Ind vs Aus: ಆಸ್ಟ್ರೇಲಿಯಾ ಎದುರಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಶಾಕ್, ಸ್ಟಾರ್ ವೇಗಿ ಸರಣಿಯಿಂದಲೇ ಔಟ್..!

Published : Sep 18, 2022, 11:54 AM IST

ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಭಾರತ ತಂಡದ ಪಾಲಿಗೆ ಬಿಗ್ ಶಾಕ್ ಎದುರಾಗಿದ್ದು, ಸ್ಟಾರ್ ವೇಗಿ ಟಿ20 ಸರಣಿಯಿಂದಲೇ ಹೊರಬಿದ್ದಿದ್ದಾರೆ. ಅಷ್ಟಕ್ಕೂ ಯಾರು ಆ ಸ್ಟಾರ್ ವೇಗಿ? ಏನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..  

PREV
16
Ind vs Aus: ಆಸ್ಟ್ರೇಲಿಯಾ ಎದುರಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಶಾಕ್, ಸ್ಟಾರ್ ವೇಗಿ ಸರಣಿಯಿಂದಲೇ ಔಟ್..!

ಆಸ್ಟ್ರೇಲಿಯಾ ತಂಡವು 3 ಪಂದ್ಯಗಳ ಟಿ20 ಸರಣಿಯನ್ನಾಡಲು ಭಾರತಕ್ಕೆ ಬಂದಿಳಿದಿದೆ. ಭಾರತ ತಂಡವು ತವರಿನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸುವ ಮೂಲಕ ಮುಂಬರುವ ವಿಶ್ವಕಪ್ ಟೂರ್ನಿಗೆ ತಾಲೀಮು ನಡೆಸಲು ಸಜ್ಜಾಗಿದೆ.

26

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 20, 23 ಹಾಗೂ 25ರಂದು ನಡೆಯಲಿದೆ. ಮೊಹಾಲಿ, ನಾಗ್ಪುರ ಹಾಗೂ ಹೈದರಾಬಾದ್‌ನಲ್ಲಿ ಪಂದ್ಯಾಟಗಳು ನಡೆಯಲಿವೆ

36

ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಅನುಭವಿ ವೇಗಿ ಮೊಹಮ್ಮದ್ ಶಮಿಗೆ, ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಸರಣಿಯಿಂದ ಹೊರಬಿದ್ದಿದ್ದಾರೆ.

46

ಸಾಕಷ್ಟು ದೀರ್ಘ ಸಮಯದ ಬಳಿಕ ಮೊಹಮ್ಮದ್ ಶಮಿಗೆ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಕಳೆದ ವರ್ಷ ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಮೊಹಮ್ಮದ್ ಶಮಿಗೆ ಭಾರತ ಟಿ20 ತಂಡದ ಬಾಗಿಲು ಮುಚ್ಚಲಾಗಿತ್ತು.

56

ಆದರೆ ಏಷ್ಯಾಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ, ಫೈನಲ್‌ ಪ್ರವೇಶಿಸಲು ವಿಫಲವಾದ ಬೆನ್ನಲ್ಲೇ ಹಲವು ಹಿರಿಯ ಆಟಗಾರರು ಶಮಿ ತಂಡದಲ್ಲಿರಬೇಕಿತ್ತು ಎಂದು ಆಗ್ರಹಿಸಿದ್ದರು. ಹೀಗಾಗಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಮೀಸಲು ಆಟಗಾರರ ರೂಪದಲ್ಲಿ ತಂಡದಲ್ಲಿ ಸ್ಥಾನ ನೀಡಲಾಗಿತ್ತು. 

66

ಕೆಲ ತಿಂಗಳ ಹಿಂದಷ್ಟೇ ನಡೆದ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚಾಂಪಿಯನ್‌ ಪಟ್ಟಕ್ಕೇರುವಲ್ಲಿ ಮೊಹಮ್ಮದ್ ಶಮಿ ತನ್ನದೇ ಆದ ಪಾತ್ರ ವಹಿಸಿದ್ದರು.

Read more Photos on
click me!

Recommended Stories