ವಿದರ್ಭ ತಂಡವನ್ನು ತೊರೆದು ಬೇರೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
77
18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಜಿತೇಶ್ ಶರ್ಮಾ, ಆರ್‌ಸಿಬಿ 15 ಪಂದ್ಯಗಳಲ್ಲಿ ಒಂದು ಅರ್ಧಶತಕ ಸಹಿತ ಆಕರ್ಷಕ 261 ರನ್ ಸಿಡಿಸಿದ್ದರು. ಜಿತೇಶ್ ಶರ್ಮಾ ಮುಂಬರುವ ದೇಶಿ ಕ್ರಿಕೆಟ್‌ನಲ್ಲಿ ಬರೋಡಾ ತಂಡದ ಪರ ಆಡಲು ಒಲವು ತೋರಿದ್ದಾರೆ ಎಂದು ವರದಿಯಾಗಿದೆ.