ಐರ್ಲೆಂಡ್, ಇಂಗ್ಲೆಂಡ್ ಎದುರಿನ ಟಿ20 ಸರಣಿಯಿಂದ ಕೊನೆಯ ಕ್ಷಣದಲ್ಲಿ ಸ್ಟಾರ್ ಕ್ರಿಕೆಟಿಗ ಔಟ್; ಕನ್ನಡಿಗನಿಗೆ ಜಾಕ್‌ಪಾಟ್

Published : Jun 09, 2026, 03:44 PM IST

ಬೆಂಗಳೂರು: ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಯಿಂದ ಟೀಂ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಕನ್ನಡಿಗ ಎಂಟ್ರಿಕೊಟ್ಟಿದ್ದಾರೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ. 

PREV
16
ಐರ್ಲೆಂಡ್, ಇಂಗ್ಲೆಂಡ್ ಎದುರಿನ ಸರಣಿಗೆ ಶ್ರೇಯಸ್ ಅಯ್ಯರ್ ನಾಯಕ

ಇದೇ ಜೂನ್ 26, 28ರಂದು ಐರ್ಲೆಂಡ್ ಎದುರು ಎರಡು ಹಾಗೂ ಜುಲೈ 01ರಿಂದ ಇಂಗ್ಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದೆ. ಶ್ರೇಯಸ್ ಅಯ್ಯರ್‌ಗೆ ನಾಯಕರಾಗಿ ನೇಮಕವಾಗಿದ್ದರೇ, ತಿಲಕ್ ವರ್ಮಾಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.

26
ಸಿರಾಜ್‌ಗೆ ಐರ್ಲೆಂಡ್, ಇಂಗ್ಲೆಂಡ್ ಎದುರಿನ ಟಿ20 ಸರಣಿಯಿಂದ ರೆಸ್ಟ್

ಹೀಗಿರುವಾಗಲೇ ಕೊನೆಯ ಕ್ಷಣದ ಬೆಳವಣಿಗೆಯೊಂದರಲ್ಲಿ, ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಯಿಂದ ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಲಾಗಿದೆ. ವರ್ಕ್‌ಲೋಡ್ ಮ್ಯಾನೇಜ್‌ ಮಾಡುವ ಉದ್ದೇಶದಿಂದ ಬಿಸಿಸಿಐ, ಸಿರಾಜ್‌ಗೆ ವಿಶ್ರಾಂತಿ ನೀಡಿದೆ. ಭಾರತ ತಂಡವು ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರು ಒಟ್ಟು ಏಳು ಟಿ20 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಇಂಗ್ಲೆಂಡ್ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

36
ಮೊದಲು ಐರ್ಲೆಂಡ್, ಟಿ20 ಸರಣಿಗೆ ಆಯ್ಕೆಯಾಗಿದ್ದ ಸಿರಾಜ್

ಮೊಹಮ್ಮದ್ ಸಿರಾಜ್‌ಗೆ ಈಗಾಗಲೇ ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಬುಮ್ರಾ ಅನುಪಸ್ಥಿತಿಯಲ್ಲಿ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ಅನುಭವಿ ವೇಗಿ ಸಿರಾಜ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಇದೀಗ ಕೊನೆಯ ಕ್ಷಣದಲ್ಲಿ ಬಿಸಿಸಿಐ ಸಿರಾಜ್‌ಗೆ ವಿಶ್ರಾಂತಿ ನೀಡುವ ತೀರ್ಮಾನಕ್ಕೆ ಬಂದಿದೆ.

46
ಸತತವಾಗಿ ಕ್ರಿಕೆಟ್ ಆಡುತ್ತಿರುವ ಸಿರಾಜ್

2026ರ ಐಪಿಎಲ್ ಟೂರ್ನಿಯಲ್ಲಿ ಮೊಹಮ್ಮದ್ ಸಿರಾಜ್, ಗುಜರಾತ್ ಟೈಟಾನ್ಸ್ ಪರ 17 ಪಂದ್ಯಗಳನ್ನಾಡಿದ್ದರು. ಇದಾದ ಬಳಿಕ ಆಫ್ಘಾನಿಸ್ತಾನ ಎದುರಿನ ಏಕೈಕ ಟೆಸ್ಟ್‌ನಲ್ಲೂ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದೀಗ ಸಿರಾಜ್ ಬದಲಿಗೆ ಕನ್ನಡಿಗ ಪ್ರಸಿದ್ದ್ ಕೃಷ್ಣ ಅವರಿಗೆ ಭಾರತ ತಂಡದಲ್ಲಿ ಮಣೆ ಹಾಕಲಾಗಿದೆ.

56
2023ರ ಬಳಿಕ ಪ್ರಸಿದ್ದ್‌ಗೆ ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ

ಇನ್ನು ಪ್ರಸಿದ್ದ್ ಕೃಷ್ಣ 2023ರಲ್ಲಿ ಕೊನೆಯ ಬಾರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದರು. ಇದಾದ ಬಳಿಕ ಕಳಪೆ ಫಾರ್ಮ್‌ನಿಂದ ಪ್ರಸಿದ್ದ್ ತಂಡದಿಂದ ಹೊರಬಿದ್ದಿದ್ದರು. ಇನ್ನು 2025ರ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ದಾಳಿ ನಡೆಸುವ ಮೂಲಕ ಪ್ರಸಿದ್ದ್ ಕೃಷ್ಣ ಪರ್ಪಲ್‌ ಕ್ಯಾಪ್ ಜಯಿಸಿದ್ದರು. ಇನ್ನು 2026ರ ಐಪಿಎಲ್ ಟೂರ್ನಿಯಲ್ಲೂ ಪ್ರಸಿದ್ದ್ 16 ವಿಕೆಟ್ ಕಬಳಿಸಿ ಆಯ್ಕೆ ಸಮಿತಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

66
ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಭಾರತ ತಂಡ ಹೀಗಿದೆ:

ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ, ತಿಲಕ್ ವರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ದ್ ಕೃಷ್ಣ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories