ಐಪಿಎಲ್ 2026ರ ಸೀಸನ್‌ಗೆ ಕೋಲ್ಕತಾ ನೈಟ್ ರೈಡರ್ಸ್ ತಂಡವು ಅಜಿಂಕ್ಯ ರಹಾನೆಯನ್ನು ತಮ್ಮ ನಾಯಕನನ್ನಾಗಿ ಅಧಿಕೃತವಾಗಿ ಘೋಷಿಸಿದೆ. ರಿಂಕು ಸಿಂಗ್ ಹೆಸರು ಕೂಡ ಚರ್ಚೆಯಲ್ಲಿತ್ತು, ಆದರೆ ಮ್ಯಾನೇಜ್‌ಮೆಂಟ್ ರಹಾನೆ ಮೇಲೆಯೇ ನಂಬಿಕೆ ಇಟ್ಟಿದೆ. ಅಷ್ಟಕ್ಕೂ ಕೆಕೆಆರ್ ಪ್ಲ್ಯಾನ್ ಏನು?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಸೀಸನ್‌ಗೆ ಸಿದ್ಧತೆಗಳು ಜೋರಾಗಿವೆ. ಎಲ್ಲಾ ತಂಡಗಳು ತಮ್ಮ ತಯಾರಿ ಆರಂಭಿಸಿವೆ. ಈ ನಡುವೆ, ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತನ್ನ ನಾಯಕ ಯಾರೆಂಬ ಕುತೂಹಲಕ್ಕೆ ತೆರೆ ಎಳೆದಿದೆ. ರಿಂಕು ಸಿಂಗ್ ನಾಯಕರಾಗುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಹಿರಿಯ ಆಟಗಾರ ಅಜಿಂಕ್ಯ ರಹಾನೆ ಅವರೇ ಮುಂಬರುವ ಸೀಸನ್‌ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಕೆಕೆಆರ್ ಅಧಿಕೃತವಾಗಿ ಘೋಷಿಸಿದೆ.
26
ಕಳೆದ ಆವೃತ್ತಿಯಲ್ಲೂ ಕೆಕೆಆರ್ ಮುನ್ನಡೆಸಿದ್ದ ರಹಾನೆ
ಕಳೆದ ಸೀಸನ್‌ನಲ್ಲೂ ಅಜಿಂಕ್ಯ ರಹಾನೆ ಕೆಕೆಆರ್ ತಂಡವನ್ನು ಮುನ್ನಡೆಸಿದ್ದರು. ಆದರೆ, 2024ರಲ್ಲಿ ಚಾಂಪಿಯನ್ ಆಗಿದ್ದ ಕೋಲ್ಕತಾ, 2025ರಲ್ಲಿ ರಹಾನೆ ನಾಯಕತ್ವದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ತಂಡವು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದು ಪ್ಲೇಆಫ್ ತಲುಪಲು ವಿಫಲವಾಗಿತ್ತು. ಆದರೂ, ಬ್ಯಾಟರ್ ಆಗಿ ರಹಾನೆ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ್ದರು. ಇದೀಗ, ಕೆಕೆಆರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ ಮಾಡಿ, ರಹಾನೆಯೇ ತಮ್ಮ ನಾಯಕ ಎಂದು ಖಚಿತಪಡಿಸಿದೆ. ಇದಕ್ಕೂ ಮುನ್ನ ರಹಾನೆ ತಮ್ಮ ಲಿಂಕ್ಡ್‌ಇನ್ ಖಾತೆಯಲ್ಲಿ ತಾವೇ ತಂಡವನ್ನು ಮುನ್ನಡೆಸುವ ಬಗ್ಗೆ ಸುಳಿವು ನೀಡಿದ್ದರು.
36
ನಾಯಕತ್ವ ರೇಸ್‌ನಲ್ಲಿದ್ದ ರಿಂಕುಗೆ ನಿರಾಸೆ
ನಾಯಕತ್ವದ ರೇಸ್‌ನಲ್ಲಿ ಸ್ಟಾರ್ ಫಿನಿಶರ್ ರಿಂಕು ಸಿಂಗ್ ಹೆಸರು ಬಲವಾಗಿ ಕೇಳಿಬಂದಿತ್ತು. ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ರಿಂಕು ಸಿಂಗ್ ಪರವಾಗಿಯೇ ಮತ ಚಲಾಯಿಸಿದ್ದರು. ಯುಪಿ ಟಿ20 ಲೀಗ್‌ನಲ್ಲಿ ಮೀರತ್ ಮ್ಯಾವೆರಿಕ್ಸ್ ಮತ್ತು ರಣಜಿ ಟ್ರೋಫಿ 2024-25ರಲ್ಲಿ ಉತ್ತರ ಪ್ರದೇಶ ತಂಡವನ್ನು ಮುನ್ನಡೆಸಿದ ಅನುಭವ ರಿಂಕುಗೆ ಇದೆ. ಕೆಕೆಆರ್ ಜೊತೆ ಸುದೀರ್ಘ ಒಡನಾಟ ಹೊಂದಿರುವ ರಿಂಕು ನಾಯಕರಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಮ್ಯಾನೇಜ್‌ಮೆಂಟ್ ಅನುಭವಿ ರಹಾನೆಗೆ ಮಣೆ ಹಾಕಿದೆ. ಹರಾಜಿನ ಮುನ್ನವೇ ನಾಯಕನನ್ನು ನಿರ್ಧರಿಸದೆ, ಕೊನೆ ಕ್ಷಣದಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಟೀಕೆಗಳು ವ್ಯಕ್ತವಾಗುತ್ತಿವೆ.
ಐಪಿಎಲ್ 2026ಕ್ಕೆ ಕೆಕೆಆರ್ ತನ್ನ ಕೋಚಿಂಗ್ ಸಿಬ್ಬಂದಿಯಲ್ಲಿ ದೊಡ್ಡ ಬದಲಾವಣೆ ಮಾಡಿದೆ. ಅಭಿಷೇಕ್ ನಾಯರ್ ಅವರನ್ನು ಹೆಡ್ ಕೋಚ್ ಆಗಿ ನೇಮಿಸಿದ್ದು, ಶೇನ್ ವ್ಯಾಟ್ಸನ್ ಸಹಾಯಕ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆಂಡ್ರೆ ರಸೆಲ್ ಪವರ್ ಕೋಚ್ ಆಗಿ ಮತ್ತು ಟಿಮ್ ಸೌಥಿ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಕಳೆದ ಹರಾಜಿನಲ್ಲಿ ಕೆಕೆಆರ್, 63 ಕೋಟಿ ರೂ.ಗಳ ಬೃಹತ್ ಮೊತ್ತದೊಂದಿಗೆ ಕಣಕ್ಕಿಳಿದು, ಕ್ಯಾಮರೂನ್ ಗ್ರೀನ್‌ರನ್ನು 25.20 ಕೋಟಿ ರೂ.ಗೆ ಮತ್ತು ಮತೀಶ ಪತಿರಾನರನ್ನು 18 ಕೋಟಿ ರೂ.ಗೆ ಖರೀದಿಸಿತ್ತು. ಇದಕ್ಕೂ ಮುನ್ನ ಶ್ರೇಯಸ್ ಅಯ್ಯರ್ ಅವರನ್ನು ಕೈಬಿಟ್ಟು, ವೆಂಕಟೇಶ್ ಅಯ್ಯರ್ ಅವರನ್ನು 23.75 ಕೋಟಿ ರೂ.ಗೆ ಉಳಿಸಿಕೊಂಡಿತ್ತು. ಆದರೆ ಅವರು ವಿಫಲವಾದ ಕಾರಣ ಈ ಬಾರಿ ಹೊಸ ತಂತ್ರಗಳೊಂದಿಗೆ ಕಣಕ್ಕಿಳಿಯುತ್ತಿದೆ.
56
ಐಪಿಎಲ್ ಆರಂಭಕ್ಕೂ ಮೊದಲೇ ಕೆಕೆಆರ್‌ಗೆ ಶಾಕ್
ಸೀಸನ್ ಆರಂಭಕ್ಕೂ ಮುನ್ನವೇ ಕೆಕೆಆರ್‌ಗೆ ದೊಡ್ಡ ಹಿನ್ನಡೆಯಾಗಿದೆ. ಸ್ಟಾರ್ ಬೌಲರ್ ಹರ್ಷಿತ್ ರಾಣಾ ಮೊಣಕಾಲಿನ ಗಾಯದಿಂದಾಗಿ 2026ರ ಸಂಪೂರ್ಣ ಸೀಸನ್‌ನಿಂದ ಹೊರಗುಳಿಯಲಿದ್ದಾರೆ. 2026ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅವರು ಗಾಯಗೊಂಡಿದ್ದರು. ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ತೆಗೆದುಕೊಳ್ಳಲು ಕೆಕೆಆರ್ ಆಸಕ್ತಿ ತೋರುತ್ತಿಲ್ಲ. ಮತ್ತೊಂದೆಡೆ, ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು 9.20 ಕೋಟಿ ರೂ.ಗೆ ಖರೀದಿಸಿದ್ದರೂ, ಬಿಸಿಸಿಐ ಆದೇಶದ ಮೇರೆಗೆ ಅವರನ್ನು ಬಿಡುಗಡೆ ಮಾಡಬೇಕಾಯಿತು. ಅವರ ಸ್ಥಾನಕ್ಕೆ ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಜಾರಬಾನಿಯನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.