ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂ. ಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಕೃಷಿಯತ್ತ ಮುಖಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ. ಕೆಲ ದಿನಗಳ ಹಿಂದಷ್ಟೇ ಕಡಕ್‌ನಾಥ್ ಕೋಳಿ ಸಾಕಾಣಿಕೆಯನ್ನು ಧೋನಿ ಆರಂಭಿಸಿದ್ದರು.
ಆದರೆ ಇದೀಗ ಹೊಸ ವಿಷಯ ಏನಪ್ಪಾ ಅಂದ್ರೆ, ಧೋನಿ ತಮ್ಮ ತೋಟದಲ್ಲಿ ಬೆಳೆದ ಬೆಳೆಗಳನ್ನು ದುಬೈಗೆ ಕಳಿಸಲು ಮುಂದಾಗಿದ್ದಾರೆ. ಈ ಕುರಿತಂತೆ ಮಾತುಕತೆ ನಡೆಯುತ್ತಿದೆ. ಅಷ್ಟಕ್ಕೂ ಧೋನಿ ತಮ್ಮ ಫಾರ್ಮ್‌ನಲ್ಲಿ ಏನೆಲ್ಲಾ ಬೆಳೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.