ನಾಯಕತ್ವ ಬದಲಾವಣೆಗೆ ಆಕ್ರೋಶ, 1 ತಾಸಿನಲ್ಲಿ 4 ಲಕ್ಷ ಫಾಲೋವರ್ಸ್ ಕಳೆದುಕೊಂಡ ಮುಂಬೈ ಇಂಡಿಯನ್ಸ್!

First Published Dec 16, 2023, 1:03 PM IST

ಮುಂಬೈ ಇಂಡಿಯನ್ಸ್ ನಾಯಕತ್ವ ಬದಲಾವಣೆ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ನೆಚ್ಚಿನ ನಾಯಕ ರೋಹಿತ್ ಶರ್ಮಾ ಬದಲು ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯಗೆ ನಾಯಕ ಪಟ್ಟ ನೀಡಲಾಗಿದೆ. ಈ ಘೋಷಣೆ ಹೊರಬಿದ್ದ ಒಂದೇ ಗಂಟೆಯಲ್ಲಿ 4 ಲಕ್ಷ ಫಾಲೋವರ್ಸ್ ಕಳೆದುಕೊಂಡಿದೆ. ಇತ್ತ ಅಭಿಮಾನಿಗಳು ಮುಂಬೈ ಜರ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ನಿರ್ಧಾರ ಅಭಿಮಾನಿಗಳನ್ನು ರೊಚ್ಚಿಗೆಬ್ಬಿಸಿದೆ. ರೋಹಿತ್ ಶರ್ಮಾ ಬದಲು ಹಾರ್ದಿಕ್ ಪಾಂಡ್ಯಾಗೆ ನಾಯಕತ್ವ ನೀಡಿರುವುದು ಇದೀಗ ಕೋಲಾಹಲಕ್ಕೆ ಕಾರಣವಾಗಿದೆ. ಈ ನಿರ್ಧಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಈ ನಿರ್ಧಾರ ಘೋಷಿಸಿದ ಒಂದೇ ಗಂಟೆಯಲ್ಲಿ ಎಕ್ಸ್ ಖಾತೆಯಲ್ಲಿ ಮುಂಬೈ ಇಂಡಿಯನ್ಸ್  4 ಲಕ್ಷ ಫಾಲೋವರ್ಸ್ ಕಳೆದುಕೊಂಡಿದೆ. ಮುಂಬೈ ಇಂಡಿಯನ್ಸ್ ಹಿಂಬಾಲಿಸುತ್ತಿದ್ದ ಅಭಿಮಾನಿಗಳು ಈ ಬಾರಿ ಮುಂಬೈ ಬೆಂಬಲಿಸಲ್ಲ ಎಂದು ಅನ್‌ಫಾಲೋ ಮಾಡಿದ್ದಾರೆ.

ಎಕ್ಸ್ ಖಾತೆಯಲ್ಲಿ 8.6 ಮಿಲಿಯನ್ ಫಾಲೋವರ್ಸ್ ಹೊಂದಿದ ಮುಂಬೈ ಇಂಡಿಯನ್ಸ್, ನಾಯಕತ್ವ ಬದಲಾವಣೆ ನಿರ್ಧಾರ ಪ್ರಕಟಗೊಂಡ ಒಂದೇ ಗಂಟೆಯಲ್ಲಿ ಫಾಲೋವರ್ಸ್ ಸಂಖ್ಯೆ 8.2 ಮಿಲಿಯನ್‌ಗೆ ಕುಸಿತ ಕಂಡಿದೆ.
 

ಗುಜರಾತ್ ತಂಡದ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯರನ್ನು ಹೈಡ್ರಾಮಾ ಮೂಲಕ ಮುಂಬೈ ಇಂಡಿಯನ್ಸ್ ಖರೀದಿಸಿತ್ತು. ಈ ನಿರ್ಧಾರ ಅಚ್ಚರಿ ತಂದರೂ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಸ್ವಾಗತಿಸಿದ್ದರು. ಆದರೆ ಇದೀಗ ನಾಯಕಕ್ವ ಬದಲಾವಣೆ ಮಾತ್ರ ಪ್ರತಿಭಟನೆಗೆ ಕಾರಣವಾಗಿದೆ.
 

ಕಳೆದ 10 ವರ್ಷದಿಂದ ಮುಂಬೈ ನಾಯಕತ್ವ ವಹಿಸಿಕೊಂಡ ರೋಹಿತ್ ಶರ್ಮಾ, ಗರಿಷ್ಠ ಟ್ರೋಫಿ ಗೆಲ್ಲಿಸಿಕೊಟ್ಟಿದ್ದಾರೆ. ಜೊತೆಗೆ ಮುಂಬೈ ಮೂಲದವರಾಗಿರುವ ಕಾರಣ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಭಾವನಾತ್ಮಕವಾಗಿ ರೋಹಿತ್ ಜೊತೆಗೆ ಬೆಸೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ 5 ಐಪಿಎಲ್ ಟ್ರೋಫಿಯನ್ನು ರೋಹಿತ್ ಶರ್ಮಾ ನಾಯಕತ್ವದಲ್ಲಿ ಗೆದ್ದುಕೊಂಡಿದೆ. ಅತ್ಯಂತ ಯಶಸ್ವಿ ನಾಯಕನಿಲ್ಲದೆ ಮುಂಬೈ ಇಂಡಿಯನ್ಸ್ ಪಂದ್ಯ ವೀಕ್ಷಿಸುವುದಿಲ್ಲ ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೆಲ ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಜರ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಹಿತ್ ಶರ್ಮಾ ಇರುವಾಗ ಹಾರ್ದಿಕ್ ಪಾಂಡ್ಯಾಗೆ ನಾಯಕತ್ವ ನೀಡುವ ಅವಶ್ಯಕತೆ ಏನಿತ್ತು ಎಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿನ ಬಳಿಕ ಇದೀಗ ಐಪಿಎಲ್ ನಾಯಕತ್ವದಿಂದಲೂ ರೋಹಿತ್ ಹೊರಬಿದ್ದಿದ್ದಾರೆ. ಇತ್ತ ಟೀಂ ಇಂಡಿಯಾ ಟಿ20 ತಂಡದಿಂದಲೂ ರೋಹಿತ್ ದೂರ ಉಳಿದಿದ್ದಾರೆ. ಇದರ ನಡುವೆ ರೋಹಿತ್ ವಿದಾಯ ಹೇಳಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

click me!