ಬೆಂಗಳೂರು: 2026ರ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯವಾಗಿ ಒಂದು ವಾರವಾಗುತ್ತಾ ಬಂದಿದೆ. ಹೀಗಿರುವಾಗಲೇ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ತೋರಿರುವ ವೈಭವ್ ಸೂರ್ಯವಂಶಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಆರೆಂಜ್ ಕ್ಯಾಪ್ ಗೆದ್ದ ಕಿರಿಯ ಕ್ರಿಕೆಟಿಗ ವೈಭವ್ ಸೂರ್ಯವಂಶಿ
ರಾಜಸ್ಥಾನ ರಾಯಲ್ಸ್ ತಂಡವು ಪ್ಲೇ ಆಫ್‌ಗೇರುವಲ್ಲಿ 15 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಪ್ರಮುಖ ಪಾತ್ರ ವಹಿಸಿದ್ದರು. ವೈಭವ್ 2026ರ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳನ್ನಾಡಿ 776 ರನ್ ಸಿಡಿಸುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೂಲಕ ಈ ಸಾಧನೆ ಮಾಡಿದ ಐಪಿಎಲ್‌ನ ಅತ್ಯಂತ ಕಿರಿಯ ಕ್ರಿಕೆಟಿಗ ಎನಿಸಿಕೊಂಡರು.
26
2026ರ ಐಪಿಎಲ್‌ನಲ್ಲಿ ಹಲವು ಮೈಲಿಗಲ್ಲು ನೆಟ್ಟ ಸೂರ್ಯವಂಶಿ
ಇನ್ನು ಟೂರ್ನಿಯಲ್ಲಿ 73 ಸಿಕ್ಸರ್ ಸಿಡಿಸಿ ಹೊಸ ಮೈಲಿಗಲ್ಲು ನೆಟ್ಟಿರುವ ವೈಭವ್, 237.3ರ ಸ್ಟ್ರೈಕ್‌ರೇಟ್‌ನಲ್ಲಿ ರನ್ ಗಳಿಸುವ ಮೂಲಕ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಎನಿಸಿಕೊಂಡರು. ಇದರ ಜತೆಗೆ ಟಾಟಾ ಸಿಯಾರ ಕಾರನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಬೆನ್ನಲ್ಲೇ ಬಿಹಾರ ಮೂಲದ ಈ ಯುವ ಕ್ರಿಕೆಟಿಗನಿಗೆ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ತಮಾಷೆಯಾಗಿಯೇ ಎಚ್ಚರಿಕೆ ನೀಡಿದ್ದಾರೆ.
36
ವೈಭವ್ ಸೂರ್ಯವಂಶಿಗೆ ಅಶ್ವಿನ್ ಕಿವಿಮಾತು
ನೀನು ಸೂಪರ್ ಸ್ಟ್ರೈಕರ್ ಹಾಗೂ ಸೂಪರ್ ಸಿಕ್ಸರ್ ಅವಾರ್ಡ್ ಗೆದ್ದಿದ್ದೀಯ. ಆದರೆ ಸೂಪರ್ ಫೋರ್ಸ್ ಅವಾರ್ಡ್ ನಿನ್ನ ಕೈತಪ್ಪಿದೆ. ಇದು ನನಗೆ ನಿರಾಸೆ ಮೂಡಿಸಿತು. ಬರೀ ಗಾಳಿಯಲ್ಲೇ ಇರುವುದನ್ನು ಬಿಟ್ಟು, ಕೆಲ ಕಾಲ ನಿನ್ನ ಕಾಲು ನೆಲದ ಮೇಲೆ ಇರಲು ಪ್ರಯತ್ನಿಸು ಎಂದು ಅಶ್ವಿನ್, ವೈಭವ್‌ಗೆ ಕಿವಿ ಮಾತು ಹೇಳಿದ್ದಾರೆ.
46
ತಾವೊಬ್ಬ ಅಸಾಧಾರಣ ಪ್ರತಿಭೆ ಎಂದು ಜಗತ್ತಿಗೆ ಅನಾವರಣ ಮಾಡಿದ ವೈಭವ್
ಕಳೆದ ಸೀಸನ್‌ನಲ್ಲಿಯೇ ಐಪಿಎಲ್‌ಗೆ ಪಾದಾರ್ಪಣೆ ಮಾಡಿ ಶತಕ ಸಿಡಿಸಿದ್ದ ವೈಭವ್ ಸೂರ್ಯವಂಶಿ, ತಾವಾಡಿದ ಎರಡನೇ ಸೀಸನ್ ಐಪಿಎಲ್ ಟೂರ್ನಿಯಲ್ಲೇ ಉದಯೋನ್ಮುಖ ಕ್ರಿಕೆಟಿಗ, ಮೋಸ್ಟ್ ವ್ಯಾಲ್ಯೂಯೇಬಲ್ ಪ್ಲೇಯರ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಜಯಿಸುವ ಮೂಲಕ ತಾವೊಬ್ಬ ಅಸಾಧಾರಣ ಪ್ರತಿಭೆ ಎನ್ನುವುದನ್ನು ಬಹಿರಂಗ ಪಡಿಸಿದ್ದಾರೆ.
56
ವೈಭವ್ ಸೂರ್ಯವಂಶಿ ಹೋರಾಟ ವ್ಯರ್ಥ
ಇನ್ನು ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್‌ಗೆ ಸೋಲುಣಿಸಿ ಎರಡನೇ ಕ್ವಾಲಿಫೈಯರ್‌ಗೆ ಎಂಟ್ರಿಕೊಟ್ಟಿತ್ತು. ಕ್ವಾಲಿಫೈಯರ್-2 ಪಂದ್ಯದಲ್ಲಿ ಸೂರ್ಯವಂಶಿ ಆಕರ್ಷಕ ಬ್ಯಾಟಿಂಗ್ ನಡೆಸಿದರಾದರೂ, ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
66
ಶೀಘ್ರದಲ್ಲೇ ವೈಭವ್ ಸೂರ್ಯವಂಶಿ ಟೀಂ ಇಂಡಿಯಾಗೆ ಎಂಟ್ರಿ?
ಇನ್ನು ವೈಭವ್ ಸೂರ್ಯವಂಶಿ ಅವರ ಆಟಕ್ಕೆ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವೈಭವ್ ಸೂರ್ಯವಂಶಿ ಅತಿಶೀಘ್ರದಲ್ಲಿ ಭಾರತ ಹಿರಿಯರ ಕ್ರಿಕೆಟ್ ತಂಡವನ್ನು ಕೂಡಿಕೊಳ್ಳುವ ನಿರೀಕ್ಷೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.