ಕ್ರಿಕೆಟ್ ಮೇಲಿನ ಪ್ರೀತಿ, ಬುದ್ಧಿ ಕೌಶಲ್ಯ, ಡಿಆರ್‌ಎಸ್ ತೆಗೆದುಕೊಳ್ಳುವ ವಿಧಾನ, ಆಟಗಾರರನ್ನು ನಿರ್ವಹಿಸುವ ವಿಧಾನ, ಫೀಲ್ಡಿಂಗ್ ಸೆಟಪ್, ಬೌಲರ್‌ಗಳ ಬದಲಾವಣೆ ಎಂದು ತನ್ನ ಕ್ರಿಕೆಟ್ ಜ್ಞಾನದ ಮೂಲಕ ಭಾರತ ತಂಡಕ್ಕೆ ಏಕದಿನ ಕ್ರಿಕೆಟ್ ವಿಶ್ವಕಪ್, ಟಿ20 ವಿಶ್ವಕಪ್, ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿ ಕೊಟ್ಟಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಧೋನಿ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ 5 ಬಾರಿ ಟ್ರೋಫಿ ಗೆಲ್ಲಿಸಿಕೊಟ್ಟಿದ್ದಾರೆ.