ಮುಂಬೈ ಇಂಡಿಯನ್ಸ್‌ಗಿಂದು ಪಂಜಾಬ್ ಕಿಂಗ್ಸ್ ಚಾಲೆಂಜ್..! ಇಂದು ಪಾಂಡ್ಯ ಪಡೆ ಸೋತರೇ, ಮುಂದೇನು?

Published : Apr 16, 2026, 01:45 PM IST

ಮುಂಬೈ: ಐದು ಬಾರಿಯ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಇಂದು ತವರಿನಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಇಂದಿನ ಮ್ಯಾಚ್‌ ಮುಂಬೈ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿದೆ. ಇಂದಿನ ಮ್ಯಾಚ್ ಮುಂಬೈ ಸೋತರೇ ಮುಂದೇನು ಎನ್ನುವುದನ್ನು ನೋಡೋಣ ಬನ್ನಿ.

PREV
16
ಹ್ಯಾಟ್ರಿಕ್ ಸೋಲು ಅನುಭವಿಸಿರುವ ಮುಂಬೈ ಇಂಡಿಯನ್ಸ್

13 ವರ್ಷಗಳಲ್ಲಿ ಮೊದಲ ಬಾರಿಗೆ ಐಪಿಎಲ್‌ ಆವೃತ್ತಿಯ ಮೊದಲ ಪಂದ್ಯವನ್ನು ಗೆದ್ದು 2026ರ ಟೂರ್ನಿಯನ್ನು ಭರ್ಜರಿಯಾಗಿ ಆರಂಭಿಸಿದ್ದ ಮುಂಬೈ ಇಂಡಿಯನ್ಸ್‌, ಆ ಬಳಿಕ ಲಯ ಕಳೆದುಕೊಂಡು ಸತತ 3 ಸೋಲು ಅನುಭವಿಸಿ, ಒತ್ತಡಕ್ಕೆ ಸಿಲುಕಿದೆ. ಸದ್ಯ ಮುಂಬೈ ಇಂಡಿಯನ್ಸ್ ಅಂಕಪಟಟ

26
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮುಂಬೈ ಕಣಕ್ಕೆ?

ಗುರುವಾರ ಅಜೇಯ ಪಂಜಾಬ್‌ ಕಿಂಗ್ಸ್‌ ವಿರುದ್ಧ ವಾಂಖೇಡೆ ಕ್ರೀಡಾಂಗಣದಲ್ಲಿ ಸೆಣಸಲಿರುವ ಮುಂಬೈಗೆ ಗೆಲುವು ಅನಿವಾರ್ಯ ಎನಿಸಿದ್ದು, ಹೋರಾಟಕ್ಕೆ ತಾರಾ ಬ್ಯಾಟರ್‌ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಬೇಕಾಗಬಹುದು. ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ರೋಹಿತ್‌, ಈ ಪಂದ್ಯದಲ್ಲಿ ಆಡುವುದು ಅನುಮಾನ ಎನಿಸಿದೆ. ಹೀಗಾಗಿ, ಮುಂಬೈ ತನ್ನ ತಂಡ ಸಂಯೋಜನೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಬೇಕಿದೆ.

36
ಸಮಸ್ಯೆಯ ಸುಳಿಯಲ್ಲಿದೆ ಮುಂಬೈ ಇಂಡಿಯನ್ಸ್

ಮುಂಬೈಗೆ ಬ್ಯಾಟಿಂಗ್‌ನಷ್ಟೇ ಬೌಲಿಂಗ್‌ನಲ್ಲೂ ಸಮಸ್ಯೆ ಇದ್ದು, 4 ಪಂದ್ಯಗಳನ್ನು ಸೇರಿ ಪವರ್‌-ಪ್ಲೇನಲ್ಲಿ ಕೇವಲ 3 ವಿಕೆಟ್‌ ಕಬಳಿಸಿದೆ. ಇನ್ನು ಬುಮ್ರಾ 4 ಪಂದ್ಯ ಕಳೆದರೂ ಇನ್ನೂ ವಿಕೆಟ್‌ ಖಾತೆ ತೆರೆದಿಲ್ಲ. ಇದು ಮುಂಬೈ ತಂಡದ ಮೇಲೆ ಒತ್ತಡ ಮತ್ತಷ್ಟು ಹೆಚ್ಚುವಂತೆ ಮಾಡಿದೆ.

46
ಇಂದು ಮುಂಬೈ ಸೋತರೇ?

ಒಂದು ವೇಳೆ ಇಂದು ಕೂಡಾ ಮುಂಬೈ ಇಂಡಿಯನ್ಸ್ ತಂಡವು ಸೋಲು ಅನುಭವಿಸಿದರೆ, ಹಾರ್ದಿಕ್ ಪಾಂಡ್ಯ ಪಡೆಯ ಪ್ಲೇ ಆಫ್ ಹಾದಿ ಮತ್ತಷ್ಟು ದುರ್ಗಮವಾಗಲಿದೆ. ಇಂದು ಸೋತರೆ ಮುಂಬೈ ಇನ್ನುಳಿದ 9 ಪಂದ್ಯಗಳ ಪೈಕಿ ಕನಿಷ್ಠ 7 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಲಿದೆ.

56
ಬಲಿಷ್ಠವಾಗಿ ಗುರುತಿಸಿಕೊಂಡಿದೆ ಪಂಜಾಬ್ ಕಿಂಗ್ಸ್

ಮತ್ತೊಂದೆಡೆ ಪಂಜಾಬ್‌ ಕಿಂಗ್ಸ್‌ ಬಲಿಷ್ಠವಾಗಿದ್ದು, ಪಂದ್ಯ ಗೆಲ್ಲಲು ಬೇಕಿರುವ ಸಂಪನ್ಮೂಲಗಳನ್ನು ಹೊಂದಿದೆ. ಬ್ಯಾಟಿಂಗ್‌ ಕ್ರಮಾಂಕದ ಉದ್ದಕ್ಕೂ ಸ್ಫೋಟಕ ಬ್ಯಾಟರ್‌ಗಳ ದಂಡೇ ಇದ್ದು, ಅನುಭವಿ ಬೌಲರ್‌ಗಳ ಬಲವೂ ತಂಡಕ್ಕಿರುವ ಕಾರಣ, ಪಂದ್ಯದಲ್ಲಿ ಗೆಲ್ಲುವ ಫೇವರಿಟ್‌ ಎನಿಸಿದೆ.

66
ಇಂದು ಸಂಜೆ 7.30 ರಿಂದ ಪಂದ್ಯ ಆರಂಭ

ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಮ್ಯಾಚ್ ಮುಂಬೈನ ವಾಂಖೆಡೆ ಮೈದಾನದಲ್ಲಿ ಇಂದು ಸಂಜೆ 7.30ರಿಂದ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories