ಓವಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಸಮಬಲಗೊಳಿಸುವ ಗುರಿಯನ್ನು ಭಾರತ ಹೊಂದಿದೆ. ಅರ್ಶ್‌ದೀಪ್ ಸಿಂಗ್ ಪದಾರ್ಪಣೆ ಮಾಡುವ ಸಾಧ್ಯತೆಯಿದೆ, ಆದರೆ ಆಕಾಶ್ ದೀಪ್ ಜಸ್ಪ್ರೀತ್ ಬುಮ್ರಾ ಅವರ ಸ್ಥಾನವನ್ನು ತುಂಬಬಹುದು. ಭಾರತ ಸಂಭಾವ್ಯ ತಂಡ ಇಲ್ಲಿದೆ..
ಟೀಂ ಇಂಡಿಯಾ ಇಂದಿನಿಂದ ಲಂಡನ್‌ನ ಓವಲ್‌ನಲ್ಲಿ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಶುಭಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಓವಲ್‌ಗೆ 2-2 ಅಂತರದಲ್ಲಿ ಸರಣಿಯನ್ನು ಸಮಬಲಗೊಳಿಸುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.
26
ಎಡಗೈ ವೇಗಿ ಅರ್ಶದೀಪ್ ಸಿಂಗ್ ಓವಲ್‌ನಲ್ಲಿ ನಡೆಯಲಿರುವ ಸರಣಿ ನಿರ್ಣಾಯಕ ಪಂದ್ಯಕ್ಕೆ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.
36
ಜಸ್ಪ್ರೀತ್ ಬುಮ್ರಾ ಅವರನ್ನು ಓವಲ್ ನಿರ್ಣಾಯಕ ಪಂದ್ಯದಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ, ಬಿಸಿಸಿಐ ವೈದ್ಯಕೀಯ ತಂಡವು ಅವರಿಗೆ ವಿಶ್ರಾಂತಿ ಪಡೆಯಲು ಸಲಹೆ ನೀಡಿದೆ. ಹೀಗಾಗಿ ಆಕಾಶ್‌ದೀಪ್ ಅವರ ಸ್ಥಾನವನ್ನು ತುಂಬುವ ನಿರೀಕ್ಷೆಯಿದೆ.
ಕುಲ್ದೀಪ್ ಯಾದವ್ ಈ ಟೆಸ್ಟ್ ಸರಣಿಯಲ್ಲಿ ಇಲ್ಲಿಯವರೆಗೆ ನಾಲ್ಕು ಪಂದ್ಯಗಳಿಗೆ ಬೆಂಚ್ ಕಾಯಿಸುತ್ತಿದ್ದಾರೆ, ಮತ್ತು ಇಂಗ್ಲೆಂಡ್‌ನ ಟೆಸ್ಟ್ ಪ್ರವಾಸಕ್ಕೆ ಆಯ್ಕೆಯಾದರೂ ಸಹ ಆಡುವ ಹನ್ನೊಂದರಿಂದ ನಿರಂತರವಾಗಿ ಹೊರಗಿಡುವ ಬಗ್ಗೆ ಅನೇಕರು ಪ್ರಶ್ನಿಸಿದ್ದಾರೆ. ಹೀಗಾಗಿ ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್ ಬದಲಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
56
ಧ್ರುವ್ ಜುರೆಲ್ ಸರಣಿ ನಿರ್ಣಾಯಕ ಪಂದ್ಯಕ್ಕೆ ಆಡುವ ಹನ್ನೊಂದರಲ್ಲಿ ರಿಷಭ್ ಪಂತ್ ಅವರ ಸ್ಥಾನವನ್ನು ತುಂಬಲಿದ್ದಾರೆ. ಪಂತ್ ಮ್ಯಾಂಚೆಸ್ಟರ್ ಟೆಸ್ಟ್‌ನ ಮೊದಲನೇ ದಿನದಂದು ಕಾಲ್ಬೆರಳಿನ ಮುರಿತಕ್ಕೆ ಒಳಗಾದ ಕಾರಣ ಓವಲ್ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.
66
ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುಧರ್ಶನ್, ಶುಭಮನ್ ಗಿಲ್ (ನಾಯಕ), ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್/ಕುಲ್ದೀಪ್ ಯಾದವ್, ಆಕಾಶ್ ದೀಪ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.