Mohammad Shami 200 Wickets Club: ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ..!

Suvarna News   | Asianet News
Published : Dec 29, 2021, 08:58 AM ISTUpdated : Dec 29, 2021, 08:59 AM IST

ಸೆಂಚೂರಿಯನ್‌: ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ (Boxing Day Test) ಪಂದ್ಯದ ಮೂರನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ(Virat Kohli) ನೇತೃತ್ವದ ಟೀಂ ಇಂಡಿಯಾ (Team India) ಭರ್ಜರಿ ಪ್ರದರ್ಶನ ತೋರುವ ಮೂಲಕ ಮೊದಲ ಇನಿಂಗ್ಸ್‌ ಮುನ್ನಡೆ ಪಡೆದುಕೊಂಡಿದೆ. ಇಲ್ಲಿನ ಸೂಪರ್‌ ಸ್ಪೋರ್ಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ದಿನ ಕೆ.ಎಲ್‌. ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿ ಗಮನ ಸೆಳೆದರೆ, ಮೂರನೇ ದಿನದಾಟದಲ್ಲಿ ವೇಗಿ ಮೊಹಮ್ಮದ್ ಶಮಿ (Mohammad Shami) ಆಕರ್ಷಕ ಬೌಲಿಂಗ್ ಮೂಲಕ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. ಶಮಿ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಕಬಳಿಸಿದ ಭಾರತದ ಐದನೇ ವೇಗದ ಬೌಲರ್ ಎನ್ನುವ ದಾಖಲೆಗೆ ಪಾತ್ರರಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

PREV
19
Mohammad Shami 200 Wickets Club: ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ..!

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮೊದಲ ದಿನದಿಂದಲೇ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ದ ಬಿಗಿ ಹಿಡಿತ ಸಾಧಿಸುವತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ.

29

ಇದುವರೆಗೂ ಭಾರತ ತಂಡವು ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಯನ್ನು ಜಯಿಸಿಲ್ಲ. ಇದೀಗ ಹೊಸ ಕನಸಿನೊಂದಿಗೆ ಟೆಸ್ಟ್ ಸರಣಿಯನ್ನು ಆರಂಭಿಸಿದ್ದು, ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿತ್ತು.
 

39
Ind vs SA: অনবদ্য শুরুর রাহুল-মায়াঙ্কের, বড় রানের লক্ষ্যে টিম ইন্ডিয়া

সেঞ্চুরিয়নে (Centurion) ভারত বনাম  দক্ষিণ আফ্রিকার (India vs South Africa) বক্সিং ডে টেস্ট (Boxing Day Test)। জয় দিয়ে সিরিজ শুরু করতে মরিয়া বিরাট কোহলি (Virat Kohli)ও ডিন এলগারের (Dean Elgar)দল। টস জিতে ব্য়াটিংয়ের সিদ্ধান্ত ভারতের। ভালো শুরু দুই ওপেনার কেএল রাহুল ( KL Rahul) ও মায়াঙ্ক আগরওয়ালের (Mayank Agarwal)।
 

49

ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಟೀಂ ಇಂಡಿಯಾ ವೇಗಿಗಳು ಶಾಕ್ ನೀಡಿದರು. ಪರಿಣಾಮ ಹರಿಣಗಳ ಪಡೆ ಮೊದಲ ಇನಿಂಗ್ಸ್‌ನಲ್ಲಿ ಕೇವಲ 197 ರನ್‌ಗಳಿಗೆ ಸರ್ವಪತಕ ಕಂಡಿತು. ಶಮಿ 5 ವಿಕೆಟ್ ಪಡೆದರೆ, ಬುಮ್ರಾ ಹಾಗೂ ಠಾಕೂರ್ ತಲಾ 2 ವಿಕೆಟ್ ಪಡೆದರು. ಇನ್ನು ಸಿರಾಜ್ ಒಂದು ವಿಕೆಟ್ ಪಡೆದರು.
 

59

ಟೀಂ ಇಂಡಿಯಾ ವೇಗಿ ಶಮಿ 5ನೇ ವಿಕೆಟ್ ಪಡೆಯುತ್ತಿದ್ದಂತೆಯೇ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ 200 ವಿಕೆಟ್‌ ಕಬಳಿಸಿದ ಐದನೇ ವೇಗದ ಬೌಲರ್‌ ಎನ್ನುವ ಹಿರಿಮೆಗೆ ಪಾತ್ರರಾದರು. ಶಮಿ ಕೇವಲ 103 ಟೆಸ್ಟ್ ಇನಿಂಗ್ಸ್‌ಗಳನ್ನಾಡಿ 200 ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

69

ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ ಅತಿಹೆಚ್ಚು ವಿಕೆಟ್‌ ಕಬಳಿಸಿದ ವೇಗದ ಬೌಲರ್ ಎನ್ನುವ ದಾಖಲೆ ಕಪಿಲ್‌ ದೇವ್ ಹೆಸರಿನಲ್ಲಿದೆ. ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ 227 ಇನಿಂಗ್ಸ್‌ಗಳನ್ನಾಡಿ 434 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
 

79

ಎಡಗೈ ವೇಗಿ ಜಹೀದ್ ಖಾನ್‌ ಭಾರತ ಪರ 165 ಟೆಸ್ಟ್ ಇನಿಂಗ್ಸ್‌ಗಳನ್ನಾಡಿ 311 ವಿಕೆಟ್ ಕಬಳಿಸುವ ಮೂಲಕ, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಭಾರತದ ವೇಗದ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

89

ಡೆಲ್ಲಿ ಮೂಲದ ನೀಳಕಾಯದ ವೇಗಿ ಇಶಾಂತ್ ಶರ್ಮಾ ಸದ್ಯ 185 ಟೆಸ್ಟ್‌ ಇನಿಂಗ್ಸ್‌ಗಳಿಂದ 311 ಟೆಸ್ಟ್ ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನೊಂದು ವಿಕೆಟ್ ಪಡೆದರೆ, ಜಹೀರ್ ಖಾನ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆರಲಿದ್ದಾರೆ.
 

99

ಇನ್ನು ಕರ್ನಾಟಕದ ದಿಗ್ಗಜ ಕ್ರಿಕೆಟಿಗ, ಮೈಸೂರ್ ಎಕ್ಸ್‌ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಕೇವಲ 121 ಇನಿಂಗ್ಸ್‌ಗಳಿಂದ 236 ಟೆಸ್ಟ್ ವಿಕೆಟ್ ಕಬಳಿಸುವ ಮೂಲಕ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ವೇಗದ ಬೌಲರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
 

Read more Photos on
click me!

Recommended Stories