ನವದೆಹಲಿ: ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಪಾಲಿಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದ್ದು, ಮುಂದಿನ ಎರಡು ತಿಂಗಳು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವುದು ಅನುಮಾನ ಎನಿಸಿದೆ. ಈ ಕುರಿತಾದ ಮಹತ್ವದ ಅಪ್‌ಡೇಟ್ ಇಲ್ಲಿದೆ ನೋಡಿ.
ಶ್ರೇಯಸ್ ಅಯ್ಯರ್ ಮುಂದಿನ ಎರಡು ತಿಂಗಳು ಕ್ರಿಕೆಟ್‌ನಿಂದ ಔಟ್
ಕಳೆದ ತಿಂಗಳು ನಡೆದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ವೇಳೆ ಗಾಯಗೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಟೀಂ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಮುಂದಿನ 2 ತಿಂಗಳು ಕ್ರಿಕೆಟ್‌ನಿಂದ ದೂರ ಉಳಿಯುವ ಸಾಧ್ಯತೆಯಿದೆ.
26
ಭಾರತಕ್ಕೆ ವಾಪಸ್ಸಾಗಿರುವ ಅಯ್ಯರ್
ನ.16ಕ್ಕೆ ಸಿಡ್ನಿಯಿಂದ ಭಾರತಕ್ಕೆ ಬಂದಿರುವ ಶ್ರೇಯಸ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರು ಸಂಪೂರ್ಣ ಗುಣಮುಖರಾಗಿ, ದೈಹಿಕವಾಗಿ ಫಿಟ್ ಆಗಲು ಒಂದೆರೆಡು ತಿಂಗಳು ಅವಶ್ಯಕ.
36
ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಿಂದ ಔಟ್
ಇದೇ ಕಾರಣಕ್ಕೆ ದಕ್ಷಿಣ ಆಫ್ರಿಕಾ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಆಯ್ಕೆಗೆ ಅಲಭ್ಯರಾಗಿದ್ದಾರೆ.
ಇದರಿಂದಾಗಿ ಜನವರಿಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ತೀರಾ ಕಡಿಮೆ. ಒಂದು ಮೂಲದ ಪ್ರಕಾರ ಫೆಬ್ರವರಿಯಲ್ಲಿ ಭಾರತ, ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ವೇಳೆಗೆ ಶ್ರೇಯಸ್ ಪೂರ್ಣ ಫಿಟ್ ಆಗದಿದ್ದರೆ ಅವರನ್ನು ಟೂರ್ನಿಗೆ ಆಯ್ಕೆ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
56
19ನೇ ಆವೃತ್ತಿಯ ಐಪಿಎಲ್ ವೇಳೆಗೆ ಫಿಟ್
29 ವರ್ಷದ ಮುಂಬೈ ಮೂಲದ ಕ್ರಿಕೆಟಿಗ ಶ್ರೇಯಸ್ ಅಯ್ಯರ್, ಒಂದು ವೇಳೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದರೂ, 19ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಸಂಪೂರ್ಣ ಫಿಟ್ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
66
ಐಪಿಎಲ್ ಫೈನಲ್‌ನಲ್ಲಿ ಪಂಜಾಬ್‌ಗೆ ನಿರಾಸೆ
18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಫೈನಲ್ ಪ್ರವೇಶಿಸಿತ್ತಾದರೂ, ಪ್ರಶಸ್ತಿ ಸುತ್ತಿನಲ್ಲಿ ಆರ್‌ಸಿಬಿ ಎದುರು ಮುಗ್ಗರಿಸುವ ಮೂಲಕ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.