ಅರ್ಜುನ್ ತೆಂಡೂಲ್ಕರ್ ಸಾನಿಯಾ ಮದುವೆ ಪ್ರಧಾನಿ ಮೋದಿ ಆಹ್ವಾನಿಸಿದ ಕ್ರಿಕೆಟ್ ದೇವರ ಕುಟುಂಬ

Published : Feb 10, 2026, 09:03 PM IST

ಅರ್ಜುನ್ ತೆಂಡೂಲ್ಕರ್ ಸಾನಿಯಾ ಮದುವೆ ಪ್ರಧಾನಿ ಮೋದಿ ಆಹ್ವಾನಿಸಿದ ಸಚಿನ್ ಕುಟುಂಬ, ಪ್ರಧಾನಿ ಮೋದಿ ಮಾತ್ರವಲ್ಲ, ಅಮಿತ್ ಶಾ ಸೇರಿದಂತೆ ಪ್ರಮುಖ ಗಣ್ಯರನ್ನು ತೆಂಡೂಲ್ಕರ್ ಕುಟುಂಬ ಮದುವೆಗೆ ಆಹ್ವಾನಿಸಿದೆ. 

PREV
15
ಮೋದಿಗೆ ಆಹ್ವಾನ

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಸಾನಿಯಾ ಚಂದೋಕ್ ಜೊತೆ ಅರ್ಜುನ್ ತೆಂಡೂಲ್ಕರ್ ಮದುವೆಯಾಗುತ್ತಿದ್ದಾರೆ. ಇದೀಗ ಸಚಿನ್ ತೆಂಡೂಲ್ಕರ್ ಕುಟುಂಬ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ. ಇಂದು ಪ್ರಧಾನಿ ಮೋದಿ ಭೇಟಿಯಾದ ತೆಂಡೂಲ್ಕರ್ ಕುಟುಂಬ, ಮದುವೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದೆ.

25
ಸಂತಸ ಹಂಚಿಕೊಂಡ Sachin Tendulkar

ಪ್ರಧಾನಿ ಮೋದಿ ಭೇಟಿಯಾದ ಸಚಿನ್ ತೆಂಡೂಲ್ಕರ್ ಕುಟುಂಬ ಸೋಶಿಯಲ್ ಮೀಡಯಾ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಂದೋಕ್ ಮದುವೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಆಹ್ವಾನ ನೀಡಾಲಾಯಿತು. ಯುವ ಜೋಡಿಗೆ ಸಲಹೆ ಹಾಗೂ ಮಾರ್ಗದರ್ಶನ ಜೊತೆಗೆ ಆಶೀರ್ವದಿಸಿದ ಪ್ರಧಾನಿಗೆ ಧನ್ಯವಾದ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

35
ಮಾರ್ಚ್ 5ಕ್ಕೆ ಮದುವೆ

ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಂದೋಕ್ ಮದುವೆ ಮಾರ್ಚ್ 5, 2026ರಂದು ನಡೆಯಲಿದೆ. ಮುಂಬೈನಲ್ಲಿ ಅದ್ಧೂರಿಯಾಗಿ ವಿವಾಹ ಮಹೋತ್ಸವ ನಡೆಯಲಿದೆ. ಆಪ್ತರು, ಸಚಿನ್ ತೆಂಡೂಲ್ಕರ್ ಟೀಮ್ ಮೇಟ್ಸ್, ಕುಟುಂಬಸ್ಥರು, ಗಣ್ಯರಿಗೆ ಆಹ್ವಾನ ನೀಡಾಲಾಗಿದೆ. ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮದುವೆಗೆ ಆಮಂತ್ರಣ ನೀಡಿದ್ದಾರೆ.

45
ಯಾರು ಈ ಸಾನಿಯಾ ಚಂದೋಕ್

Arjun Tendulkar ಬಹುಕಾಲದ ಗೆಳತಿ ಸಾನಿಯಾ ಚಂದೋಕ್ ಜೊತೆ ಮದುವೆಯಾಗುತ್ತಿದ್ದಾರೆ. ಸಾನಿಯಾ ಜನಪ್ರಿಯ ಕೈಗಾರಿಕೋದ್ಯಮಿ ಕುಟುಂಬದ ಕುಡಿ. ಗ್ರಾವಿಸ್ ಗ್ರೂಪ್ ಸಂಸ್ಥೆ ನಡೆಸುತ್ತಿರುವ ರವಿ ಘೈ ಮೊಮ್ಮಳಾಗಿದ್ದಾರೆ. ಬ್ಲೂಕ್ಲಿನ್ ಕ್ರೀಮರಿ, ಬಾಸ್ಕಿನ್ ರಾಬಿನ್ಸ್ ಐಸ್ ಕ್ರೀಂ ಬ್ರ್ಯಾಂಡ್ ಸೇರಿದಂತೆ ಹಲವು ಉತ್ಪನ್ನಗಳನ್ನು ಗ್ರಾವಿಸ್ ಗ್ರೂಪ್ ಹೊಂದಿದೆ.

55
ಅರ್ಜುನ್ ತೆಂಡೂಲ್ಕರ್ ಕರಿಯರ್

ಅರ್ಜುನ್ ತೆಂಡೂಲ್ಕರ್ ವೇಗಿಯಾಗಿ ಕ್ರಿಕೆಟ್‌ನಲ್ಲಿ ಮಿಂಚುತ್ತಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ಪ್ರತಿನಿಧಿಸುತ್ತಿದ್ದ ಅರ್ಜುನ್ ತೆಂಡೂಲ್ಕರ್ ಸದ್ಯ ಗೋವಾ ಪ್ರತಿನಿಧಿಸುತ್ತಿದ್ದಾರೆ. ಆದರೆ ಅರ್ಜುನ್ ತೆಂಡೂಲ್ಕರ್ ಕ್ರಿಕೆಟ್ ಕರಿಯರ್‌ನಲ್ಲಿ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಹಲವು ಏರಿಳಿತ ಕಾಣುತ್ತಿರುವ ಅರ್ಜುನ್ ತೆಂಡೂಲ್ಕರ್ ದೇಶಿ ಕ್ರಿಕೆಟ್‌ಗೆ ಸೀಮಿತವಾಗಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories