ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡವು ಇದುವರೆಗೂ ಭಾರತದಲ್ಲಿ 12 ಟೆಸ್ಟ್ ಸರಣಿಗಳನ್ನು ಸೋತಿದೆ: ಭಾರತದ ಮೇಲೆ 17 ಬಾರಿ ದಾಳಿ ಮಾಡಿದ ಮೊಹಮ್ಮದ್ ಘಜ್ನಿ ರೀತಿ, ನ್ಯೂಜಿಲ್ಯಾಂಡ್ ತಂಡವು 12 ಬಾರಿ ಭಾರತಕ್ಕೆ ಬಂದು ಸೋಲಿನೊಂದಿಗೆ ತನ್ನ ದೇಶಕ್ಕೆ ಮರಳಿದೆ. ಈಗ 13 ನೇ ಬಾರಿಗೆ ಭಾರತಕ್ಕೆ ಬಂದಿದೆ.
ಭಾರತ vs ನ್ಯೂಜಿಲ್ಯಾಂಡ್ ಟೆಸ್ಟ್ ಕ್ರಿಕೆಟ್
ಇದರಲ್ಲಿ, ಎರಡೂ ಪಂದ್ಯಗಳಲ್ಲಿ ಸೋತು ತಮ್ಮ ದೇಶಕ್ಕೆ ಮರಳಿದರು. ಈಗ 3 ವರ್ಷಗಳ ನಂತರ ಭಾರತಕ್ಕೆ ಬಂದಿರುವ ನ್ಯೂಜಿಲ್ಯಾಂಡ್ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿತ್ತು. ಎರಡನೇ ದಿನದಾಟದಲ್ಲಿ ಪಂದ್ಯ ಅಧಿಕೃತವಾಗಿ ಆರಂಭವಾಗಿದೆ.
ಟಾಸ್ ಗೆದ್ದ ಭಾರತ ತಂಡವು, ಕಿವೀಸ್ ವೇಗಿಗಳ ಮಾರಕ ದಾಳಿಗೆ ತತ್ತರಿಸಿ ಹೋಗಿದೆ. ಮ್ಯಾಟ್ ಹೆನ್ರಿ 5, ವಿಲಿತಮ್ ಓರ್ಕೆ 4 ಹಾಗೂ ಟಿಮ್ ಸೌಥಿ ಒಂದು ವಿಕೆಟ್ ಕಬಳಿಸಿದರು. ಪರಿಣಾಮ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 46 ರನ್‌ಗಳಿಗೆ ಸರ್ವಪತನ ಕಂಡಿತು.
8 ವರ್ಷಗಳ ನಂತರ 3 ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಎರಡನೇ ಬಾರಿಗೆ ಡಕ್ ಔಟ್ ಆಗಿ ಕಳಪೆ ಸಾಧನೆ ಮಾಡಿದರು.
ರೋಹಿತ್ ಶರ್ಮಾ, ಭಾರತ vs ನ್ಯೂಜಿಲ್ಯಾಂಡ್
ವಿರಾಟ್ ಕೊಹ್ಲಿ ಡಕ್ ಔಟ್. 2021 ರಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಡಕ್ ಔಟ್ ಆದರು.
ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಇಬ್ಬರೂ ತಲಾ 6 ಎಸೆತಗಳನ್ನು ಎದುರಿಸಿ ಒಂದೇ ಒಂದು ರನ್ ಗಳಿಸದೆ ಔಟಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಐವರು ಬ್ಯಾಟರ್‌ಗಳು ಶೂನ್ಯ ಸಂಪಾದನೆ ಮಾಡಿದರು.
ಇದೀಗ ಟೀಂ ಇಂಡಿಯಾ ಕೇವಲ 46 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ, ತವರಿನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು 50 ರನ್‌ಗಳೊಳಗೆ ಆಲೌಟ್ ಆದ ಮೊದಲ ತಂಡ ಎನ್ನುವ ಕುಖ್ಯಾತಿಗೆ ಭಾರತ ಪಾತ್ರವಾಗಿದೆ,
ಈ ಮೊದಲು ಟೀಂ ಇಂಡಿಯಾ 1987ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ದೆಹಲಿಯಲ್ಲಿ 75 ರನ್‌ಗಳಿಗೆ ಆಲೌಟ್ ಆಗಿದ್ದು ಕನಿಷ್ಠ ಸ್ಕೋರ್ ಎನಿಸಿಕೊಂಡಿತ್ತು. ಆ ದಾಖಲೆ ಇದೀಗ ಬ್ರೇಕ್ ಆಗಿದೆ.
ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೊಡ್ಡ ಮೊತ್ತ ಕಲೆಹಾಕುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಫಾರ್ಮ್‌ಗೆ ಮರಳುತ್ತಾರೆ ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ.