ಕೊಹ್ಲಿ, ರೋಹಿತ್ ಅಲ್ಲವೇ ಅಲ್ಲ, ಇವರೇ ನೋಡಿ ಟಿ20 ವಿಶ್ವಕಪ್‌ನಲ್ಲಿ ಸೆಂಚುರಿ ಬಾರಿಸಿದ ಏಕೈಕ ಟೀಂ ಇಂಡಿಯಾ ಕ್ರಿಕೆಟರ್..!

Published : May 03, 2024, 05:09 PM IST

ಬೆಂಗಳೂರು: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಟಿ20 ವಿಶ್ವಕಪ್ ಟೂರ್ನಿಯ ಸ್ವಾರಸ್ಯಕರ ಘಟನೆಯೊಂದನ್ನು ನಾವಿಂದು ಮೆಲುಕು ಹಾಕೋಣ ಬನ್ನಿ.  

PREV
19
ಕೊಹ್ಲಿ, ರೋಹಿತ್ ಅಲ್ಲವೇ ಅಲ್ಲ, ಇವರೇ ನೋಡಿ ಟಿ20 ವಿಶ್ವಕಪ್‌ನಲ್ಲಿ ಸೆಂಚುರಿ ಬಾರಿಸಿದ ಏಕೈಕ ಟೀಂ ಇಂಡಿಯಾ ಕ್ರಿಕೆಟರ್..!

2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ನಾಯಕನಾಗಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಕೂಡಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

29

ಇನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಬ್ಬರೂ ಒಟ್ಟಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 8000ಕ್ಕೂ ಅಧಿಕ ರನ್ ಬಾರಿಸಿದ್ದಾರೆ. ಈ ಇಬ್ಬರು ಬಹುತೇಕ ಕೊನೆಯ ಟಿ20 ವಿಶ್ವಕಪ್ ಆಡುವ ಸಾಧ್ಯತೆಯಿದೆ.

39

ಇನ್ನು ತುಂಬಾ ಇಂಟ್ರೆಸ್ಟಿಂಗ್ ಸಂಗತಿಯೆಂದರೆ ರನ್‌ ಮಷೀನ್ ವಿರಾಟ್ ಕೊಹ್ಲಿ ಹಾಗೂ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಟೂರ್ನಿಯಲ್ಲೇ ಒಟ್ಟಾಗಿ 2000ಕ್ಕೂ ಅಧಿಕ ರನ್ ಬಾರಿಸಿದ್ದಾರೆ. 

49

ಆದರೆ ರೋಹಿತ್ ಶರ್ಮಾ ಅವರಾಗಲಿ ಅಥವಾ ವಿರಾಟ್ ಕೊಹ್ಲಿಯವರಾಗಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶತಕ ಬಾರಿಸಿಲ್ಲ ಎನ್ನುವುದು ನಿಮಗೆ ಅಚ್ಚರಿಯೆನಿಸಿದರೂ ಸತ್ಯ.

59

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ 11 ಶತಕಗಳು ದಾಖಲಾಗಿವೆ. ಆದರೆ ಇದುವರೆಗೂ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕೇವಲ ಒಬ್ಬ ಭಾರತೀಯ ಮಾತ್ರ ಒಮ್ಮೆ ಶತಕ ಬಾರಿಸಿದ್ದಾರೆ.

69

ಹೌದು, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶತಕ ಸಿಡಿಸಿದ ಏಕೈಕ ಭಾರತೀಯ ಕ್ರಿಕೆಟಿಗನೆಂದರೆ ಅದು ಸುರೇಶ್ ರೈನಾ. 2010ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೈನಾ ಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಂಡರು.

79

ಈ ಮೂಲಕ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ಅಪರೂಪದ ದಾಖಲೆಗೂ ಮಿಸ್ಟರ್ ಐಪಿಎಲ್ ಖ್ಯಾತಿಯ ರೈನಾ ಪಾತ್ರರಾದರು. 

89

ಇನ್ನು ಯೂನಿವರ್ಸೆಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶತಕ ಸಿಡಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಗೇಲ್ ಟಿ20 ವಿಶ್ವಕಪ್‌ನಲ್ಲಿ ಎರಡು ಬಾರಿ ಶತಕ ಸಿಡಿಸಿದ ಏಕೈಕ ಬ್ಯಾಟರ್ ಕೂಡಾ ಹೌದು.

99

2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಯಾರಾದರೂ ಬ್ಯಾಟರ್ ಶತಕ ಸಿಡಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. ಭಾರತದ ಯಾವ ಬ್ಯಾಟರ್ ಶತಕ ಸಿಡಿಸಬಹುದು ಎನ್ನುವುದನ್ನು ಕಮೆಂಟ್ ಮಾಡಿ.

Read more Photos on
click me!

Recommended Stories