ಕೊಹ್ಲಿ ನಾಯಕತ್ವ ಬದಲಾವಣೆ: ಕೊನೆಗೂ ತುಟಿಬಿಚ್ಚಿದ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ..!

First Published | Sep 15, 2021, 1:27 PM IST

ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ಬಳಿಕ ವಿರಾಟ್ ಕೊಹ್ಲಿ ಸೀಮಿತ ಓವರ್‌ಗಳ ನಾಯಕತ್ವದಿಂದ ಕೆಳಗಿಳಿಯಲಿದ್ದಾರೆ. ಇದಾದ ಬಳಿಕ ಉಪನಾಯಕ ರೋಹಿತ್ ಶರ್ಮಾ ಸೀಮಿತ ಓವರ್‌ಗಳ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಕೊಹ್ಲಿ ಟೆಸ್ಟ್‌ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎನ್ನುವ ಒಂದು ವರದಿ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ ಈ ವಿಚಾರದ ಕುರಿತಂತೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತುಟಿಬಿಚ್ಚಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.  
 

ಐಸಿಸಿ ಟಿ20 ವಿಶ್ವಕಪ್‌ ಬಳಿಕವೂ ವಿರಾಟ್‌ ಕೊಹ್ಲಿಯೇ ಮೂರೂ ಮಾದರಿಯಲ್ಲಿ ಭಾರತ ತಂಡದ ನಾಯಕನಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ‍್ಯದರ್ಶಿ ಜಯ್‌ ಶಾ ಸ್ಪಷ್ಟಪಡಿಸಿದ್ದಾರೆ. ಕೊಹ್ಲಿಯನ್ನು ನಾವು ಬೆಂಬಲಿಸುತ್ತೇವೆ. ನಾಯಕತ್ವ ಬದಲಾವಣೆ ವಿಚಾರ ಕೇವಲ ವದಂತಿ ಎಂದು ಶಾ ತಿಳಿಸಿದ್ದಾರೆ.
 

ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಎಲ್ಲಿಯವರೆಗೆ ಉತ್ತಮ ಪ್ರದರ್ಶನ ತೋರುತ್ತದೆಯೋ ಅಲ್ಲಿಯವರೆಗೆ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಜಯ್‌ ಶಾ ಹೇಳಿದ್ದಾರೆ.

Tap to resize

ಟಿ20 ವಿಶ್ವಕಪ್‌ ಬಳಿಕ ಕೊಹ್ಲಿ ಬದಲಿಗೆ ರೋಹಿತ್‌ ಶರ್ಮಾ ಏಕದಿನ, ಟಿ20 ತಂಡದ ನಾಯಕರಾಗಿ ನೇಮಕಗೊಳ್ಳಲಿದ್ದಾರೆ. ಬ್ಯಾಟಿಂಗ್‌ ಕಡೆ ಹೆಚ್ಚು ಗಮನ ನೀಡಲು ಚಿಂತನೆ ನಡೆಸುತ್ತಿರುವ ವಿರಾಟ್‌, ಟೆಸ್ಟ್‌ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
 

ವಿರಾಟ್ ಕೊಹ್ಲಿಯ ಉತ್ತಮ ಪ್ರದರ್ಶನ ಹಾಗೂ ಚಾಣಾಕ್ಷ ನಾಯಕತ್ವದಿಂದಲೇ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1ರ ಮುನ್ನಡೆ ಸಾಧಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.

ಇತ್ತೀಚೆಗಿನ ವರ್ಷಗಳಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಯಾವುದೇ ಟಿ20 ಸರಣಿಯಲ್ಲಿ ಸೋಲಿನ ಕಹಿಯುಂಡಿಲ್ಲ. ಇಂಗ್ಲೆಂಡ್ ಎದುರು(3-2), ಆಸ್ಟ್ರೇಲಿಯಾ ಎದುರು(2-1), ಶ್ರೀಲಂಕಾ ಎದುರು(2-0) ಹಾಗೂ ನ್ಯೂಜಿಲೆಂಡ್ ಎದುರು(4-0) ಅಂತರದಲ್ಲಿ ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ.
 

ಇದೆಲ್ಲದರ ಹೊರತಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಯಾವುದೇ ಮಹತ್ವದ ಐಸಿಸಿ ಟ್ರೋಫಿ ಗೆಲ್ಲಲು ಯಶಸ್ವಿಯಾಗಿಲ್ಲ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ, ಏಕದಿನ ವಿಶ್ವಕಪ್ ಹಾಗೂ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಕೊಹ್ಲಿ ನೇತೃತ್ವದ ಭಾರತ ತಂಡ ನಿರಾಸೆ ಅನುಭವಿಸಿದೆ
 

ಹೀಗಾಗಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತ ಕ್ರಿಕೆಟ್‌ ತಂಡದ ಮೆಂಟರ್ ಆಗಿ ನೇಮಿಸಿದೆ.

Latest Videos

click me!