India vs England T20 Series 2026: Match Timings Revised: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಇದೀಗ ಮಹತ್ವದ ಬದಲಾವಣೆಗಳಾಗಿದೆ. ಭಾರತೀಯ ಕ್ರಿಕೆಟ್ ಫ್ಯಾನ್ಸ್‌ಗೋಸ್ಕರ ಪಂದ್ಯ ಆಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಭಾರತ-ಇಂಗ್ಲೆಂಡ್ ನಡುವಿನ ಟಿ20 ಸರಣಿ ವೇಳಾಪಟ್ಟಿಯಲ್ಲಿ ಬದಲಾವಣೆ
ಭಾರತ ಹಾಗೂ ಇಂಗ್ಲೆಂಡ್ ನಡುವೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಯ ಪೈಕಿ ಮೂರು ಪಂದ್ಯಗಳು ನಿಗದಿತ ಅವಧಿಗಿಂತ ಒಂದು ಗಂಟೆ ಮೊದಲೇ ಆರಂಭಿಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ(ಇಸಿಬಿ) ನಿರ್ಧರಿಸಿದೆ.
26
ಭಾರತೀಯರ ಬೇಡಿಕೆಗೆ ಮಂಡಿಯೂರಿದ ಬ್ರಿಟೀಷರು
ಈ ಮೊದಲು ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ(ಸ್ಥಳೀಯ ಕಾಲಮಾನ ಸಂಜೆ 6.30ಕ್ಕೆ) ಆರಂಭಗೊಳ್ಳಬೇಕಿತ್ತು. ಆದರೆ ರಾತ್ರಿ ತಡವಾಗಿ ಆರಂಭಗೊಂಡರೆ ಭಾರತದಲ್ಲಿ ಪಂದ್ಯ ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗಲಿದೆ. ಇದರಿಂದ ಪ್ರಸಾರಕರಿಗೆ ನಷ್ಟವಾಲಿದೆ. ಇದೇ ಕಾರಣಕ್ಕಾಗಿ ಬ್ರಿಟೀಷರು ಭಾರತೀಯರ ಬೇಡಿಕೆಗೆ ಮಂಡಿಯೂರಿದ್ದಾರೆ.
36
ಮೂರು ಪಂದ್ಯಗಳು ಒಂದು ಗಂಟೆ ಮುಂಚಿತವಾಗಿ ಆರಂಭ
ಹೀಗಾಗಿ ಪ್ರಸಾರಕರು, ಇಸಿಬಿ, ಬಿಸಿಸಿಐ ನಡುವಿನ ಮಾತುಕತೆ ಬಳಿಕ ಪಂದ್ಯವನ್ನು 1 ಗಂಟೆ ಮೊದಲೇ ಆರಂಭಿಸಲು ನಿರ್ಧರಿಸಲಾಗಿದೆ. ಹೊಸ ವೇಳಾಪಟ್ಟಿ ಪ್ರಕಾರ ಪಂದ್ಯ ಭಾರತೀಯ ಕಾಲಮಾನ ರಾತ್ರಿ 10 ಗಂಟೆಗೆ(ಸ್ಥಳೀಯ ಕಾಲಮಾನ ಸಂಜೆ 5.30) ಆರಂಭಗೊಳ್ಳಲಿದೆ. ಈ ಪಂದ್ಯಗಳು ಭಾರತದಲ್ಲಿ ಸೋನಿ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರವಾಗಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಸರಣಿಯ ಪಂದ್ಯಗಳು ಜುಲೈ 1, 4, 7, 9 ಹಾಗೂ 11ರಂದು ನಡೆಯಲಿವೆ. ಈ ಪಂದ್ಯಗಳ ಪೈಕಿ ಒಂದು, ಮೂರು ಹಾಗೂ ನಾಲ್ಕನೇ ಟಿ20 ಪಂದ್ಯಗಳು ಒಂದು ಗಂಟೆ ಮುಂಚಿತವಾಗಿ ಆರಂಭವಾಗಲಿದೆ.
56
ಏಕದಿನ ಸರಣಿಯ ಎಲ್ಲಾ ಟಿಕೆಟ್ ಸೋಲ್ಡೌಟ್:
ಇನ್ನು ಭಾರತ-ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಮೊದಲು ಆರಂಭವಾಗಲಿದ್ದು, ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯುತ್ತಿರುವುದರಿಂದ ಏಕದಿನ ಸರಣಿಯ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ. ಆದರೆ ಟಿ20 ಸರಣಿಯ ಟಿಕೆಟ್‌ಗಳು ಇನ್ನೂ ಲಭ್ಯವಿವೆ.
66
ವೈಭವ್, ಕೊಹ್ಲಿ ಮೇಲೆ ಎಲ್ಲರ ಕಣ್ಣು:
ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಯಲ್ಲಿ ಭಾರತದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕಣಕ್ಕಿಳಿಯುತ್ತಿದ್ದಾರೆ. ಐಪಿಎಲ್‌ನಲ್ಲಿ ಅಬ್ಬರಿಸಿರುವ ವೈಭವ್, ಭಾರತ ಸೀನಿಯರ್ಸ್ ತಂಡದಲ್ಲಿ ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ. ಇನ್ನೊಂದೆಡೆ ವಿರಾಟ್ ಕೊಹ್ಲಿ, ಆಫ್ಘಾನ್ ಎದುರಿನ ಸರಣಿಯಿಂದ ಹೊರಗುಳಿದಿದ್ದು, ಇಂಗ್ಲೆಂಡ್ ಎದುರಿನ ಏಕದಿನ ಸರಣಿಗೆ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಈ ಇಬ್ಬರ ಮೇಲೆ ಕ್ರಿಕೆಟ್ ಅಭಿಮಾನಿಗಳ ಕಣ್ಣಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.