ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಕೆಆರ್ ಸ್ಟಾರ್ ವೆಂಕಟೇಶ್ ಅಯ್ಯರ್

Published : Jun 02, 2024, 01:08 PM IST

ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದ ವೆಂಕಟೇಶ್ ಅಯ್ಯರ್, ಇದೀಗ ಜೀವನದ ಹೊಸ ಇನಿಂಗ್ಸ್‌ ಆರಂಭಿಸಿದ್ದು, ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

PREV
17
ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಕೆಆರ್ ಸ್ಟಾರ್ ವೆಂಕಟೇಶ್ ಅಯ್ಯರ್

ಟೀಂ ಇಂಡಿಯಾ ಕ್ರಿಕೆಟಿಗ ವೆಂಕಟೇಶ್ ಅಯ್ಯರ್, 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರ ಅದ್ಭುತ ಪ್ರದರ್ಶನದ ಮೂಲಕ ಮಿಂಚಿದ್ದರು.

27

ಸ್ಟೈಲೀಶ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಇದೀಗ ಜೀವನದ ಹೊಸ ಇನಿಂಗ್ಸ್‌ ಆರಂಭಿಸಿದ್ದು, ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್ ಅವರೊಂದಿಗೆ ಸಂಪ್ರದಾಯಬದ್ಧವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

37

ವೆಂಕಿ ಅಯ್ಯರ್ ಹಾಗೂ ಶೃತಿ ರಘುನಾಥನ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಂತೆಯೇ ಕ್ರಿಕೆಟ್ ಅಭಿಮಾನಿಗಳು ಹಾಗೂ ಕ್ರಿಕೆಟ್ ಜಗತ್ತು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.

47

ಇನ್ನು ವೆಂಕಟೇಶ್ ಅಯ್ಯರ್ ಹಾಗೂ ಶೃತಿ ಜೋಡಿ ಕಳೆದ ವರ್ಷದ ನವೆಂಬರ್ 21, 2023ರಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಈ ಮೂಲಕ ತಮ್ಮ ಬಹುಕಾಲದ ಪ್ರೀತಿಯನ್ನು ಜಗತ್ತಿನ ಮುಂದೆ ಅನಾವರಣ ಮಾಡಿದ್ದರು.

57

ಇನ್ನು ಕ್ರಿಕೆಟ್ ವಿಚಾರಕ್ಕೆ ಬಂದರೆ, ವೆಂಕಟೇಶ್ ಅಯ್ಯರ್ 15 ಪಂದ್ಯಗಳನ್ನಾಡಿ 4 ಅರ್ಧಶತಕ ಸಹಿತ 370 ರನ್ ಸಿಡಿಸುವ ಮೂಲಕ ಕೋಲ್ಕತಾ ನೈಟ್ ರೈಡರ್ಸ್ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

67

17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಿ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

77

ಟೀಂ ಇಂಡಿಯಾ ಕ್ರಿಕೆಟಿಗ ವೆಂಕಟೇಶ್ ಅಯ್ಯರ್ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories