16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೇ ಮಾರ್ಚ್ 31ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಾದಾಡಲಿವೆ.
ಇನ್ನು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು, ಇದೀಗ ಟೂರ್ನಿ ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆಯಿಂದ ಬಳಲುತ್ತಿದೆ.
ಮುಂಬೈ ಇಂಡಿಯನ್ಸ್ ತಂಡದ ಪ್ರೀಮಿಯರ್ ವೇಗಿ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ, ಸೊಂಟನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಚೇತರಿಸಿಕೊಳ್ಳುತ್ತಿದ್ದು, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಸ್ನಾಯು ಸೆಳೆತದಿಂದ ಚೇತರಿಸಿಕೊಂಡ ಬಳಿಕ ಕಳೆದ ವಾರ ಕ್ಲಬ್ ಕ್ರಿಕೆಟ್ ಆಡುವ ಸಂದರ್ಭದಲ್ಲಿ 26 ವರ್ಷದ ಜೇ ರಿಚರ್ಡ್‌ಸನ್‌ಗೆ ಮತ್ತೊಮ್ಮೆ ಸ್ನಾಯು ಸೆಳೆತ ಕಾಣಿಸಿಕೊಂಡಿತ್ತು. ಹೀಗಾಗಿ ಭಾರತ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ರಿಚರ್ಡ್‌ಸನ್ ಹೊರಬಿದ್ದಿದ್ದರು.
ಕಳೆದ ಡಿಸೆಂಬರ್‌ನಲ್ಲಿ ನಡೆದ ಆಟಗಾರರ ಮಿನಿ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ವೇಗಿ ಜೇ ರಿಚರ್ಡ್‌ಸನ್ ಅವರನ್ನು 1.50 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಇದೀಗ ಜೇ ರಿಚರ್ಡ್‌ಸನ್ ಐಪಿಎಲ್‌ಗೆ ಅಲಭ್ಯರಾಗಿದ್ದಾರೆ.
ಇದೀಗ ಜೇ ರಿಚರ್ಡ್‌ಸನ್ ಬದಲಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯಾವ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳಲಿದೆ ಎನ್ನುವ ಕುತೂಹಲ ಜೋರಾಗಿದೆ.
5 ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಏಪ್ರಿಲ್ 02ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.