Image credit: Getty
ಐಪಿಎಲ್‌ನ ಹೊಸ ತಂಡವಾದ ಲಖನೌ ಸೂಪರ್ ಜೈಂಟ್ಸ್ ತಂಡವು 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 31ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರು 18 ರನ್‌ಗಳ ರೋಚಕ ಸೋಲು ಅನುಭವಿಸಿದೆ. ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ತಪ್ಪಿಗಾಗಿ ಲಖನೌ ತಂಡದ ನಾಯಕ ಕೆ.ಎಲ್. ರಾಹುಲ್ ಹಾಗೂ ಆಲ್ರೌಂಡರ್ ಮಾರ್ಕಸ್ ಸ್ಟೋನಿಸ್‌ಗೆ ದಂಡ ವಿಧಿಸಲಾಗಿದೆ.
Image credit: Getty
ಐಪಿಎಲ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ತಪ್ಪಿಗಾಗಿ ಪಂದ್ಯದ ಸಂಭಾವನೆಯ 20% ದಂಡವನ್ನು ವಿಧಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ ಐಪಿಎಲ್‌ನ ಯಾವ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎನ್ನುವ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ.
Image credit: Getty
ಇನ್ನು ಮುಂದುವರೆದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ನಡೆದ ಪಂದ್ಯದ ವೇಳೆಯಲ್ಲಿಯೇ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಲಖನೌ ಸೂಪರ್ ಜೈಂಟ್ಸ್ ಆಲ್ರೌಂಡರ್ ಮಾರ್ಕಸ್ ಸ್ಟೋನಿಸ್ ಅವರಿಗೆ ಛೀಮಾರಿ ಹಾಕಲಾಗಿದೆ. ಜೋಶ್ ಹೇಜಲ್‌ವುಡ್ ಬೌಲಿಂಗ್ ವೇಳೆ ಸ್ಟೋನಿಸ್ ಅಂಪೈರ್ ಮೇಲೆ ಅಸಮಾಧಾನ ಹೊರಹಾಕಿದ್ದರು. ಈ ಕಾರಣಕ್ಕಾಗಿಯೇ ಆಸೀಸ್ ಆಲ್ರೌಂಡರ್‌ಗೆ ಛೀಮಾರಿ ಹಾಕಲಾಗಿದೆ ಎನ್ನಲಾಗಿದೆ.
Image credit: Getty
ಕೆ.ಎಲ್ ರಾಹುಲ್ ಹಾಗೂ ಮಾರ್ಕಸ್ ಸ್ಟೋನಿಸ್ ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಐಪಿಎಲ್ ನೀತಿ ಸಂಹಿತೆಯ ಮೊದಲ ಹಂತದ ತಪ್ಪನ್ನು ಮಾಡಿರುವುದರಿಂದ ಮ್ಯಾಚ್ ರೆಫ್ರಿ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.