RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌!

Published : Apr 04, 2026, 04:09 PM IST

ಬೆಂಗಳೂರು: 19ನೇ ಆವೃತ್ತಿಯ IPL ಟೂರ್ನಿಗೆ ಭರ್ಜರಿ ಚಾಲನೆ ಸಿಕ್ಕಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗುತ್ತಿದೆ. ಹೀಗಿರುವಾಗಲೇ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್‌ಸನ್ ಈ ಬಾರಿ ಪ್ಲೇ ಆಫ್ ಪ್ರವೇಶಿಸಲಿರುವ ನಾಲ್ಕು ತಂಡಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. 

PREV
15
ಕೆವಿನ್ ಪೀಟರ್‌ಸನ್ ಭವಿಷ್ಯ

ಐಪಿಎಲ್ 2026 ಸೀಸನ್ ಕಾವೇರಿದ್ದು, ಪ್ಲೇಆಫ್ ರೇಸ್ ಚರ್ಚೆಗಳು ಆರಂಭವಾಗಿವೆ. ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ತಮ್ಮ ಟಾಪ್ 4 ತಂಡಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

25
ಮುಂಬೈ, ಡೆಲ್ಲಿ, ರಾಜಸ್ಥಾನ & ಪಂಜಾಬ್‌ ಪ್ಲೇ ಆಫ್‌ಗೆ?

ಐಪಿಎಲ್ 2026ರಲ್ಲಿ ಪ್ರತಿ ತಂಡ ಕನಿಷ್ಠ ಒಂದು ಪಂದ್ಯ ಆಡಿದ ನಂತರ, ಪೀಟರ್ಸನ್ ತಮ್ಮ ಭವಿಷ್ಯ ನುಡಿದಿದ್ದಾರೆ. ಅವರ ಪ್ರಕಾರ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್‌ಗೆ ಪ್ರವೇಶಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

35
ಆರ್‌ಸಿಬಿ ಪ್ಲೇಆಫ್‌ಗೇರಲ್ಲ!

ಇನ್ನು ಅಚ್ಚರಿಯೆನ್ನುವಂತೆ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಶುಭಾರಂಭ ಮಾಡಿದ್ದ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಪ್ಲೇ ಆಫ್ ಪ್ರವೇಶಿಸುವುದಿಲ್ಲ ಎಂದಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

45
ಕಾರಣ ಬಿಚ್ಚಿಟ್ಟ ಪೀಟರ್‌ಸನ್

ಇನ್ನು ಆರ್‌ಸಿಬಿ ಈ ಬಾರಿ ಯಾಕಾಗಿ ಪ್ಲೇ ಆಫ್ ಪ್ರವೇಶಿಸುವುದಿಲ್ಲ ಎನ್ನುವ ಕುರಿತಂತೆ ಇಂಟ್ರೆಸ್ಟಿಂಗ್ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ಮಧ್ಯಮ ಓವರ್‌ಗಳಲ್ಲಿ ಆರ್‌ಸಿಬಿಯ ಮಂದಗತಿಯ ಬ್ಯಾಟಿಂಗ್, ತಜ್ಞ ಸ್ಪಿನ್ನರ್‌ಗಳ ವೈಫಲ್ಯ ಹಾಗೂ ಜೋಶ್ ಹೇಜಲ್‌ವುಡ್ ಫಿಟ್‌ನೆಸ್ ಆತಂಕ ಆರ್‌ಸಿಬಿ ಪ್ಲೇ ಆಫ್ ಕನಸಿಗೆ ಬಲವಾದ ಹಿನ್ನಡೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

55
ಟಾಸ್ ಪ್ರಮುಖ ಪಾತ್ರ ವಹಿಸಲಿದೆ

ಈ ಸೀಸನ್‌ನಲ್ಲಿ ಯಾವುದೇ ಗುರಿ ಸುರಕ್ಷಿತವಲ್ಲ. 200ಕ್ಕೂ ಹೆಚ್ಚು ರನ್‌ಗಳನ್ನು ಸುಲಭವಾಗಿ ಬೆನ್ನಟ್ಟಲಾಗುತ್ತಿದೆ. ಹೀಗಾಗಿ ಟಾಸ್ ಪಂದ್ಯದ ಫಲಿತಾಂಶ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪೀಟರ್ಸನ್ ಹೇಳಿದ್ದಾರೆ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಈ ಬಾರಿ ಪ್ರಶಸ್ತಿ ಗೆಲ್ಲುವುದು ಕಷ್ಟ ಎಂದು ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories