IPL 2023: ಐಪಿಎಲ್‌ ಟೂರ್ನಿಗೂ ಮುನ್ನ 5 ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ಗೆ ಅತಿದೊಡ್ಡ ಶಾಕ್..!

Published : Feb 27, 2023, 04:31 PM IST

ಬೆಂಗಳೂರು(ಫೆ.27): ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಯು ಇದೀಗ ಆರನೇ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಹೀಗಿರುವಾಗಲೇ ಮುಂಬೈ ಇಂಡಿಯನ್ಸ್‌ಗೆ ಅತಿದೊಡ್ಡ ಶಾಕ್ ಎದುರಾಗಿದ್ದು, ತಂಡದ ತಾರಾ ಆಟಗಾರ, ಈ ಬಾರಿಯ ಐಪಿಎಲ್‌ನಿಂದ ಹೊರಬೀಳುವುದು ಬಹುತೇಕ ಖಚಿತ ಎನಿಸಿದೆ. ಅಷ್ಟಕ್ಕೂ ಯಾರು ಆ ಆಟಗಾರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.  

PREV
19
IPL 2023: ಐಪಿಎಲ್‌ ಟೂರ್ನಿಗೂ ಮುನ್ನ 5 ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ಗೆ ಅತಿದೊಡ್ಡ ಶಾಕ್..!

ಬಹುನಿರೀಕ್ಷಿತ 2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 31ರಿಂದ ಅಧಿಕೃತವಾಗಿ ಆರಂಭವಾಗಲಿದ್ದು, ಈಗಾಗಲೇ ಬಹುತೇಕ ತಂಡಗಳು ಸಿದ್ದತೆಯನ್ನು ಆರಂಭಿಸಿವೆ.
 

29

ಐಪಿಎಲ್ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿ ತಂಡವೆಂದು ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಯು ಕಳೆದ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ತೋರುವ ಮೂಲಕ ಕೇವಲ 4 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು.
 

39

ಇದೀಗ ಮಿನಿ ಹರಾಜಿನಲ್ಲಿ ಕೆಲವು ಆಟಗಾರರನ್ನು ಖರೀದಿಸುವ ಮೂಲಕ, ಮತ್ತೆ 16ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ ಎದುರಾಗಿದ್ದು, ಮುಂಬರುವ ಐಪಿಎಲ್‌ನಲ್ಲಿ ತಂಡದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ.

49

ಕಳೆದ ಕೆಲ ತಿಂಗಳುಗಳಿಂದಲೂ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಜಸ್ಪ್ರೀತ್ ಬುಮ್ರಾ, ಕಳೆದ ಸೆಪ್ಟೆಂಬರ್ 25ರಂದು ಆಸ್ಟ್ರೇಲಿಯಾ ವಿರುದ್ದ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಸೊಂಟ ನೋವಿನ ಸೆಳೆತದಿಂದಾಗಿ ತಂಡದಿಂದ ಹೊರಬಿದ್ದಿದ್ದರು.

59

ಇನ್ನು ಫಿಟ್ನೆಸ್‌ ಸಮಸ್ಯೆಯಿಂದಾಗಿಯೇ ಜಸ್ಪ್ರೀತ್ ಬುಮ್ರಾ, ಏಷ್ಯಾಕಪ್ ಕ್ರಿಕೆಟ್‌ ಟೂರ್ನಿ ಹಾಗೂ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಅಲಭ್ಯರಾಗಿದ್ದರು. ಇದು ತಂಡದ ಫಲಿತಾಂಶ ಮೇಲೆಯೂ ಋಣಾತ್ಮಕ ಪರಿಣಾಮ ಬೀರಿತ್ತು.

69

ಜಸ್ಪ್ರೀತ್ ಬುಮ್ರಾ, ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿ ಬಳಿಕ ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡ ಕೂಡಿಕೊಳ್ಳಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ನಡೆಸುವ ಫಿಟ್ನೆಸ್ ಪರೀಕ್ಷೆಯನ್ನು ಬುಮ್ರಾ ಪಾಸ್ ಮಾಡಲು ವಿಫಲವಾಗಿದ್ದಾರೆ ಎಂದು ವರದಿಯಾಗಿದೆ.
 

79

ಇನ್ನು ಮೂಲಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ, ಸಂಪೂರ್ಣ ಫಿಟ್ನೆಸ್ ಸಾಧಿಸಲು ಸಾಕಷ್ಟು ಸಮಯ ಬೇಕಾಗಿರುವುದರಿಂದ ಮುಂಬರುವ ಐಪಿಎಲ್ ಟೂರ್ನಿ ಹಾಗೂ ವಿಶ್ವ ಟೆಸ್ಟ್‌ ಚಾಂಪಿಯನ್‌ ಫೈನಲ್‌ಗೂ ಅನುಭವಿ ವೇಗಿ ತಂಡದ ಆಯ್ಕೆಗೆ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

89

ಟೀಂ ಇಂಡಿಯಾದ ಪ್ರಮುಖ ವೇಗಿಯಾಗಿರುವ ಬುಮ್ರಾ ಅವರನ್ನು ಮುಂಬರುವ ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ತವರಿನಲ್ಲಿಯೇ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಎದುರು ನೋಡುತ್ತಿದೆ. ಹೀಗಾಗಿ ತುರ್ತಾಗಿ ಅವರನ್ನು ಕಣಕ್ಕಿಳಿಸದಿರಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
 

99

ಒಂದು ವೇಳೆ ಜಸ್ಪ್ರೀತ್ ಬುಮ್ರಾ, ತಂಡದ ಆಯ್ಕೆಗೆ ಅಲಭ್ಯರಾದರೇ, ಮುಂಬೈ ಇಂಡಿಯನ್ಸ್ ತಂಡದ ಪಾಲಿಗೆ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಕೊಂಚ ಹಿನ್ನಡೆಯಾಗುವ ಸಾಧ್ಯತೆಯಿದೆ. ಬುಮ್ರಾ ಅನುಪಸ್ಥಿತಿಯಲ್ಲಿ ಜೋಪ್ರಾ ಆರ್ಚರ್, ಮುಂಬೈ ವೇಗದ ಬೌಲಿಂಗ್ ಪಡೆಯ ನೇತೃತ್ವ ವಹಿಸುವ ಸಾಧ್ಯತೆಯಿದೆ.
 

Read more Photos on
click me!

Recommended Stories