ಐಪಿಎಲ್ ಸಾರ್ವಕಾಲಿಕ ಶ್ರೇಷ್ಠ ತಂಡ ಪ್ರಕಟ: ಧೋನಿ ನಾಯಕ, ಹಿಟ್‌ಮ್ಯಾನ್‌ಗಿಲ್ಲ ಸ್ಥಾನ..!

First Published | Feb 19, 2024, 3:10 PM IST

ನವದೆಹಲಿ: 17ನೇ ಆವೃತ್ತಿಯ ಐಪಿಎಲ್‌ ಮುಂದಿನ ತಿಂಗಳು ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಈ ಹಿಂದಿನ 16 ಆವೃತ್ತಿಗಳನ್ನು ನೆನಪಿಸಿಕೊಳ್ಳುವ ಸಲುವಾಗಿ ಸ್ಟಾರ್‌ ಸ್ಪೋರ್ಟ್ಸ್‌ ವಾಹಿನಿಯು ಸಾರ್ವಕಾಲಿಕ ಶ್ರೇಷ್ಠ ತಂಡವೊಂದನ್ನು ಪ್ರಕಟಿಸಿದೆ. ಈ ತಂಡಕ್ಕೆ 5 ಬಾರಿ ಪ್ರಶಸ್ತಿ ಗೆದ್ದಿರುವ ಚೆನ್ನೈ ಸೂಪರ್‌ ಕಿಂಗ್ಸ್‌ನ ಎಂ.ಎಸ್‌.ಧೋನಿ ನಾಯಕರಾಗಿ ಆಯ್ಕೆಯಾಗಿದ್ದಾರೆ. 

ಸಾರ್ವಕಾಲಿಕ ಶ್ರೇಷ್ಠ ತಂಡವನ್ನು ಆಯ್ಕೆ ಮಾಡಲು ಮಾಜಿ ಕ್ರಿಕೆಟಿಗರಾದ ಪಾಕಿಸ್ತಾನದ ವಾಸೀಂ ಅಕ್ರಂ, ದಕ್ಷಿಣ ಆಫ್ರಿಕಾದ ಡೇಲ್‌ ಸ್ಟೇಯ್ನ್‌, ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್‌ ಮತ್ತು ಟಾಮ್‌ ಮೂಡಿ ನೇತೃತ್ವದಲ್ಲಿ 70 ಮಂದಿ ಕ್ರೀಡಾ ಪತ್ರಕರ್ತರನ್ನು ಒಳಗೊಂಡಂತೆ ಸಮಿತಿಯೊಂದನ್ನು ರಚಿಸಿತ್ತು. ಆನ್‌ಲೈನ್‌ನಲ್ಲಿ ವೋಟಿಂಗ್‌ ನಡೆಯಿತು.

ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡದ್ಲಿ ಯಾರಿಗೆಲ್ಲಾ ಸ್ಥಾನ ಸಿಕ್ಕಿದೆ ಎನ್ನುವುದನ್ನು ನೋಡೋಣ ಬನ್ನಿ
 

1. ಕ್ರಿಸ್ ಗೇಲ್‌:

ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್‌ ಗೇಲ್ ಐಪಿಎಲ್‌ನಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕವೇ ಮನೆಮಾತಾಗಿದ್ದವರು. ಐಪಿಎಲ್‌ನಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್ ಸೇರಿದಂತೆ ಹಲವು ದಾಖಲೆಗಳು ಆರ್‌ಸಿಬಿ ಮಾಜಿ ಕ್ರಿಕೆಟಿಗನ ಹೆಸರಿನಲ್ಲಿದೆ.
 

2. ಡೇವಿಡ್ ವಾರ್ನರ್‌

ಸನ್‌ರೈಸರ್ಸ್‌ ಹೈದರಾಬಾದ್‌ಗೆ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದುಕೊಟ್ಟ ನಾಯಕ, ಹಾಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗಿರುವ ವಾರ್ನರ್, ಮೂರು ಬಾರಿ ಆರೆಂಜ್ ಕ್ಯಾಪ್ ಜಯಿಸಿದ ಏಕೈಕ ಬ್ಯಾಟರ್ ಎನ್ನುವ ಸಾಧನೆ ಮಾಡಿದ್ದಾರೆ
 

Latest Videos


3. ವಿರಾಟ್ ಕೊಹ್ಲಿ: 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮಷೀನ್, ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್ ಕೂಡಾ ಹೌದು.

4. ಸುರೇಶ್ ರೈನಾ:

ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಆಧಾರಸ್ತಂಭ ಎನಿಸಿಕೊಂಡಿದ್ದರು. ಐಪಿಎಲ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 5 ಬ್ಯಾಟರ್‌ಗಳ 

5. ಎಬಿ ಡಿ ವಿಲಿಯರ್ಸ್‌: 

ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್ ಐಪಿಎಲ್‌ ಕಂಡ ಅಪಾಯಕಾರಿ ಬ್ಯಾಟರ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಏಕಾಂಗಿಯಾಗಿ ಗೆಲುವು ತಂದುಕೊಟ್ಟಿದ್ದಾರೆ.
 

6. ಎಂ ಎಸ್ ಧೋನಿ ಧೋನಿ (ನಾಯಕ):

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ಯಶಸ್ವಿ ನಾಯಕ, ಕ್ಯಾಪ್ಟನ್ ಕೂಲ್ ಖ್ಯಾತಿಯ ಎಂ ಎಸ್ ಧೋನಿ, ಐಪಿಎಲ್ ಸಾರ್ವಕಾಲಿಕ ಶ್ರೇಷ್ಠ ತಂಡದ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.

7. ಸೂರ್ಯಕುಮಾರ್ ಯಾದವ್:

ಭಾರತದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್, ಮುಂಬೈ ಇಂಡಿಯನ್ಸ್ ತಂಡದ ನಂಬಿಗಸ್ಥ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸೂರ್ಯ ಕೂಡಾ ಪಂದ್ಯದ ದಿಕ್ಕು ಬದಲಿಸಬಲ್ಲ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.
 

8. ಹಾರ್ದಿಕ್ ಪಾಂಡ್ಯ: 

ಹಾಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ನಾಯಕನಾಗಿ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಆಲ್ರೌಂಡರ್. 

9. ರವೀಂದ್ರ ಜಡೇಜಾ: 

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್ರೌಂಡರ್ ಜಡೇಜಾ, ಚೊಚ್ಚಲ ಆವೃತ್ತಿಯಿಂದಲೂ ಐಪಿಎಲ್‌ನಲ್ಲಿ ತನ್ನದೇ ಛಾಪು ಮೂಡಿಸಿರುವ ಆಟಗಾರ. ಜಡ್ಡು ಚೆನ್ನೈ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ

10. ಕೀರನ್ ಪೊಲ್ಲಾರ್ಡ್:

ವೆಸ್ಟ್ ಇಂಡೀಸ್ ಮೂಲದ ದೈತ್ಯ ಕ್ರಿಕೆಟಿಗ ಕೀರನ್ ಪೊಲ್ಲಾರ್ಡ್ ಮುಂಬೈ ಇಂಡಿಯನ್ಸ್ ತಂಡದ ಆಧಾರಸ್ತಂಭವಾಗಿದ್ದರು. ಬ್ಯಾಟಿಂಗ್‌, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಪೊಲ್ಲಾರ್ಡ್ ಅಮೋಘ ಪ್ರದರ್ಶನ ತೋರಿದ್ದರು.
 

11. ರಶೀದ್ ಖಾನ್:

ಆಫ್ಘಾನಿಸ್ತಾನ ಮೂಲದ ಬೌಲಿಂಗ್ ಆಲ್ರೌಂಡರ್ ರಶೀದ್ ಖಾನ್, ತಮ್ಮ ಮಾರಕ ದಾಳಿ ಮೂಲಕ ಎದುರಾಳಿ ಬ್ಯಾಟರ್‌ಗಳ ನಿದ್ದೆಗೆಡಿಸಿರುವ ಲೆಗ್‌ಸ್ಪಿನ್ನರ್. ರಶೀದ್ ಖಾನ್ ಸದ್ಯ ಗುಜರಾತ್ ಟೈಟಾನ್ಸ್ ತಂಡದ ಬೌಲಿಂಗ್ ಅಸ್ತ್ರವಾಗಿದ್ದಾರೆ.
 

12. ಸುನಿಲ್ ನರೈನ್:

ವೆಸ್ಟ್ ಇಂಡೀಸ್ ಮೂಲದ ಮಿಸ್ಟ್ರಿ ಸ್ಪಿನ್ನರ್ ಸುನಿಲ್ ನರೈನ್, ಕೋಲ್ಕತಾ ನೈಟ್ ರೈಡರ್ಸ್ ತಂಡದ ಪ್ರಮುಖ ಸ್ಪಿನ್ನರ್. ನರೈನ್ ಬೌಲಿಂಗ್ ಜತೆಗೆ ಬ್ಯಾಟಿಂಗ್‌ನಲ್ಲೂ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ.
 

13. ಯುಜುವೇಂದ್ರ ಚಹಲ್: 

ಟೀಂ ಇಂಡಿಯಾ ಲೆಗ್‌ಸ್ಪಿನ್ನರ್ ಚಹಲ್, ಆರ್‌ಸಿಬಿ ತಂಡದ ಪರ ನೂರಕ್ಕೂ ಹೆಚ್ಚು ಐಪಿಎಲ್ ಪಂದ್ಯಗಳನ್ನಾಡಿದ್ದಾರೆ. ಸದ್ಯ ರಾಜಸ್ಥಾನ ರಾಯಲ್ಸ್ ತಂಡದ ಪ್ರಮುಖ ಸ್ಪಿನ್ ಅಸ್ತ್ರವಾಗಿದ್ದಾರೆ ಚಹಲ್.

14. ಲಸಿತ್ ಮಾಲಿಂಗ:

ಶ್ರೀಲಂಕಾದ ದಿಗ್ಗಜ ವೇಗಿ ಲಸಿತ್ ಮಾಲಿಂಗ, ಮುಂಬೈ ಇಂಡಿಯನ್ಸ್ ತಂಡದ ಪರ ಒಂದು ದಶಕಗಳ ಕಾಲ ಬೌಲಿಂಗ್ ನೇತೃತ್ವ ವಹಿಸಿದ್ದರು. ಮುಂಬೈ ಯಶಸ್ಸಿನ ಹಿಂದೆ ಮಾಲಿಂಗ ಪಾತ್ರ ಅಪಾರ.
 

15. ಜಸ್ಪ್ರೀತ್ ಬುಮ್ರಾ: 

ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ, ಕರಾರುವಕ್ಕಾದ ದಾಳಿ ಮೂಲಕ ಮಿಂಚುತ್ತಿದ್ದು, ಮಾಲಿಂಗ ಬಳಿಕ ಬುಮ್ರಾ ಮುಂಬೈ ಇಂಡಿಯನ್ಸ್ ಬೌಲಿಂಗ್ ಪಡೆಯನ್ನು ಮುನ್ನಡೆಸುತ್ತಿದ್ದಾರೆ.
 

click me!