ಐಪಿಎಲ್ ಮೆಗಾ ಹರಾಜಿನಲ್ಲಿ ಈ 5 ಆಟಗಾರರ ಮೇಲೆ ಹದ್ದಿನಗಣ್ಣಿಟ್ಟಿರುವ ಆರ್‌ಸಿಬಿ!

First Published | Nov 6, 2024, 3:36 PM IST

ಬೆಂಗಳೂರು: 2025ರ ಐಪಿಎಲ್ ಮೆಗಾ ಹರಾಜಿಗೆ ದಿನಗಣನೆ ಆರಂಭವಾಗಿದೆ. ಮುಂಬರುವ ನವೆಂಬರ್ 24 ಹಾಗೂ 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಆರ್‌ಸಿಬಿ ಈ ಆಟಗಾರರನ್ನು ಹರಾಜಿನಲ್ಲಿ ಖರೀದಿಸಲು ಹದ್ದಿನಕಟ್ಟಿಟ್ಟಿದೆ. ಅಷ್ಟಕ್ಕೂ ಯಾರು ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೆಗಾ ಹರಾಜಿಗೂ ಮುನ್ನ ಸಾಕಷ್ಟು ಅಳೆದುತೂಗಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್ ಹಾಗೂ ಯಶ್ ದಯಾಳ್ ಅವರನ್ನು ರೀಟೈನ್ ಮಾಡಿಕೊಂಡಿದೆ. 

ಈ ಮೂರು ಆಟಗಾರರನ್ನು ರೀಟೈನ್ ಮಾಡಿಕೊಂಡಿದ್ದಕ್ಕೆ ಆರ್‌ಸಿಬಿ ಫ್ರಾಂಚೈಸಿ 37 ಕೋಟಿ ರುಪಾಯಿ ಖರ್ಚು ಮಾಡಿದೆ. ವಿರಾಟ್ ಕೊಹ್ಲಿಗೆ 21 ಕೋಟಿ ರುಪಾಯಿ, ರಜತ್ ಪಾಟೀದಾರ್‌ಗೆ 11 ಕೋಟಿ ಹಾಗೂ ಯಶ್ ದಯಾಳ್‌ಗೆ 5 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ. ಇದೀಗ ಹರಾಜಿಗೆ 83 ಕೋಟಿ ರುಪಾಯಿ ಪರ್ಸ್‌ನಲ್ಲಿ ಉಳಿಸಿಕೊಂಡಿದೆ.

Tap to resize

ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯು ಇದೀಗ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಈ ಕೆಳಕಂಡ ಆರು ಆಟಗಾರರನ್ನು ಖರೀದಿಸಲು ಹದ್ದಿನಗಣ್ಣು ಇಟ್ಟಿದೆ.

1. ಮೊಹಮ್ಮದ್ ಸಿರಾಜ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿಯಾಗಿದ್ದ ಸಿರಾಜ್ ಅವರನ್ನು ಬೆಂಗಳೂರು ಫ್ರಾಂಚೈಸಿ ರಿಲೀಸ್ ಮಾಡಿದೆ. ಐಪಿಎಲ್‌ನಲ್ಲಿ ಸಿರಾಜ್ 93 ವಿಕೆಟ್ ಕಬಳಿಸಿದ್ದಾರೆ. ಹರಾಜಿನಲ್ಲಿ ಸಿರಾಜ್‌ ಅವರನ್ನು ಆರ್‌ಸಿಬಿ ಫ್ರಾಂಚೈಸಿ ಆರ್‌ಟಿಎಂ ಕಾರ್ಡ್‌ ಬಳಸುವ ಸಾಧ್ಯತೆಯಿದೆ.

2. ವಿಲ್ ಜ್ಯಾಕ್ಸ್‌:

ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟರ್‌ ವಿಲ್ ಜ್ಯಾಕ್ಸ್‌  ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಸ್ಪೋಟಕ ಶತಕ ಸಿಡಿಸಿದ್ದರು. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಜ್ಯಾಕ್ಸ್‌ 230 ರನ್ ಹಾಗೂ 2 ವಿಕೆಟ್ ಕಬಳಿಸಿದ್ದು, ಆರ್‌ಸಿಬಿ ಮತ್ತೊಮ್ಮೆ ಇಂಗ್ಲೆಂಡ್ ಆಟಗಾರರನ್ನು ಆರ್‌ಟಿಎಂ ಕಾರ್ಡ್ ಬಳಸಿ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚು.

3. ಗ್ಲೆನ್ ಮ್ಯಾಕ್ಸ್‌ವೆಲ್:

ಅಚ್ಚರಿ ಎನಿಸಿದ್ರೂ ಸತ್ಯ. ಆರ್‌ಸಿಬಿ ಫ್ರಾಂಚೈಸಿಯು ಮ್ಯಾಕ್ಸ್‌ವೆಲ್ ಅವರನ್ನು ರಿಲೀಸ್ ಮಾಡುವ ಮುನ್ನ ಮಾತುಕತೆ ನಡೆಸಿದೆ ಎಂದು ತಿಳಿದುಬಂದಿದೆ. ಮಾತ್ರವಲ್ಲ ಮ್ಯಾಕ್ಸ್‌ವೆಲ್ ಕೂಡಾ ಮತ್ತೊಮ್ಮೆ ಹರಾಜಿನಲ್ಲಿ ಆರ್‌ಸಿಬಿ ತಂಡ ಕೂಡಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

4. ಜೋಸ್ ಬಟ್ಲರ್:

ರಾಜಸ್ಥಾನ ರಾಯಲ್ಸ್ ತಂಡವು ಅಚ್ಚರಿ ರೀತಿಯಲ್ಲಿ ಜೋಸ್ ಬಟ್ಲರ್ ಅವರನ್ನು ರಿಲೀಸ್ ಮಾಡಿದೆ. ವಿಕೆಟ್ ಕೀಪರ್ ಬ್ಯಾಟರ್ ಆಗಿರುವ ಬಟ್ಲರ್ ಅವರನ್ನು ಆರ್‌ಸಿಬಿ ಫ್ರಾಂಚೈಸಿ ತನ್ನ ತೆಕ್ಕೆಗೆ ಸೆಳೆದುಕೊಂಡರೆ ಅಚ್ಚರಿಯೇನಿಲ್ಲ.

5. ಮೊಹಮ್ಮದ್ ಶಮಿ:

ಅನುಭವಿ ವೇಗದ ಬೌಲರ್ ಶಮಿಯನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ರಿಲೀಸ್ ಮಾಡಿದೆ. ಪವರ್‌ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಪರಿಣಾಮಕಾರಿ ದಾಳಿ ನಡೆಸುವ ಕ್ಷಮತೆಯಿರುವ ಶಮಿಯನ್ನು ಆರ್‌ಸಿಬಿ ಹರಾಜಿನಲ್ಲಿ ಖರೀದಿಸುವ ಸಾಧ್ಯತೆಯಿದೆ. 

Latest Videos

click me!