T20 World Cup ಟೂರ್ನಿಯಲ್ಲಿ ಮಿಂಚಲು ರೆಡಿಯಾಗಿದ್ದಾರೆ ಈ ಐವರು IPL ಸ್ಟಾರ್‌ಗಳು..!

Suvarna News   | Asianet News
Published : Oct 21, 2021, 04:05 PM IST

ಬೆಂಗಳೂರು: ಬಹುನಿರೀಕ್ಷಿತ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ಈಗಾಗಲೇ ಅಧಿಕೃತ ಚಾಲನೆ ಸಿಕ್ಕಿದ್ದು, ಮೊದಲಿಗೆ ಅರ್ಹತಾ ಸುತ್ತಿನ ಪಂದ್ಯಾವಳಿಗಳು ನಡೆಯುತ್ತಿವೆ. ಅಕ್ಟೋಬರ್ 23ರಿಂದ ಸೂಪರ್ 12 ಹಂತದ ಪಂದ್ಯಾವಳಿಗಳು ಆರಂಭವಾಗಲಿವೆ. 14ನೇ ಆವೃತ್ತಿಯ ಐಪಿಎಲ್‌ (IPL 2021) ಟೂರ್ನಿಯಲ್ಲಿ ಅಬ್ಬರಿಸಿರುವ ಈ ಐವರು ಆಟಗಾರರು ಇದೀಗ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಅಷ್ಟಕ್ಕೂ ಯಾರು ಆ ಕ್ರಿಕೆಟಿಗರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.  

PREV
110
T20 World Cup ಟೂರ್ನಿಯಲ್ಲಿ ಮಿಂಚಲು ರೆಡಿಯಾಗಿದ್ದಾರೆ ಈ ಐವರು IPL ಸ್ಟಾರ್‌ಗಳು..!
1. ವರುಣ್ ಚಕ್ರವರ್ತಿ

ಕೋಲ್ಕತ ನೈಟ್‌ ರೈಡರ್ಸ್‌ (Kolkata Knight Riders) ತಂಡದ ಮಿಸ್ಟ್ರಿ ಸ್ಪಿನ್ನರ್ ವರುಣ್‌ ಚಕ್ರವರ್ತಿ (Varun Chakravarthy) ಐಪಿಎಲ್‌ ಟೂರ್ನಿಯಲ್ಲಿ ತೋರಿದ ಅಮೋಘ ಪ್ರದರ್ಶನದ ನೆರವಿನಿಂದ ಭಾರತದ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. 
 

210

ವರುಣ್ ಚಕ್ರವರ್ತಿ ಆಸ್ಟ್ರೇಲಿಯಾ ವಿರುದ್ದದ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿದರಾದರೂ ಹೆಚ್ಚಿನ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವರಣ್‌ 17 ಪಂದ್ಯಗಳನ್ನಾಡಿ 18 ವಿಕೆಟ್ ಕಬಳಿಸಿದ್ದು, ಇದೀಗ ಚೊಚ್ಚಲ ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.

310
2. ಲಾಕಿ ಫರ್ಗ್ಯೂಸನ್‌

ಕೋಲ್ಕತ ನೈಟ್ ರೈಡರ್ಸ್‌ ತಂಡವು ಐಪಿಎಲ್ ಫೈನಲ್‌ಗೇರುವಲ್ಲಿ ವೇಗಿ ಲಾಕಿ ಫರ್ಗ್ಯೂಸನ್‌ (Lockie Ferguson) ಪಾತ್ರ ಸಾಕಷ್ಟು ಮಹತ್ವದ್ದಾಗಿತ್ತು. ಕೆಕೆಆರ್ ಪರ ಕೇವಲ 8 ಪಂದ್ಯಗಳನ್ನಾಡಿ 13 ಬಲಿ ಪಡೆಯುವಲ್ಲಿ ಫರ್ಗ್ಯೂಸನ್ ಯಶಸ್ವಿಯಾಗಿದ್ದರು. 
 

410

ಕಿವೀಸ್ ವೇಗಿ ಐಪಿಎಲ್‌ನಲ್ಲಿ ಕೇವಲ ವಿಕೆಟ್‌ ಕಬಳಿಸಿದ್ದು ಮಾತ್ರವಲ್ಲ, ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳ ರನ್‌ ವೇಗಕ್ಕೂ ಕಡಿವಾಣ ಹಾಕಿದ್ದರು. ಇದೀಗ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಪರ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಐಪಿಎಲ್‌ನಲ್ಲಿ ತೋರಿದ ಪ್ರದರ್ಶನವನ್ನೇ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.

510
3. ರಿಷಭ್‌ ಪಂತ್

ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ನಾಯಕ ರಿಷಭ್‌ ಪಂತ್ (Rishabh Pant) 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳನ್ನಾಡಿ 419 ರನ್‌ ಬಾರಿಸುವ ಮೂಲಕ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದರು.

610

ಪಂತ್ ನೇತೃತ್ವದ ಡೆಲ್ಲಿ ತಂಡವು ಐಪಿಎಲ್ ಟೂರ್ನಿಯಲ್ಲಿ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಪಂತ್ ಐಪಿಎಲ್‌ ಟೂರ್ನಿಯಲ್ಲಿ ತೋರಿದ ಪ್ರದರ್ಶನವನ್ನು ತಾವಾಡುವ ಚೊಚ್ಚಲ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.

710
4. ಕೆ.ಎಲ್‌. ರಾಹುಲ್‌

ಕನ್ನಡಿಗ ಕೆ.ಎಲ್. ರಾಹುಲ್‌ (KL Rahul) ಐಪಿಎಲ್‌ ಟೂರ್ನಿಯುದ್ದಕ್ಕೂ ಗಮನಾರ್ಹ ಪ್ರದರ್ಶನ ತೋರುವ ಮೂಲಕ ಕೇವಲ 13 ಪಂದ್ಯಗಳನ್ನಾಡಿ 626 ರನ್‌ ಚಚ್ಚಿ ಲೀಗ್ ಹಂತ ಮುಕ್ತಾಯದ ವೇಳೆಗೆ ಟೂರ್ನಿಯಲ್ಲಿ ಗರಿಷ್ಠ ರನ್‌ ಬಾರಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. 
 

810

ಫೈನಲ್‌ ಪಂದ್ಯದಲ್ಲಿ ಸಿಎಸ್‌ಕೆ (CSK) ಬ್ಯಾಟ್ಸ್‌ಮನ್‌ಗಳಾದ ಗಾಯಕ್ವಾಡ್ ಹಾಗೂ ಡು ಪ್ಲೆಸಿಸ್‌ ಪಂಜಾಬ್ ಕಿಂಗ್ಸ್‌ (Punjab Kings) ತಂಡದ ನಾಯಕನನ್ನು ಹಿಂದಿಕ್ಕಿದ್ದರು. ವೃತ್ತಿಜೀವನದ ಅದ್ಭುತ ಫಾರ್ಮ್‌ನಲ್ಲಿರುವ ರಾಹುಲ್ ತಮ್ಮ ಚೊಚ್ಚಲ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಎದುರು ನೋಡುತ್ತಿದ್ದಾರೆ.

910
5. ಶಾರ್ದೂಲ್ ಠಾಕೂರ್

ಚೆನ್ನೈ ಸೂಪರ್ ಕಿಂಗ್ಸ್ ಪರ ಮಿಂಚಿನ ಪ್ರದರ್ಶನ ತೋರಿದ್ದ ಶಾರ್ದೂಲ್ ಠಾಕೂರ್ (Shardul Thakur) ಕೊನೆಯ ಕ್ಷಣದಲ್ಲಿ ಟೀಂ ಇಂಡಿಯಾ 15 ಆಟಗಾರರ ತಂಡ ಕೂಡಿಕೊಂಡಿದ್ದಾರೆ. ಮೊದಲಿಗೆ ಶಾರ್ದೂಲ್ ಮೀಸಲು ಆಟಗಾರರಾಗಿದ್ದರು, ಆದರೆ ಐಪಿಎಲ್‌ನಲ್ಲಿ ಮಿಂಚಿ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

1010

14ನೇ ಆವೃತ್ತಿಯ ಐಪಿಎಲ್‌ನಲ್ಲಿ ಶಾರ್ದೂಲ್ ಠಾಕೂರ್ 16 ಪಂದ್ಯಗಳನ್ನಾಡಿ 21 ವಿಕೆಟ್ ಕಬಳಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್‌ (Chennai Super Kings) ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ ಆಗಿ ಹೊರಹೊಮ್ಮಿದ್ದರು. ಇದೀಗ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಠಾಕೂರ್ ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories